LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಶ್ವದ ಅತ್ಯಂತ ದುಬಾರಿ ನಿಸಾರ್‌ ಉಪಗ್ರಹ ಇಂದು ಆಕಾಶಕ್ಕೆ- ಭಾರತ-ಅಮೆರಿಕದ ಮಹತ್ವದ ಹೆಜ್ಜೆ

ಬೆಂಗಳೂರು/ವಾಷಿಂಗ್ಟನ್‌ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತು ಅಮೆರಿಕದ ನಾಸಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ನಾಸಾ – ಇಸ್ರೋ ಸಿಂಥೆಟಿಕ್ ಅಪರ್ಚರ್ ರೇಡಾರ್ ನಿಸಾರ್ ಉಪಗ್ರಹ ಇಂದು ಶ್ರೀಹರಿಕೋಟಾದಿಂದ ಉಡಾವಣೆಗೆ ಸಜ್ಜಾಗಿದೆ.

ʻನಿಸಾರ್ʼ ಭಾರತೀಯ ಕಾಲಮಾನದ ಪ್ರಕಾರ ಇಂದು ಸಂಜೆ 5:40ಕ್ಕೆ ಇಸ್ರೋದ GSLV-F16 ಉಪಗ್ರಹದ ಬೆನ್ನೇರಿ ಬಾಹ್ಯಾಕಾಶಕ್ಕೆ ತೆರಳಲಿದೆ. ಈ ಉಪಗ್ರಹವು ಶ್ರೀಹರಿಕೋಟದಿಂದ ಉಡಾವಣೆ ಆಗುತ್ತಿರುವ 102ನೇ ಉಪಗ್ರಹವಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ವಿಕೋಪ ನಿರ್ವಹಣೆ ಮತ್ತು ಕೃಷಿ ಕ್ಷೇತ್ರಗಳಿಗೆ ಅಮೂಲ್ಯವಾದ ಮಾಹಿತಿ ಒದಗಿಸಲಿದೆ. ಅಲ್ಲದೇ ನಿರ್ಗಲ್ಲು, ಹಿಮಫಲಕಗಳ ಬದಲಾವಣೆ, ಮಣ್ಣಿನಲ್ಲಿರುವ ತೇವಾಂಶ, ಪ್ರವಾಹ, ಅರಣ್ಯ ನಾಶ, ಬೆಳೆಯ ಆರೋಗ್ಯ, ನಗರೀಕರಣ ಮತ್ತು ಸೌಕರ್ಯಗಳ ಬದಲಾವಣೆ ಮುಂತಾದ ವಿಷಯಗಳನ್ನು ಒದಗಿಸಲಿದೆ. ಇದು ಭಾರತ-ಅಮೆರಿಕ ಸಹಭಾಗಿತ್ವದಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ.

ಕಕ್ಷೆಯತ್ತ ರಾಕೆಟ್‌ನ ಪ್ರಯಾಣ ಬಹುತೇಕ 19 ನಿಮಿಷ ತೆಗೆದುಕೊಳ್ಳಲಿದೆ. ಆ ಬಳಿಕ, ನಿಸಾರ್ ಉಪಗ್ರಹವನ್ನು ಅದರ ಉದ್ದೇಶಿತ-747 ಸನ್ ಸಿಂಕ್ರೊನಸ್ ಕಕ್ಷೆಯಲ್ಲಿ ಅಳವಡಿಸಲಾಗುತ್ತದೆ.

ಇನ್ನೂ ನಿಸಾರ್‌ ಭೂಸರ್ವೇಕ್ಷಣಾ ಉಪಗ್ರಹಕ್ಕೆ 13,000 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ವಿಶ್ವದ ಅತ್ಯಂತ ದುಬಾರಿ ಕಣ್ಗಾವಲು ಉಪಗ್ರಹವಾಗಿ ಗುರುತಿಸಿಕೊಂಡಿದೆ. ಅಲ್ಲದೇ ನಿಸಾರ್‌ ಉಪಗ್ರಹವು ಒಂದು ಬಾರಿಗೆ 242 ಕಿಮೀ ಭೂವಿಸ್ತೀರ್ಣವನ್ನು ನೋಡುವ ಸಾಮರ್ಥ್ಯ ಹೊಂದಿದೆ. 97 ನಿಮಿಷಕ್ಕೆ ಭೂಮಿಗೆ ಒಂದು ಸುತ್ತು ಬರಲಿದ್ದು, 12 ದಿನಗಳಿಗೆ ಒಮ್ಮೆ ಇಡೀ ಭೂಮಿ ಸುತ್ತಲಿದೆ. ಮುಖ್ಯವಾಗಿ ನಿಸಾರ್‌ ಉಪಗ್ರಹವು ಕಳುಹಿಸುವ ಎಲ್ಲ ಮಾಹಿತಿಗಳು ಹಾಗೂ ದತ್ತಾಂಶಗಳನ್ನು ಉಚಿತವಾಗಿ ಎಲ್ಲಾ ದೇಶಗಳು ಅಧ್ಯಯನಕ್ಕೆ ಬಳಕೆ ಮಾಡಿಕೊಳ್ಳಬಹುದಾಗಿದೆ.

ನಿಸಾರ್ ಉಪಗ್ರಹ ಭೂಮಿಯಿಂದ 747 ಕಿಲೋಮೀಟರ್ ಎತ್ತರದಲ್ಲಿರುವ ತನ್ನ ಉದ್ದೇಶಿತ ಕಕ್ಷೆಯನ್ನು ತಲುಪಿದ ಬಳಿಕ ಅದರ ನೈಜ ಕಾರ್ಯ ಆರಂಭಗೊಳ್ಳುತ್ತದೆ. ಕಕ್ಷೆಗೆ ಸೇರಿದ ಬಳಿಕ, ಉಪಗ್ರಹದ 90 ದಿನಗಳ ಅವಧಿಯ, ಮುಖ್ಯವಾದ ‘ಕಮಿಷನಿಂಗ್ ಹಂತ’ ಆರಂಭಗೊಳ್ಳುತ್ತದೆ. ಇದನ್ನು ‘ಇನ್ ಆರ್ಬಿಟ್ ಚೆಕೌಟ್’ ಎಂದೂ ಕರೆಯಲಾಗಿದ್ದು, ಈ ಅವಧಿಯಲ್ಲಿ ಉಪಗ್ರಹವನ್ನು ಅದರ ವೈಜ್ಞಾನಿಕ ಗುರಿಗಳಿಗೆ ಸೂಕ್ತವಾಗಿ ಸಿದ್ಧಪಡಿಸಲಾಗುತ್ತದೆ. ಅಂದರೆ, ಉಪಗ್ರಹ ಇಂದು ಸಂಜೆ ಉಡಾವಣೆಗೊಂಡರೂ, ನಿಸಾರ್ ಅದರ ಸಂಪೂರ್ಣ ವೈಜ್ಞಾನಿಕ ಕಾರ್ಯಾಚರಣೆಗಳಲ್ಲಿ ತೊಡಗಲು ಭಾರತ ಅಕ್ಟೋಬರ್ ತಿಂಗಳ ಕೊನೆಯ ಭಾಗದ ತನಕ ಕಾಯಬೇಕಾಗುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026