LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Header Demos
1. Classic Default 2. Pro Centered 3. Modern Inline 4. Corporate Newsroom 5. App Glass Style 6. The Classic Press 7. Dark Mode Matrix 8. The Broadcast Edge 9. Glass Overlay 10. The Mega Portal

SSLC ಫಲಿತಾಂಶ ಹೆಚ್ಚಳಕ್ಕೆ ತಹಶೀಲ್ದಾರ್ ಭೀಮರಾಯರಿಂದ ವಿನೂತನ ಅಭಿಯನ

https://youtu.be/UJDrmMOYXyY?si=vljzRukfxHiyS91b

ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ SSLC ಫಲಿತಾಂಶ ಹೆಚ್ಚಿಸುವ ಉದ್ದೇಶದಿಂದ ತಹಶೀಲ್ದಾರ್ ಭೀಮರಾಯ ಅವರು ಕೈಗೊಂಡಿರುವ ವಿನೂತನ ಕ್ರಮ ಗಮನಸೆಳೆಯುತ್ತಿದೆ. ಪರೀಕ್ಷೆಗೆ ಇನ್ನೂ 30 ದಿನಗಳು ಬಾಕಿ ಇರುವ ಹಿನ್ನೆಲೆ, ವಿವಿಧ ಗ್ರಾಮಗಳಲ್ಲಿ ವಿದ್ಯಾರ್ಥಿಗಳ ಮನೆಗಳಿಗೆ ಸ್ವತಃ ಭೇಟಿ ನೀಡಿ ಅವರೊಂದಿಗೆ ಚರ್ಚೆ ನಡೆಸುತ್ತಿರುವುದು ಶಿಕ್ಷಣ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.

ಬೆಳ್ಳಂಬೆಳಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಗ್ರಾಮಗಳಿಗೆ ತೆರಳಿ ವಿದ್ಯಾರ್ಥಿಗಳ ಓದು ಪರಿಸ್ಥಿತಿಯನ್ನು ಪರಿಶೀಲಿಸುತ್ತಿರುವ ತಹಶೀಲ್ದಾರ್, ಮಕ್ಕಳಿಗೆ ಅನುಕೂಲಕರವಾದ ವಾತಾವರಣ ಕಲ್ಪಿಸುವಂತೆ ಪೋಷಕರಿಗೆ ಮನವಿ ಮಾಡುತ್ತಿದ್ದಾರೆ. ಪರೀಕ್ಷೆಯ ಮಹತ್ವವನ್ನು ವಿವರಿಸುತ್ತಾ, ಈ ಅವಧಿಯಲ್ಲಿ ಮಕ್ಕಳಿಗೆ ಯಾವುದೇ ರೀತಿಯ ಮನೆ ಕೆಲಸಗಳನ್ನು ನೀಡಬಾರದು ಎಂದು ಕಟ್ಟುನಿಟ್ಟಾಗಿ ಸೂಚಿಸುತ್ತಿದ್ದಾರೆ.

ಅಧಿಕಾರಿ ಸ್ವತಃ ಮನೆಗೆ ಭೇಟಿ ನೀಡುತ್ತಿರುವುದು ಕಂಡು ಪೋಷಕರು ಅಚ್ಚರಿ ವ್ಯಕ್ತಪಡಿಸಿದ್ದು, ಸರ್ಕಾರದ ಅಧಿಕಾರಿಯೊಬ್ಬರು ಈ ರೀತಿಯಾಗಿ ಮಕ್ಕಳ ಭವಿಷ್ಯದ ಬಗ್ಗೆ ಕಾಳಜಿ ತೋರಿರುವುದು ಸಂತೋಷ ತಂದಿದೆ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಜೊತೆ ಆತ್ಮೀಯವಾಗಿ ಮಾತನಾಡಿ, ಓದಿನ ಬಗ್ಗೆ ಮಾರ್ಗದರ್ಶನ ನೀಡುತ್ತಿರುವುದು ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ.

ತಹಶೀಲ್ದಾರ್ ಭೀಮರಾಯ ಅವರ ಈ ಕ್ರಮದಿಂದ ವಿದ್ಯಾರ್ಥಿಗಳ ಹಾಜರಾತಿ ಹಾಗೂ ಓದು ಮೇಲಿನ ಆಸಕ್ತಿ ಹೆಚ್ಚುತ್ತಿರುವುದು ಕಂಡುಬಂದಿದೆ. ಗ್ರಾಮ ಮಟ್ಟದಲ್ಲಿ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ SSLC ಫಲಿತಾಂಶವನ್ನು ಉತ್ತಮಪಡಿಸಲು ಇದು ಪರಿಣಾಮಕಾರಿ ಹೆಜ್ಜೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.

ಸ್ಥಳೀಯ ಶಿಕ್ಷಕರು ಹಾಗೂ ಸಾರ್ವಜನಿಕರು ತಹಶೀಲ್ದಾರ್ ಅವರ ಈ ಕಾರ್ಯವನ್ನು ಮೆಚ್ಚಿಕೊಂಡಿದ್ದು, ಇಂತಹ ಪ್ರಯತ್ನಗಳು ಮುಂದುವರಿಯಲಿ ಎಂದು ಆಶಿಸಿದ್ದಾರೆ. ಶಿಕ್ಷಣದ ಅಭಿವೃದ್ಧಿಗೆ ಆಡಳಿತ ಯಂತ್ರವೂ ಕೈಜೋಡಿಸಿದರೆ ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ ಇನ್ನಷ್ಟು ಹೆಚ್ಚಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST