LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ

ಬೆಂಗಳೂರು: 'ಸಚಿವ ಸಂಪುಟದಲ್ಲೇ ಸೂಕ್ತ ಮಹಿಳಾ ಪ್ರಾತಿನಿಧ್ಯ ಇಲ್ಲ. ಈ ಸರ್ಕಾರದಲ್ಲಿ ನಾನೊಬ್ಬಳೇ ಮಹಿಳಾ ಮಂತ್ರಿ. ಅದೂ ಅರ್ಹತೆಗಾಗಿ ಅಲ್ಲ, ಮಹಿಳಾ ಕೋಟಾದ ಫಲ. ಸರ್ಕಾರಿ ಉದ್ಯೋಗ ಸೇರಿದಂತೆ ಎಲ್ಲೆಡೆಯೂ ಅವಕಾಶಗಳು ಕಡಿಮೆ ಇವೆ' ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ಬೇಸರ ವ್ಯಕ್ತಪಡಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

'ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರುಸಾಧನೆ ಮಾಡಿದ್ದರೂ, ಪುರುಷರಿಗೆಸಮಾನವಾದ ಅವಕಾಶಗಳು ಇಂದಿಗೂ ಸಿಗುತ್ತಿಲ್ಲ. ಸಮಾನ ಅವಕಾಶಗಳು ಮಾತ್ರ ಸಾಧನೆ ದೊರೆತಾಗ ಸಾರ್ಥಕ ವಾಗುತ್ತದೆ. ಕೌಟುಂಬಿಕ ಚೌಕಟ್ಟಿನೊಳಗೇ ಇದ್ದುಕೊಂಡು, ಸೀಮಿತ ಅವಕಾಶ ಬಳಸಿಕೊಂಡು ಭಾರತದ ಮಹಿಳೆಯರು ಮಾಡುತ್ತಿರುವ ಸಾಧನೆಗೆ ವಿಶ್ವವೇ ಬೆರಗಾಗಿದೆ. ಕೂಲಿ ಕಾರ್ಮಿಕರಾಗಿ, ಗಗನಯಾನಿಯಾಗಿ ఎల్ల క్షేత్ర ಗಳಲ್ಲೂ ಸಾಧನೆ ಮಾಡಿ ತೋರಿಸಿದ್ದಾರೆ' ಎಂದರು.

ಗಾಂಧೀಜಿ ಮಹಾತ್ಮರಾಗಲು, ನೆಹರೂ ದೇಶವನ್ನು ಯಶಸ್ವಿಯಾಗಿ ಮುನ್ನಡೆಸಲು ಅವರ ಪತ್ನಿಯರ ತ್ಯಾಗ, ಪರಿಶ್ರಮವೂ ಇದೆ. ಬಹುತೇಕ ಪುರುಷ ಸಾಧಕರ ಹಿಂದೆಯೂ ಅವರ.   ಕುಟುಂಬದ ಮಹಿಳೆಯರ ಪಾತ್ರ ಇರುತ್ತದೆ ಎಂದು ಹೇಳಿದರು.

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ 20 ಸಾಧಕಿಯರು ಹಾಗೂ ಅರು ಸಂಸ್ಥೆಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, ಏಳು ಸ್ತ್ರೀಶಕ್ತಿ ಗುಂಪುಗಳು, ಮೂರು ಸ್ತ್ರೀಶಕ್ತಿ ಒಕ್ಕೂಟಗಳಿಗೆ ಯಶೋದಮ್ಮ ದಾಸಪ್ಪ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಪ್ರಕಾಶ್, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ, ವ್ಯವಸ್ಥಾಪಕ ನಿರ್ದೇಶಕಿ ಎಚ್. ಪುಷ್ಪಲತಾ, ಇಲಾಖೆಯ ಜಂಟಿ ನಿರ್ದೇಶಕ ಡಾ.ಮೈತ್ರಿಯಿ, ಬಾಲಭವನದ ಕಾರ್ಯದರ್ಶಿ ನಿಶ್ಚಲ್, ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನ