Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ?

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"
ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ? ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಆರ್ ಎಸ್ಎಸ್ ಪ್ರಾರ್ಥನಾ ಗೀತೆಯ ಮೊದಲನೆಯ ಸಾಲಿನ ಸಾರಾಂಶ ಇಷ್ಟೇ. "ನಮ್ಮನ್ನೆಲ್ಲ ವಾತ್ಸಲ್ಯದಿಂದ ಸಾಕುತ್ತಿರುವ ಮಾತೃ ಸಮಾನಳಾದ ತಾಯಿ ಭಾರತಾಂಬೆಗೆ ನನ್ನ ನಮಸ್ಕಾರಗಳು."

ಜನ್ಮ ಕೊಟ್ಟ ಮಾತೃಭೂಮಿ ಬಗ್ಗೆ ಈ ಭಾವನೆ ಇಟ್ಟುಕೊಳ್ಳುವುದು ತಪ್ಪೇ? ತಾಯ್ನೆಲಕ್ಕೆ ನಮಸ್ಕಾರ ಮಾಡುವುದೇ ತಪ್ಪೇ? ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಒಂದು ಕಡೆ ವಿಧಾನಸೌಧದಲ್ಲಿ "ಪಾಕಿಸ್ತಾನ ಜಿಂದಾಬಾದ್" ಎಂದು ಘೋಷಣೆ ಕೂಗಿದವರನ್ನ ಸಮರ್ಥನೆ ಮಾಡಿಕೊಳ್ಳುವ ಕಾಂಗ್ರೆಸ್ ಪಕ್ಷ, ಮತ್ತೊಂದು ಕಡೆ ತಾಯಿ ಭಾರತಾಂಬೆಗೆ ನಮಸ್ಕರಿಸುವವರನ್ನ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತದೆ. ಇದನ್ನು ದೇಶದ್ರೋಹಿ ಮನಸ್ಥಿತಿ ಅನ್ನದೇ ಇನ್ನೇನನ್ನಲು ಸಾಧ್ಯ?

 ಇಷ್ಟಕ್ಕೂ ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು? ಸೋನಿಯಾ ಗಾಂಧಿ ಅವರಾ? ರಾಹುಲ್ ಗಾಂಧಿ ಅವರಾ? ಕೆ.ಸಿ.ವೇಣುಗೋಪಾಲ್ ಅವರಾ? ಸುರ್ಜೆವಾಲಾ ಅವರಾ? ಅಥವಾ ಬಿ.ಕೆ ಹರಿಪ್ರಸಾದ್ ಅವರು ಹೇಳಿದ್ದಕ್ಕೆ  ಕ್ಷಮೆ ಕೇಳಿದರಾ? ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು ಎಂದು ಅವರು ತಾಕೀತು ಮಾಡಿದ್ದಾರೆ.

"He who loves not his country can love nothing". ಅಂದರೆ "ತನ್ನ ಮಾತೃಭೂಮಿಯನ್ನು ಪ್ರೀತಿಸದವನು ಏನನ್ನೂ ಪ್ರೀತಿಸಲಾರ" ಎನ್ನುವ ಮಾತಿದೆ.

ಆದರೆ ಕಾಂಗ್ರೆಸ್ ಪಕ್ಷದಲ್ಲಿ "ಕುರ್ಚಿಯ ಮೇಲೆ ಪ್ರೀತಿ ಇದ್ದರೆ ದೇಶಪ್ರೇಮವನ್ನು ಬಿಡಬೇಕು" ಎನ್ನುವ ಪರಿಸ್ಥಿತಿ ಇದೆ. ಅಧಿಕಾರದ ಮೇಲಿನ ವ್ಯಾಮೋಹಕ್ಕೆ, ಜನ್ಮ ಕೊಟ್ಟ ತಾಯ್ನೆಲವನ್ನೇ ಬಿಟ್ಟುಕೊಡುವ so-called ನಾಯಕರು ನಾಡಿನ ಮುಖ್ಯಮಂತ್ರಿಗಳಾಗಲು ಹೊರಟಿರುವುದು ನಮ್ಮ ನಾಡಿನ ಸದ್ಯದ ದೊಡ್ಡ ದುರಂತ. ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ ಎಂದು ಅಶೋಕ್ ಟ್ಯಾಂಗ್ ಲೈನ್ ಹಾಕಿ ಬೇಸರ ವ್ಯಕ್ತಪಡಿಸಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ