E-PAPER
17 Nov 2026, 05:22:15 PM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಇನ್ನೈದು ವರ್ಷದಲ್ಲಿ ರಾಜಹಂಸಗಡ ಉತ್ಕೃಷ್ಟ ಪ್ರವಾಸಿ ಕೇಂದ್ರವಾಗಲಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ-01:  ರಾಜಹಂಸಗಡ ಕೊಟೆಯಲ್ಲಿ ಛತ್ರಪತಿ ಶಿವಾಜಿಯ ಬೃಹತ್ ಮೂರ್ತಿ ಪ್ರತಿಷ್ಠಾಪನೆಯ ನಂತರ ದೊಡ್ಡ ಮಟ್ಟದಲ್ಲಿ ಪ್ರವಾಸಿಗರನ್ನು ಸೆಳೆಯುತ್ತಿದೆ. ಮುಂದಿನ  5 ವರ್ಷದಲ್ಲಿ ಇದೊಂದು ಉತ್ತಮ ಪ್ರವಾಸಿ ಕೇಂದ್ರವಾಗಿ ಬೆಳೆಯುವ ಜೊತೆಗೆ, ಗ್ರಾಮವೂ ಸಾಕಷ್ಟು ಅಭಿವೃದ್ದಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ರಾಜಹಂಸಗಡ ಗ್ರಾಮದಲ್ಲಿ ನೂತನ ಶ್ರೀ ಮರಗಾಯಿ ಮೂರ್ತಿಯ ಪ್ರತಿಷ್ಠಾಪಣೆ ಹಾಗೂ ಮಹಾಪ್ರಸಾದ ಸೇವೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ರಾಜಹಂಸಗಡ ಕೋಟೆಯಲ್ಲಿ ಛತ್ರಪತಿ ಶಿವಾಜಿಯ ಮಾದರಿ ಮೂರ್ತಿ ಸ್ಥಾಪನೆ ಮಾಡಲಾಗಿದೆ. ಮಹಾರಾಷ್ಟ್ರದಿಂದ ಆಗಮಿಸಿದ್ದ ಹಲವಾರು ಮುಖಂಡರು ತಮ್ಮ ರಾಜ್ಯದಲ್ಲೂ ಇಷ್ಟೊೆದು ಉತ್ತಮವಾದ ಮೂರ್ತಿ ಇಲ್ಲ ಎನ್ನುವ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈಗ ರಾಜಹಂಸಗಡ ಕೊಟೆ ಸಾಕಷ್ಟು ಪ್ರವಾಸಿಗರನ್ನು ಸೆಳೆಯುತ್ತಿದೆ.  ಇಲ್ಲಿಯ ಭೂಮಿಗೂ ಉತ್ತಮ ಬೆಲೆ ಬರಲಿದೆ. ಜನರಿಗೆ ಉದ್ಯೋಗಾವಕಾಶ ಹೆಚ್ಚಲಿದೆ. ವ್ಯಾಪಾರ ವಹಿವಾಟು ಸುಧಾರಣೆಯಾಗಲಿದೆ. ಒಟ್ಟಾರೆ ಗ್ರಾಮ ಉತ್ತಮ ರೀತಿಯಲ್ಲಿ ಬೆಳವಣಿಗೆ ಕಾಣಲಿದೆ ಎಂದು ಹೇಳಿದರು.

ಕ್ಷೇತ್ರದ ಯಾವುದೇ ಭಾಗದ ಜನರು ಬಂದು ಕೇಳಿದರೂ ಕೆಲಸ ಮಾಡಿಕೊಡುತ್ತಿದ್ದೇನೆ. ಮೊದಲು ಬೆಳಗಾವಿ ಗ್ರಾಮೀಣ ಕ್ಷೇತ್ರ ಎನ್ನುವುದು ಯಾರಿಗೂ ಗೊತ್ತಿರಲಿಲ್ಲ. ಈಗ ರಾಜ್ಯದ ಯಾವ ಮೂಲೆಗೆ ಹೋದರೂ ಬೆಳಗಾವಿ ಗ್ರಾಮೀಣ ಕ್ಷೇತ್ರ ಚಿರಪರಿಚಿತವಾಗಿದೆ. ಬಾರಾಮತಿಯ ಮಾದರಿಯಲ್ಲಿ ಗ್ರಾಮೀಣ ಕ್ಷೇತ್ರವನ್ನು ಅಭಿವೃದ್ಧಿ ಮಾಡಬೇಕೆನ್ನುವ ಕನಸು ಹೊತ್ತು ಕೆಲಸ ಮಾಡುತ್ತಿದ್ದೇನೆ. ಚುನಾವಣೆ ಮುಗಿದ ನಂತರ ಯಾವುದೇ ರಾಜಕಾರಣವಿಲ್ಲದೆ ಎಲ್ಲರನ್ನೂ ಒಟ್ಟಾಗಿಸಿಕೊಂಡು ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದಲ್ಲಿ 140ಕ್ಕೂ ಹೆಚ್ಚು ಮಂದಿರಗಳನ್ನು ನಿರ್ಮಾಣ ಮಾಡಲಾಗಿದೆ.  ಎಂದು ಸಚಿವರು ಹೇಳಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಯುವರಾಜ ಕದಂ ಮಾತನಾಡಿ, ಲಕ್ಷ್ಮೀ ಹೆಬ್ಬಾಳಕರ್ ಸಚಿವರಾದ ನಂತರ ಕ್ಷೇತ್ರ ಸಾಕಷ್ಟು ಅಭಿವೃದ್ಧಿ ಕಂಡಿದೆ. ಪಕ್ಷ ಭೇದ ಮರೆತು ಎಲ್ಲರ ಕೆಲಸ ಮಾಡಿಕೊಡುತ್ತಿದ್ದಾರೆ. ಸಾಕಷ್ಟು ಜನರಿಗೆ ಉದ್ಯೋಗಕ್ಕೆ, ಶಿಕ್ಷಣಕ್ಕೆ ನೆರವಾಗಿದ್ದಾರೆ. ಇಂತಹ ಶಾಸಕರನ್ನು ಹಿಂದೆಂದೂ ಕಂಡಿರಲಿಲ್ಲ. ಇಂತವರನ್ನು ಬೆಂಬಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸ್ಥಳೀಯ ಮಹಿಳೆಯರಿಗೆ ವಿವಿಧ ಮಾಸಾಶನಗಳ ಆದೇಶ ಪತ್ರಗಳನ್ನು ಸಚಿವರು ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಸಿದ್ದಪ್ಪ ಛತ್ರೆ, ದತ್ತಾ ಪವಾರ್, ಬಾಹು ಪವಾರ, ಲಕ್ಷ್ಮಣ ಚೌಹಾನ್, ಪರಶುರಾಮ ನಿಲಜಕರ್, ಸಿದ್ದಪ್ಪ ಪಂಜಾಕರ್, ರಾಮಾ ಥೋರಾವತ್, ರಾಜು ಯಳೇಬೈಲಕರ್, ರಾಮಚಂದ್ರ ಗಡ್ಕರಿ, ಯಲ್ಲಪ್ಪ ಥೋರಾವತ್, ಗುಂಡು ನಿಲಗಟ್ಕರ್, ಸಿ.ಪಿ‌.ಆಯ್ ನಾಗನಗೌಡ, ಕೃಷ್ಣ ತಾವಸೆ ಮೊದಲಾದವರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ಪ್ರವೇಶ ಮತ್ತು ಅಭಿಮುಖೀಕರಣ ಕಾರ್ಯಕ್ರಮವೀರ ವನಿತೆ ಒನಕೆ ಓಬವ್ವ ಜಯಂತ್ಯೋತ್ಸವ ಕಾರ್ಯಕ್ರಮ - 2026ಮಂಡೋಳ್ಳಿಯಲ್ಲಿ ₹1.70 ಕೋಟಿ ವೆಚ್ಚದಲ್ಲಿ ಶ್ರೀ ಮಾರುತಿ ದೇವಸ್ಥಾನ ನಿರ್ಮಾಣ