Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಪಾಕಿಸ್ತಾನದಿಂದ ನಡೆದ ಡ್ರೋನ್​ ದಾಳಿ ತಡೆದ ಭಾರತೀಯ ಸೇನೆ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಭಾರತದ ಅಂತಾರಾಷ್ಟ್ರೀಯ ಗಡಿ ಹಾಗೂ ಎಲ್​ಒಸಿಯಲ್ಲಿ ಪಾಕಿಸ್ತಾನದಿಂದ ನಡೆದ ಡ್ರೋನ್​ ದಾಳಿಯನ್ನು ಭಾರತೀಯ ಸೇನೆ ಅತ್ಯಂತ ಸಮರ್ಥವಾಗಿ ಹಿಮ್ಮೆಟ್ಟಿಸುವಲ್ಲಿ ಸಫಲವಾಗಿದೆ.


ಪಾಕಿಸ್ತಾನದ ಡ್ರೋನ್​ ದಾಳಿಯನ್ನು ಅತ್ಯಂತ ನಿಖರ ಹಾಗೂ ಯಶಸ್ವಿಯಾಗಿ ಹೊಡೆದುರುಳಿಸುವಲ್ಲಿ ದೇಶಿಯ ನಿರ್ಮಿತ ಆಕಾಶ್​​ ಪ್ರಮುಖ ಕಾರ್ಯ ನಿರ್ವಹಿಸಿದೆ.

ವಾಯು ರಕ್ಷಣಾ ಪಡೆಯ ಆಕಾಶ್​ ಕ್ಷಿಪಣಿ ಮೇಲ್ಮೆನಿಂದ ಆಕಾಶಕ್ಕೆ ಚಿಮ್ಮುವ ಸಾಮರ್ಥ್ಯ ಹೊಂದಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನವು ಗಡಿ ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಗಳಲ್ಲಿನ ಭಾರತದ ವಿವಿಧ ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಹಾರಿಸಿದ 50ಕ್ಕೂ ಹೆಚ್ಚು ಡ್ರೋನ್​ಗಳನ್ನ ಆಕಾಶ್​ ರಕ್ಷಣಾ ವ್ಯವಸ್ಥೆ ಯಶಸ್ವಿಯಾಗಿ ಹೊಡೆದುರುಳಿಸಿದೆ.

ಪಾಕಿಸ್ತಾನದ ಗಡಿಯಲ್ಲಿ ಭಾರತೀಯ ಸೇನೆ ಹಾಗೂ ವಾಯು ಸೇನೆ, ಶತ್ರುಗಳ ಕ್ಷಿಪಣಿ ತಡೆ ವ್ಯವಸ್ಥೆ ನಿಯೋಜಿಸಿದೆ. ಸ್ವದೇಶಿ ತಂತ್ರಜ್ಞಾನದಿಂದ ತಯಾರು ಮಾಡಲಾಗಿರುವ ಮೇಲ್ಮೈನಿಂದ ಆಕಾಶಕ್ಕೆ ಚಿಮ್ಮುವ ವಾಯು ಸೇನೆಯ ಆಕಾಶ್ ಕ್ಷಿಪಣಿ ಪಾಕಿಸ್ತಾನದ ದಾಳಿಯನ್ನು ಸಮರ್ಥವಾಗಿ ಹಾಗೂ ​ ಪರಿಣಾಕಾರಿಯಾಗಿ ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ ಎಂದು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಡಿಆರ್​ಡಿಒ ದೇಶೀಯವಾಗಿ ಅಭಿವೃದ್ಧಿಪಡಿಸಿದ ಆಕಾಶ್ ಕ್ಷಿಪಣಿ ವ್ಯವಸ್ಥೆ, ಮಧ್ಯಮ ಶ್ರೇಣಿಯ ನೆಲದಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿ ವ್ಯವಸ್ಥೆಯಾಗಿದ್ದು, ಮೊಬೈಲ್, ಅರೆ ಮೊಬೈಲ್ ಮತ್ತು ಸ್ಥಿರ ದುರ್ಬಲ ಪಡೆಗಳಿಂದ ಸಿಡಿಯುವ ಕ್ಷಿಪಣಿಗಳು ಮತ್ತು ಭಾರತದ ವಿವಿಧ ಪ್ರದೇಶಗಳ ಮೇಲೆ ಬರುವ ಯಾವುದೇ ವಾಯು ಬೆದರಿಕೆಗಳ ವಿರುದ್ಧ ರಕ್ಷಣೆ ಒದಗಿಸುತ್ತದೆ.

ನೈಜ ಸಮಯದಲ್ಲಿ ಮಲ್ಟಿ ಸೆನ್ಸಾರ್​ ಡೇಟಾ ಸಂಸ್ಕರಣೆ ಮಾಡುವ ಮತ್ತು ಬೆದರಿಕೆಗಳನ್ನು ಮೌಲ್ಯಮಾಪನ ನಡೆಸುವ ಮೂಲಕ ಯಾವುದೇ ದಿಕ್ಕಿನಿಂದ ಬರುವ ಕ್ಷಿಪಣಿಗಳು, ಡ್ರೋನ್​ ಗಳನ್ನು ಎಲ್ಲ ದಿಕ್ಕುಗಳಿಂದ ಹಿಮ್ಮೆಟ್ಟಿಸುವ ಸಾಮರ್ಥ್ಯವನ್ನು ಆಕಾಶ್​ ಹೊಂದಿದೆ. ಈ ಆಕಾಶ್​ ರಕ್ಷಣಾ ವ್ಯವಸ್ಥೆಯು ವೇಗದ ಗುರಿ ಪತ್ತೆ ಮಾಡಿ ಅದೇ ವೇಗದಲ್ಲಿ ವಿರೋಧಿ ಪಾಳೆಯದ ಯಾವುದೇ ದಾಳಿಯನ್ನು ತಡೆಯುವ ಕೆಲಸ ಮಾಡುತ್ತದೆ. ಕಮಾಂಡ್ ಮಾರ್ಗದರ್ಶನಗಳನ್ನು ಅನುಸರಿಸಿ ಈ ಕ್ಷಿಪಣಿ ಕಾರ್ಯಪ್ರವೃತ್ತವಾಗಲಿದೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ