Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bijapur

ನಿವೃತ್ತಿ ಭದ್ರತೆಗೆ ಇಂದಿನಿಂದಲೇ ಪಿಂಚಣಿ ಹೂಡಿಕೆ ಮಾಡಿ: ಸಿದ್ದಯ್ಯ

ಎನ್‌ಪಿಎಸ್ ಸಂಚಯ ಯಾತ್ರೆಗೆ ವಿಜಯಪುರದಲ್ಲಿ ಉತ್ತಮ ಸ್ಪಂದನೆ

ವಿಜಯಪುರ, ಅ.೦೯: ನಿವೃತ್ತಿ ಜೀವನದ ಆರ್ಥಿಕ ಭದ್ರತೆಗಾಗಿ ಇಂದಿನಿಂದಲೇ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಆರಂಭಿಸುವಂತೆ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ಸಿದ್ದಯ್ಯ ಬಿ. ಸಾರ್ವಜನಿಕರಿಗೆ ಸಲಹೆ ನೀಡಿದರು. 
ವಿಜಯಪುರ ನಗರದಲ್ಲಿ ಅ.೭ರಂದು ನಡೆದ ’ಎನ್‌ಪಿಎಸ್ ಸಂಚಯ ಯಾತ್ರೆ ಸಂದರ್ಭದಲ್ಲಿ ಮಾತನಾಡಿದ ಅವರು,ನಿಯಮಿತ ಹೂಡಿಕೆಯ ಮೂಲಕ ಭವಿಷ್ಯದ ನಿವೃತ್ತಿ ಅಗತ್ಯಗಳಿಗೆ ಆರ್ಥಿಕ ನಿಧಿಯನ್ನು ಶಿಸ್ತುಬದ್ಧವಾಗಿ ರೂಪಿಸಿಕೊಳ್ಳಬಹುದು ಎಂದು ಅವರು ಹೇಳಿದರು. ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್) ನಿವೃತ್ತಿ ಜೀವನಕ್ಕೆ ಆರ್ಥಿಕ ಭದ್ರತೆ ಕಲ್ಪಿಸುವ ಪ್ರಮುಖ ವ್ಯವಸ್ಥೆಯಾಗಿದೆ. ಪ್ರತಿಯೊಬ್ಬರೂ ತಮ್ಮ ಆದಾಯ ಹಾಗೂ ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಪಿಂಚಣಿ ಯೋಜನೆಗೆ ಆದ್ಯತೆ ನೀಡಬೇಕು ಎಂದರು.
ವಿಜಯಪುರದಲ್ಲಿ ನಡೆದ ಎನ್‌ಪಿಎಸ್ ಸಂಚಯ ಯಾತ್ರೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ನಾಗರಿಕರು ಆಸಕ್ತಿಯಿಂದ ಎನ್‌ಪಿಎಸ್ ಕುರಿತು ಮಾಹಿತಿ ಪಡೆದುಕೊಂಡಿರುವುದು ಶ್ಲಾಘನೀಯವಾಗಿದೆ. ಯಾತ್ರೆಯ ಯಶಸ್ಸಿಗೆ ಸಹಕರಿಸಿದ ಜಿಲ್ಲಾಡಳಿತ, ವಿವಿಧ ಬ್ಯಾಂಕ್‌ಗಳ ಪ್ರತಿನಿಧಿಗಳು, ಮಾಧ್ಯಮ ಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಗೆ ಕೃತಜ್ಞತೆ ಸಲ್ಲಿಸಿದರು.
ಎನ್‌ಪಿಎಸ್ ದಿವಸ್೨೦೨೬ರ ಜಾಗೃತಿ ಅಭಿಯಾನದ ಅಂಗವಾಗಿ ಅ.೧ರಿಂದ ೧೫ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎನ್‌ಪಿಎಸ್ ಸಂಚಯ ಯಾತ್ರೆ ಆಯೋಜಿಸಲಾಗಿದೆ. ಇದರ ಭಾಗವಾಗಿ ಅ.೭ರಂದು ವಿಜಯಪುರ ಜಿಲ್ಲೆಗೆ ಆಗಮಿಸಿದ ಯಾತ್ರೆಯಲ್ಲಿ ಸಾರ್ವಜನಿಕರಿಗೆ ಎನ್‌ಪಿಎಸ್‌ನ ವೈಶಿಷ್ಟ್ಯಗಳು, ಪ್ರಯೋಜನಗಳು, ಹೂಡಿಕೆ ವಿಧಾನ ಹಾಗೂ ಖಾತೆ ತೆರೆಯುವ ಪ್ರಕ್ರಿಯೆ ಕುರಿತು ನೇರವಾಗಿ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಯಿತು.
ಯಾತ್ರೆಯ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್‌ಗಳ ಪ್ರತಿನಿಧಿಗಳು ಭಾಗವಹಿಸಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಎನ್‌ಪಿಎಸ್ ಖಾತೆ ತೆರೆಯುವ ವಿಧಾನ, ಹೂಡಿಕೆ ಪ್ರಕ್ರಿಯೆ ಹಾಗೂ ಯೋಜನೆಯ ಪ್ರಮುಖ ಅಂಶಗಳ ಕುರಿತು ಸಾರ್ವಜನಿಕರ ಪ್ರಶ್ನೆಗಳಿಗೆ ಅಗತ್ಯ ಮಾಹಿತಿ ನೀಡಿದರು.
ನಿವೃತ್ತಿ ಜೀವನದ ಆರ್ಥಿಕ ಭದ್ರತೆಯ ಮಹತ್ವವನ್ನು ಸಾರ್ವಜನಿಕರಿಗೆ ತಲುಪಿಸುವ ಉದ್ದೇಶದೊಂದಿಗೆ ನಡೆದ ಎನ್‌ಪಿಎಸ್ ಸಂಚಯ ಯಾತ್ರೆ ವಿಜಯಪುರದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ಲೀಡ್ ಬ್ಯಾಂಕ್ ಮ್ಯಾನೆಜರ್ ಅವರ ಪ್ರಕಟಣೆ ತಿಳಿಸಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ