LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೌಂಟ್ ಎವರೆಸ್ಟ್ ಇಳಿಯುವಾಗ ಭಾರತೀಯ ಪರ್ವತಾರೋಹಿ ಮೃತ್ಯು

ಕಠ್ಮಂಡು : ವಿಶ್ವದ ಅತಿ ಎತ್ತರದ ಮೌಂಟ್ ಎವರೆಸ್ಟ್ ಏರಿದ ಭಾರತೀಯ ಪರ್ವತಾರೋಹಿಯೊಬ್ಬರು ಇಳಿಯುವಾಗ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪಶ್ಚಿಮ ಬಂಗಾಳದ ಸುಬ್ರತಾ ಘೋಷ್(45) ಮೃತ ಪರ್ವತಾರೋಹಿ.

ಸುಬ್ರತಾ ಘೋಷ್ ಅವರು 29,032 ಅಡಿ ಎತ್ತರದ ಮೌಂಟ್ ಎವರೆಸ್ಟ್ ಶಿಖರವನ್ನು ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ತಲುಪಿದರು. ಬಳಿಕ ಪರ್ವತ ಇಳಿಯುವಾಗ ಅವರಿಗೆ ಇದ್ದಕ್ಕಿದ್ದಂತೆ ಆಯಾಸ ಮತ್ತು ಹೈಟ್ ಫೋಬಿಯಾ ಕಾಣಿಸಿಕೊಂಡಿದೆ. ಅವರು ಹಿಲರಿ ಸ್ಟೆಪ್ಸ್ ಬಳಿ ಮೃತಪಟ್ಟಿದ್ದಾರೆ ಎಂದು ಪರ್ವತಾರೋಹಣ ಆಯೋಜಕರು ಶುಕ್ರವಾರ ಮಾಹಿತಿ ನೀಡಿದ್ದಾರೆ.

ಹೆಚ್ಚು ಆಯಾಸವಾದ ಬಳಿಕ ಘೋಷ್ ಕೆಳಗೆ ಇಳಿಯಲು ನಿರಾಕರಿಸಿದರು. ಅವರ ಮಾರ್ಗದರ್ಶಿ ಅವರನ್ನು ಕೆಳಗೆ ಕರೆತರಲು ಪ್ರಯತ್ನಿಸಿದರು. ಆದರೆ ಘೋಷ್‌ರಿಂದ ಇಳಿಯಲು ಸಾಧ್ಯವಾಗಲಿಲ್ಲ. ಆ ಬಳಿಕ ಮಾರ್ಗದರ್ಶಿ ಗುರುವಾರ ರಾತ್ರಿ ಒಂಟಿಯಾಗಿ ಕ್ಯಾಂಪ್‌ಗೆ ಹಿಂತಿರುಗಿ ಮಾಹಿತಿ ನೀಡಿದರು ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026