ಬೆಳಗಾವಿ :
ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಚಿನ್ನಾಭರಣ ವ್ಯಾಪಾರಿ ಬ್ಯಾಗಿನಲ್ಲಿದ್ದ ಸುಮಾರು 51 ಲಕ್ಷ ರೂ.ಚಿನ್ನಾಭರಣ ದೋಚಿದ್ದ ಅಂತಾರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಧ್ಯಪ್ರದೇಶದ ಧಾರಾ ಜಿಲ್ಲೆಯಲ್ಲಿ ವಿನೋದ್ ಚವಾಣ್ ಎಂಬಾತನನ್ನು ಈ ಸಂಬಂಧ ಬಂಧಿಸಿದ್ದಾರೆ. ಖಾಸಗಿ ಬಸ್ಸಿನಲ್ಲಿ ಜುಲೈ 4ರಂದು ಮುಂಬೈಯಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡುತ್ತಿದ್ದ ಚಿನ್ನಾಭರಣ ವ್ಯಾಪಾರಸ್ಥರೊಬ್ಬರು ಸಂಕೇಶ್ವರ ಪೊಲೀಸ್ ಠಾಣೆಯ ವ್ಯಾಪ್ತಿಯ ಹೋಟೆಲ್‌ಗೆ ಉಪಾಹಾರಕ್ಕೆ ತೆರಳಿದ್ದರು. ಅವರು ಬಸ್ಸಿನ ಬ್ಯಾಗಿನಲ್ಲಿ ಇಟ್ಟಿದ್ದ ಚಿನ್ನಾಭರಣ ಬ್ಯಾಗ್ ಕಳ್ಳತನವಾಗಿತ್ತು. ಬ್ಯಾಗಿನಲ್ಲಿ 61 ಲಕ್ಷ ಮೌಲ್ಯದ 1306 ಗ್ರಾಂ ಚಿನ್ನಾಭರಣ ಕಳ್ಳತನವಾದ ಬಗ್ಗೆ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.