LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟನ್ರ್ಷಿಪ್ ಅವಕಾಶ .!

 

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟನ್ರ್ಷಿಪ್ ಅವಕಾಶ ಕಲ್ಪಿಸಿದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.

ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 2022-23 ಹಾಗೂ 2023-24ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ತಿಳಿಸಿದ್ದಾರೆ.

ಒಟ್ಟು 24 ಅಭ್ಯರ್ಥಿಗಳಿಗೆ ಇಂಟನ್ರ್ಷಿಪ್ ಅವಕಾಶ ಒದಗಿಸಲಾಗುವುದು. ಅದರ ವಿವರ ಹೀಗಿದೆ. ಮಹಿಳಾ ಆಯವ್ಯಯದಡಿ 10 ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ 10 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟನ್ರ್ಷಿಪ್‍ಗೆ ಅವಕಾಶ ಕಲ್ಪಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟನ್ರ್ಷಿಪ್‍ಗೆ ಅವಕಾಶ ಕಲ್ಪಿಸಲಾಗುವುದು. ಇಂಟನ್ರ್ಷಿಪ್‍ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೈಪೆಂಡ್ ನೀಡಲಾಗುವುದು.

ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/UgNqDcFs1v6akyAD9  ರಲ್ಲಿ ಅರ್ಜಿ ಸಲ್ಲಿಸುವುದು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ. ಅರ್ಜಿ ಸಲ್ಲಿಸಲು 2025ರ ಜುಲೈ 25 ಕೊನೆಯ ದಿನವಾಗಿದೆ. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026