Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪಾಕ್ ಏರ್‌ಸ್ಟೈಕ್: ಇಸ್ಲಾಮಾಬಾದ್, ರಾವಲ್ಪಿಂಡಿಯಲ್ಲಿ ಇಂಟರ್ನೆಟ್ ಬಂದ್

ಕಾಬೂಲ್: ಗುರುವಾರ ರಾತ್ರಿ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಗರದ ಮೇಲೆ ಪಾಕಿಸ್ತಾನ ಯುದ್ಧ ವಿಮಾನಗಳನ್ನು ಬಳಸಿ ವಾಯು ದಾಳಿ ನಡೆಸಿದೆ.

ಅಫ್ಘಾನಿಸ್ತಾನದ ಹಂಗಾಮಿ ವಿದೇಶಾಂಗ ಸಚಿವ ಅಮೀ‌ರ್ ಖಾನ್ ಮುತಾಕಿ ಭಾರತಕ್ಕೆ ಭೇಟಿ ನೀಡುತ್ತಿರುವ ಸಮಯದಲ್ಲಿ ಮತ್ತು ಶುಕ್ರವಾರದಂದು ವಿದೇಶಾಂಗ ಸಚಿವ ಎಸ್ .ಜೈಶಂಕರ್ ಅವರೊಂದಿಗೆ ಪ್ರಮುಖ ಮಾತುಕತೆ ನಡೆಸಲು ಸಿದ್ಧರಾಗಿರುವ ಸಮಯದಲ್ಲಿ ಕಾಬೂಲ್‌ನಲ್ಲಿ ಪಾಕಿಸ್ತಾನ ದಾಳಿ ನಡೆಸಿರುವುದು ಮಹತ್ವ ಪಡೆದಿದೆ.

ಕಾಬೂಲ್ ಮೇಲೆ ಏರ್‌ಸ್ಟೈಕ್‌ ನಡೆದ ಬೆನ್ನಲ್ಲೇ ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್ ಮತ್ತು ಸೇನೆಯ ಪ್ರಧಾನ ಕಚೇರಿ ಇರುವ ರಾವಲ್ಪಿಂಡಿಯಲ್ಲಿ ಮುಂದಿನ ಆದೇಶ ಜಾರಿಯಾಗುವವರೆಗೂ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಗುರುವಾರ ರಾತ್ರಿ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಗರದ ಮೇಲೆ ಪಾಕಿಸ್ತಾನ ಯುದ್ಧ ವಿಮಾನಗಳನ್ನು ಬಳಸಿ ವಾಯು ದಾಳಿ ನಡೆಸಿದೆ.

ಕಾಬೂಲ್ ನಗರದಲ್ಲಿ ಸ್ಫೋಟದ ಶಬ್ದ ಕೇಳಿಬಂದಿದೆ. ಯಾರೂ ಭಯಪಡುವ ಅಗತ್ಯವಿಲ್ಲ.ಘಟನೆಯ ತನಿಖೆ ನಡೆಯುತ್ತಿದೆ, ಇಲ್ಲಿಯವರೆಗೆ ಯಾವುದೇ ಹಾನಿಯ ವರದಿ ಬಂದಿಲ್ಲ ಎಂದು ಅಫ್ಘಾನ್-ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ. ವರದಿಗಳ ಪ್ರಕಾರ ಕಾಬೂಲ್‌ನ ಪೂರ್ವ ಭಾಗದಲ್ಲಿರುವ ತಾಲಿಬಾನ್ ಸರ್ಕಾರದ ಪ್ರಮುಖ ಸರ್ಕಾರಿ ಕಚೇರಿಗಳನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ.

ಪಾಕಿಸ್ತಾನದ ಯುದ್ಧ ವಿಮಾನಗಳು ಕಾಬೂಲ್ ನಗರದೊಳಗಿನ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ ನೆಲೆಗಳನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿದೆ. ಅಫ್ಘಾನಿಸ್ತಾನ ರಾಜಧಾನಿಯಲ್ಲಿ ಸ್ಫೋಟಗಳ ಶಬ್ದ ಕೇಳಿಬಂದಿದೆ ಎಂದು ವರದಿಯಾಗಿದೆ.

ನಗರದ ಮೇಲೆ ವೈಮಾನಿಕ ಚಟುವಟಿಕೆಯನ್ನು ಅಫ್ಘಾನ್ ಅಧಿಕಾರಿಗಳು ದೃಢಪಡಿಸಿದರು. ತಾಲಿಬಾನ್ ವಕ್ತಾರ ಜಬೀಹುಲ್ಲಾ ಮುಜಾಹಿದ್, "ಕಾಬೂಲ್ ನಗರದಲ್ಲಿ ಸ್ಫೋಟದ ಶಬ್ದ ಕೇಳಿಬಂದಿದೆ. ಆದಾಗ್ಯೂ, ಯಾರೂ ಚಿಂತಿಸಬೇಡಿ, ಎಲ್ಲವೂ ಸರಿಯಾಗಿದೆ, ಘಟನೆಯ ತನಿಖೆ ನಡೆಯುತ್ತಿದೆ, ಇಲ್ಲಿಯವರೆಗೆ ಯಾವುದೇ ಹಾನಿಯ ವರದಿ ಬಂದಿಲ್ಲ" ಎಂದು ಎಕ್ಸ್ ಪೋಸ್ಟ್ ಮಾಡಿದ್ದಾರೆ.

ಟಿಟಿಪಿ ಮುಖ್ಯಸ್ಥ ನೂರ್ ವಾಲಿ ಮೆಹ್ಸೂದ್ ಅವರನ್ನು ಈ ದಾಳಿಗಳಲ್ಲಿ ನಿರ್ದಿಷ್ಟವಾಗಿ ಗುರಿಯಾಗಿರಿಸಿಕೊಳ್ಳಲಾಗಿದೆ ಎಂದು ವರದಿಗಳು ಸೂಚಿಸುತ್ತವೆ. ಆತ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

ಕಾಬೂಲ್ ನಿವಾಸಿಗಳು ಘಟನೆಯ ಬಗ್ಗೆ ಮಾತನಾಡಿದ್ದು, ಅಪರಿಚಿತ ಜೆಟ್‌ಗಳು ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿವೆ, ಭಾರೀ ಸ್ಫೋಟಗಳು ನಗರದ ಮಧ್ಯ ಮತ್ತು ಉತ್ತರ ಜಿಲ್ಲೆಗಳಲ್ಲಿ ಜನರನ್ನು ಎಚ್ಚರಗೊಳಿಸಿದವು ಎಂದು ಸ್ಥಳೀಯರು ಹೇಳಿದ್ದಾರೆ.

ವಾಯುದಾಳಿಗಳ ಸಮಯದಲ್ಲಿ ನಾಗರಿಕರ ಮನೆಗಳಿಗೆ ಹಾನಿಯಾಗಿದೆ ಎಂದು ಹಲವಾರು ವರದಿಗಳು ದೃಢಪಡಿಸಿವೆ. ದಾಳಿಯ ನಂತರ ಕಾಬೂಲ್ ಮೇಲೆ ಯುದ್ಧ ವಿಮಾನಗಳು ಕಾಣಿಸಿಕೊಂಡಿವೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸ್ಕ್ರೀನ್‌ಶಾಟ್‌ಗಳು ಮತ್ತು ಪೋಸ್ಟ್‌ಗಳು ಹೇಳುತ್ತವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ