Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಇಂದಿರಾ ಕ್ಯಾಂಟೀನ್ ಪುನರಾರಂಭಕ್ಕೆ ಸಿದ್ಧತೆ

ಸುದ್ದಿಮೂಲ ವಾರ್ತೆ

ಬೆಂಗಳೂರು , ಮೇ. 24: ಸಿದ್ದರಾಮಯ್ಯ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತಿದ್ದಂತೆ ಬಡವರ ಪರ ಇದ್ದ ಯೋಜನೆಗಳಿಗೆ ಮತ್ತೆ ಜೀವ ಸಿಕ್ಕಿದೆ. ಈ ಪೈಕಿ ಇಂದಿರಾ ಕ್ಯಾಂಟೀನ್‍ಗೂ ಸಿದ್ದರಾಮಯ್ಯ ಸರ್ಕಾರದಿಂದ ಮರುಜೀವ ಸಿಕ್ಕಿದ್ದು, ಬಡವರ 5 ಸ್ಟಾರ್ ಹೋಟೆಲ್ ‘ಇಂದಿರಾ ಕ್ಯಾಂಟೀನ್’ಗಳಿಗೆ ರಾಜ್ಯಾದ್ಯಂತ ಹಳೇ ರೂಪ ನೀಡಲು ಸಜ್ಜಾಗಿದೆ. ಈ ಬಗ್ಗೆ ಕಾಂಗ್ರೆಸ್ ಅಕೌಂಟ್ ಟ್ವೀಟ್ ಮಾಡಿ ಸದ್ದು ಮಾಡಿದೆ.

ಇಂದಿರಾ ಕ್ಯಾಂಟೀನ್ ಅನ್ನೋದು ಸಿದ್ದರಾಮಯ್ಯ ಸರ್ಕಾರದ ಅತ್ಯಂತ ಮಹತ್ವದ ಯೋಜನೆ ಆಗಿತ್ತು. ಈ ಯೋಜನೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಸಿದು ಬಂದವರ ಹೊಟ್ಟೆ ತುಂಬಿಸುತ್ತಿತ್ತು. ಅದರಲ್ಲೂ ಬಡವರ ಪಾಲಿಗೆ ಇಂದಿರಾ ಕ್ಯಾಂಟೀನ್ ಅಕ್ಷಯಪಾತ್ರೆ ಆಗಿತ್ತು. ಆದರೆ ಕಳೆದ ಕೆಲ ವರ್ಷದಿಂದ ಬಿಜೆಪಿ ಸರ್ಕಾರ ‘ಇಂದಿರಾ ಕ್ಯಾಂಟೀನ್’ ಮುಚ್ಚುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿತ್ತು. ಆದರೆ ಈಗ 135 ಸ್ಥಾನದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು ಈ ಹಿಂದಿನ ತನ್ನ ಜನಪ್ರಿಯ ಯೋಜನೆಗೆ ಹೊಸ ಟಚ್ ನೀಡಲಿದೆಯಂತೆ.

ರಾಜ್ಯದಲ್ಲಿ ಬಡವರಿಗಾಗಿ ಅನ್ನಭಾಗ್ಯ ಸೇರಿದಂತೆ ಹಲವು ಯೋಜನೆಗಳನ್ನ ಹಿಂದೆ ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿತ್ತು. 2013ರಿಂದ 2018ರ ತನಕ ಆಡಳಿತ ನಡೆಸಿದ್ದ ಸಿದ್ದರಾಮಯ್ಯ ಅವರು ಇದೇ ರೀತಿ ಹಲವು ಯೋಜನೆ ಜಾರಿಗೆ ತಂದಿದ್ದರು. ತಮಿಳುನಾಡಿನ ‘ಅಮ್ಮ ಕ್ಯಾಂಟೀನ್’ಗಳ ರೀತಿಯಲ್ಲಿ 2017ರಲ್ಲಿ ಬೆಂಗಳೂರು ಸೇರಿ ಜಿಲ್ಲಾ ಕೇಂದ್ರಗಳಲ್ಲಿ 175 ವಾರ್ಡ್‍ಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಾಗಿತ್ತು. ರಾಜ್ಯಾದ್ಯಂತ ಹಲವು ಜಿಲ್ಲಾ ಕೇಂದ್ರ, ಪಟ್ಟಣಗಳಲ್ಲೂ ಇಂದಿರಾ ಕ್ಯಾಂಟಿನ್‍ಗಳು ಕಾರ್ಯನಿರ್ವಹಿಸುತ್ತಿದ್ದವು.

ಅಂದಹಾಗೆ ಕಾಂಗ್ರೆಸ್ ಈ ಆರೋಪವನ್ನ ಮೊದಲಿನಿಂದಲೂ ಮಾಡುತ್ತಲೇ ಬಂದಿದೆ. 2019 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕ್ಯಾಂಟೀನ್‍ಗಳು ಹೊಳಪು ಕಳೆದುಕೊಳ್ಳಲು ಪ್ರಾರಂಭಿಸಿದವು. ಗುತ್ತಿಗೆದಾರರಿಗೆ ಪಾವತಿ ವಿಳಂಬ, ನಗರ ಸ್ಥಳೀಯ ಸಂಸ್ಥೆಗಳ ಹಂಚಿಕೆಯಲ್ಲಿ ಗಣನೀಯ ಕಡಿತ ಮತ್ತು ರಾಜ್ಯ ಸರ್ಕಾರ ಕಡಿತ ಮಾಡಿದ್ದ ಅನುದಾನ ಕ್ಯಾಂಟೀನ್‍ಗಳ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು ಎಂಬ ಆರೋಪವಿತ್ತು. ಆದರೆ ಈಗ ಮತ್ತೊಮ್ಮೆ ಸಿಎಂ ಆಗಿರುವ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್‍ಗಳಿಗೆ ಮರುಜೀವ ತುಂಬಲು ಸಜ್ಜಾಗಿದ್ದಾರೆ.

ಇನ್ನು ಈ ಕುರಿತು ಕರ್ನಾಟಕ ಕಾಂಗ್ರೆಸ್ ಘಟಕ ಟ್ವೀಟ್ ಮಾಡಿದ್ದು, ‘ಕಾಯಕಯೋಗಿ ಬಸವಣ್ಣನವರ ದಾಸೋಹ ತತ್ವದಲ್ಲಿ ನಂಬಿಕೆ ಇಟ್ಟಿರುವ ಕಾಂಗ್ರೆಸ್ ಸರ್ಕಾರ ಬಡಜನರ ‘ಇಂದಿರಾ ಕ್ಯಾಂಟೀನ್’ಗಳನ್ನು ಪುನಶ್ಚೇತನಗೊಳಿಸಲಿದೆ. ಬಿಜೆಪಿ ಸರ್ಕಾರ ಮಾಡಿದ ಅವಾಂತರಗಳನ್ನು ಸರಿಪಡಿಸಿ ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್‍ಗಳಲ್ಲಿ ಅತ್ಯುತ್ತಮ ಆಹಾರ ದೊರಕುವಂತೆ ಕ್ರಮ ಕೈಗೊಳ್ಳಲಾಗುವುದು. ಎಂದಿದೆ. ಈ ಮೂಲಕ ಹಿಂದಿನ ಬಿಜೆಪಿ ಸರ್ಕಾರಕ್ಕೆ ‘ಇಂದಿರಾ ಕ್ಯಾಂಟೀನ್’ ವಿಚಾರದಲ್ಲಿ ಕಾಂಗ್ರೆಸ್ ಸವಾಲು ಹಾಕಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ