LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಧರ್ಮಸ್ಥಳದಲ್ಲಿ ತನಿಖೆ; ಧರ್ಮ ದ್ರೋಹಿ ಚಟುವಟಿಕೆ.! ಎಸ್ ಲಿಂಗಮೂರ್ತಿ

 

ಚಿತ್ರದುರ್ಗ : ಹಿಂದುಗಳ ಶ್ರದ್ಧಾ ಕೇಂದ್ರ ಧರ್ಮಸ್ಥಳದಲ್ಲಿ ತನಿಖೆಯ ಹೆಸರಲ್ಲಿ ನಡೆಯುತ್ತಿರುವ ಧರ್ಮ ದ್ರೋಹಿ ಚಟುವಟಿಕೆಗಳು ಕೂಡಲೇ  ಸ್ಥಗಿತಗೊಳ್ಳಬೇಕು ಎಂದು ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್ ಲಿಂಗಮೂರ್ತಿ ಒತ್ತಾಯಿಸಿದ್ದಾರೆ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಕುರಿತು ಸೋಮವಾರ ಮಾತನಾಡಿದ ಅವರು ಎಸ್ಐಟಿ ನಡೆಸುತ್ತಿರುವ ತನಿಖೆ ಧರ್ಮಸ್ಥಳ ಕ್ಷೇತ್ರದ ಧಾರ್ಮಿಕ ಶ್ರದ್ಧೆಗೆ ಅಪಚಾರ ಎತ್ತಾಗುವಂತಿದೆ. ಅಸಮರ್ಪಕವಾದ ತನಿಕೆಯನ್ನ ಕೂಡಲೇ ಸ್ಥಗಿತಗೊಳಿಸಿ ಇಲ್ಲಿಯವರೆಗೆ ನಡೆಸಿರುವ ತನಿಖೆಯ ಕುರಿತು ಮಧ್ಯಂತರ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.

ಪಿ ಎಫ್ ಐ ಸೇರಿದಂತೆ ಮತಾಂತರ ಶಕ್ತಿಗಳು ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಅಪಪ್ರಚಾರದಲ್ಲಿ ತೊಡಗಿದ್ದು ಸದ್ಯ ನಡೆಯುತ್ತಿರುವ ತನಿಖೆ ಕೂಡ ಅದಕ್ಕೆ ಪುಷ್ಟಿ ಕೊಡುವಂತಿದೆ. ಅನಾಮಿಕ ದೂರುದಾರನ ಹೆಸರಲ್ಲಿ ಕಳೆದ 15 ದಿನಗಳಿಂದ ನಿರಂತರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ತೇಜೋವದೆ ಮಾಡಲಾಗುತ್ತಿದೆ. ಸರ್ಕಾರದ ಇಂತಹ ವ್ಯವಸ್ಥೆ ಧರ್ಮಸ್ಥಳದ ಅಸಂಖ್ಯಾತ ಭಕ್ತರು ಹಾಗೂ ಹಿಂದುಗಳಿಗೆ ನೋವು ತರಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ಹಾಗೂ ಕಾರ್ಮಿಕ ಕೇಂದ್ರಗಳ ಮೇಲೆ ನಡೆಯುತ್ತಿರುವ ವ್ಯವಸ್ಥಿತ ಅಪಪ್ರಚಾರವನ್ನು ಸಹಿಸಲು ಸಾಧ್ಯವಿಲ್ಲ. ತಕ್ಷಣ ಸರ್ಕಾರ ಧರ್ಮಸ್ಥಳ ಕ್ಷೇತ್ರದ ಗೌರವ ಸಂರಕ್ಷಣೆ ಮಾಡುವ ಕೆಲಸಕ್ಕೆ ಮುಂದಾಗಬೇಕು. ಸರ್ಕಾರ ಸೂಕ್ತ ಕ್ರಮಕ್ಕೆ ಮುಂದಾಗದಿದ್ದರೆ ಹೊಸದುರ್ಗದಿಂದ ಧರ್ಮಸ್ಥಳಕ್ಕೆ ಅಸಂಖ್ಯಾತ ಭಕ್ತರೊಂದಿಗೆ ಪಾದಯಾತ್ರೆ ನಡೆಸುವ ಮೂಲಕ ಪ್ರತಿಭಟನೆಗೆ ಮುಂದಾಗುತ್ತೇವೆ. ಮುಂದಿನ ಅನಾಹುತಗಳಿಗೆ ಸರ್ಕಾರವೇ ಹೊಣೆಯಾಗುತ್ತದೆ ಎಂದು ಎಸ್ ಲಿಂಗಮೂರ್ತಿ ಎಚ್ಚರಿಕೆ ನೀಡಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026