Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಭಾರತ–ಅಮೆರಿಕಾ ವ್ಯಾಪಾರ ಒಪ್ಪಂದ ಬಹುತೇಕ ಪೂರ್ಣ: 99% ಕಾರ್ಯ ಮುಗಿದಿದೆ

ನವದೆಹಲಿ/ವಾಷಿಂಗ್ಟನ್‌: ಭಾರತ–ಅಮೆರಿಕಾ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ಮಾತುಕತೆಗಳು ಬಹುತೇಕ ಅಂತಿಮ ಹಂತ ತಲುಪಿದ್ದು, ಸುಮಾರು 99% ಕೆಲಸ ಪೂರ್ಣಗೊಂಡಿದೆ ಎಂದು ಯುಎಸ್ ರಾಯಭಾರಿ ಸೆರ್ಗಿಯೊ ಗೋರ್ ತಿಳಿಸಿದ್ದಾರೆ. ಶೀಘ್ರದಲ್ಲೇ ಅಂತಿಮ ಒಪ್ಪಂದಕ್ಕೆ ಎರಡೂ ರಾಷ್ಟ್ರಗಳು ಸಹಿ ಹಾಕುವ ಸಾಧ್ಯತೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

IIT ದೆಹಲಿಯಲ್ಲಿ ನಡೆದ ʻಯುಎಸ್ ಇಂಡಿಯಾ ಟ್ರಸ್ಟ್ ಇನಿಶಿಯೇಟಿವ್: ಅಡ್ವಾನ್ಸಿಂಗ್ ಪಾರ್ಟ್‌ನರ್‌ಶಿಪ್ ಇನ್ ರಿಸರ್ಚ್ ಅಂಡ್ ಇನ್ನೋವೇಶನ್ʼ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ–ಅಮೆರಿಕಾ ನಡುವೆ ವ್ಯಾಪಾರ ಒಪ್ಪಂದದ ಚರ್ಚೆಗಳು ಅಂತಿಮ ಹಂತದಲ್ಲಿವೆ ಎಂದು ಹೇಳಿದರು.

ಭಾರತ ಮತ್ತು ಅಮೆರಿಕಾ ನಡುವಿನ ಮಾತುಕತೆಗಳಲ್ಲಿ ಸುಮಾರು 99% ಪ್ರಗತಿ ಸಾಧನೆಯಾಗಿದ್ದು, ಕೇವಲ 1% ವಿಷಯ ಮಾತ್ರ ಬಾಕಿಯಿದೆ. ಉಳಿದ ಅಂಶಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ ಒಪ್ಪಂದಕ್ಕೆ ಅಂತಿಮ ರೂಪ ನೀಡಲಾಗುವುದು ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ಒಪ್ಪಂದದ ಉಳಿದ ವಿವರಗಳನ್ನು ಅಂತಿಮಗೊಳಿಸಲು ಭಾರತೀಯ ತಂಡ ಇತ್ತೀಚೆಗೆ ವಾಷಿಂಗ್ಟನ್‌ಗೆ ಭೇಟಿ ನೀಡಿತ್ತು. ಇದೇ ವೇಳೆ ಮುಖ್ಯ ವ್ಯಾಪಾರ ಸಮಾಲೋಚಕರನ್ನು ಒಳಗೊಂಡ ಅಮೆರಿಕಾ ನಿಯೋಗ ಜೂನ್ 1ರಿಂದ 4ರವರೆಗೆ ಭಾರತಕ್ಕೆ ಆಗಮಿಸಿ ಮುಂದಿನ ಸುತ್ತಿನ ಚರ್ಚೆಗಳನ್ನು ನಡೆಸಲಿದೆ ಎಂದು ತಿಳಿಸಿದರು.

ಮುಂದಿನ ಹಂತದ ಮಾತುಕತೆಗಳಲ್ಲಿ ಎರಡೂ ದೇಶಗಳು ಮಹತ್ವದ ಪ್ರಗತಿ ಸಾಧಿಸುವ ನಿರೀಕ್ಷೆಯಿದೆ. ಇದು ಕಳೆದ ಏಪ್ರಿಲ್‌ನಲ್ಲಿ ವಾಷಿಂಗ್ಟನ್‌ನಲ್ಲಿ ನಡೆದ ಉಭಯ ರಾಷ್ಟ್ರಗಳ ಅಧಿಕಾರಿಗಳ ಚರ್ಚೆಗಳ ಮುಂದುವರಿದ ಭಾಗವಾಗಿದೆ.

ಇದೇ ವೇಳೆ ಭಾರತ–ಅಮೆರಿಕಾ ಆರ್ಥಿಕ ಸಂಬಂಧಗಳ ಬೆಳವಣಿಗೆಯನ್ನು ಅವರು ಉಲ್ಲೇಖಿಸಿದರು. ಕಳೆದ ಎರಡು ದಶಕಗಳಲ್ಲಿ ಸರಕು ಮತ್ತು ಸೇವೆಗಳ ದ್ವಿಪಕ್ಷೀಯ ವ್ಯಾಪಾರವು ಸುಮಾರು 20 ಶತಕೋಟಿ ಡಾಲರ್‌ನಿಂದ 220 ಶತಕೋಟಿ ಡಾಲರ್‌ಗಿಂತ ಹೆಚ್ಚು ಹೆಚ್ಚಾಗಿದೆ ಎಂದು ಅವರು ಹೇಳಿದರು. ಈ ಬೆಳವಣಿಗೆ ಎರಡೂ ದೇಶಗಳ ಆರ್ಥಿಕ ಬಾಂಧವ್ಯವನ್ನು ಬಲಪಡಿಸಿರುವುದನ್ನು ಸೂಚಿಸುತ್ತದೆ ಎಂದು ಅವರು ಶ್ಲಾಘಿಸಿದರು.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸರ್ಕಾರವು ದೇಶದ ವ್ಯವಹಾರಗಳು ಮತ್ತು ಕಾರ್ಮಿಕರಿಗೆ ಹೆಚ್ಚಿನ ಅವಕಾಶಗಳನ್ನು ಒದಗಿಸುವ ಉದ್ದೇಶದಿಂದ ವ್ಯಾಪಾರ ವಿಸ್ತರಣೆಗೆ ಆದ್ಯತೆ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತವನ್ನು ಪ್ರಮುಖ ವ್ಯಾಪಾರ ಪಾಲುದಾರರಾಗಿ ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ