Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕೇರಳದಲ್ಲಿ ನಿಫಾ ಸೋಂಕು ದೃಢ; ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ

ಕೋಝಿಕ್ಕೋಡ್, ಜೂ. 11 : ಕೇರಳದ ಕೋಝಿಕ್ಕೋಡ್ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬರಿಗೆ ನಿಫಾ ವೈರಸ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಸೋಂಕು ಹರಡುವುದನ್ನು ತಡೆಯಲು ತುರ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಂಪರ್ಕಿತರ ಪತ್ತೆ ಕಾರ್ಯವೂ ಆರಂಭವಾಗಿದೆ.

ಫೆರೋಕ್‌ ಮೂಲದ ಉದ್ಯಮಿಯೊಬ್ಬರಲ್ಲಿ ನಿಫಾ ವೈರಸ್ ಸೋಂಕಿನ ಲಕ್ಷಣಗಳು ಕಂಡುಬಂದಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿನ ಅಂತಿಮ ದೃಢೀಕರಣಕ್ಕಾಗಿ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದ್ದು, ಅಧಿಕೃತ ವರದಿಯನ್ನು ನಿರೀಕ್ಷಿಸಲಾಗುತ್ತಿದೆ.

ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದ ಕುಟುಂಬ ಸದಸ್ಯರು, ಆರೋಗ್ಯ ಸಿಬ್ಬಂದಿ ಹಾಗೂ ಇತರರನ್ನು ಗುರುತಿಸುವ ಕಾರ್ಯಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ. ಸೋಂಕು ಹರಡುವ ಅಪಾಯವನ್ನು ಗಮನದಲ್ಲಿಟ್ಟುಕೊಂಡು ಸಂಪರ್ಕಿತರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿದೆ.

ಆರೋಗ್ಯ ಸಚಿವ ಕೆ. ಮುರಳೀಧರನ್ ಮಾತನಾಡಿ, ಸೋಂಕಿತನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ. ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ, ಚಿಕಿತ್ಸಾ ಸೌಲಭ್ಯ ಹಾಗೂ ಪ್ರತ್ಯೇಕ ವಾರ್ಡ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದ್ದಾರೆ.

ನಿಫಾ ವೈರಸ್ ಸಾಮಾನ್ಯವಾಗಿ ಬಾವಲಿಗಳಿಂದ ಹರಡುವ ಅಪಾಯಕಾರಿ ಸೋಂಕಾಗಿದ್ದು, ಕೆಲ ಸಂದರ್ಭಗಳಲ್ಲಿ ಮನುಷ್ಯರಿಂದ ಮನುಷ್ಯರಿಗೂ ಹರಡುವ ಸಾಧ್ಯತೆ ಇರುತ್ತದೆ. ಕೇರಳದಲ್ಲಿ ಈ ಹಿಂದೆಯೂ ಹಲವು ಬಾರಿ ನಿಫಾ ಸೋಂಕು ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆ ಪರಿಣಾಮಕಾರಿ ನಿಯಂತ್ರಣ ಕ್ರಮಗಳ ಮೂಲಕ ಪರಿಸ್ಥಿತಿಯನ್ನು ನಿಭಾಯಿಸಿತ್ತು.

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ಆರೋಗ್ಯ ಸಮಸ್ಯೆಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ