Press ID & Credential Portal
Apply / Verify  ➔
LIVE TV LocalKarnatakaCrimeIndiaWorldFilmNationalLife StyleInternationalBusinessPoliticsSportsBusinessEducationTechnology
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Karnataka

ಮತಗಳ್ಳತನದ ವಿರುದ್ಧ ಕರ್ನಾಟಕದಲ್ಲಿ ತನಿಖೆ ಮುಂದುವರೆಸುತ್ತೇವೆ: ಸಿಎಂ ಡಿ ಕೆ ಶಿವಕುಮಾರ್

ನವದೆಹಲಿ: "ಮತಗಳ್ಳತನದ ಬಗ್ಗೆ ಕರ್ನಾಟಕದಲ್ಲಿ ನಾವು ತನಿಖೆ ಮುಂದುವರೆಸುತ್ತೇವೆ. ಸಂವಿಧಾನ ಉಳಿಸಲು, ಪ್ರಜಾಪ್ರಭುತ್ವ ರಕ್ಷಿಸಲು ನಾವು ಹೋರಾಡುತ್ತೇವೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ದೆಹಲಿಯ ಕರ್ನಾಟಕ ಭವನದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

"ಕರ್ನಾಟಕದಲ್ಲಿ ಬಿಜೆಪಿಯವರು ತಪ್ಪು ಮಾಡಿಲ್ಲ ಎಂದಾದರೆ ಯಾಕೆ ಪ್ರಕರಣ ದಾಖಲಿಸಬೇಡಿ ಎನ್ನುತ್ತಿದ್ದಾರೆ? ಯಾಕೆ ರಾಜ್ಯಪಾಲರ ಬಳಿಗೆ ಹೋಗಿದ್ದಾರೆ? ಪ್ರತಿಭಟನೆ ಮಾಡುತ್ತೇವೆ ಎನ್ನುತ್ತಿದ್ದಾರೆ? ಅರ್ಜಿ ನಮೂನೆ 7ಕ್ಕೆ ಅಮಾಯಕ ಕಾರ್ಯಕರ್ತರಿಂದ ಸಹಿ ಹಾಕಿಸಿದ್ದಾರೆ. ಮುಖಂಡರುಗಳೇ ಸಹಿ ಹಾಕಬೇಕಿತ್ತು" ಎಂದರು.

"ಅನೇಕ ಕಡೆ ಅರ್ಜಿ ನಮೂನೆ 7 ಕ್ಕೆ ತಪ್ಪಾಗಿ ಸಹಿ ಮಾಡಿದ್ದೇವೆ ಎಂದು ಅರ್ಜಿ ವಾಪಸ್ ಪಡೆದಿದ್ದಾರೆ. ಅನೇಕ ಕಡೆ ಪ್ರಕರಣಗಳು ದಾಖಲಾಗಿವೆ, ಬಿಎಲ್ ಓಗಳೇ ದೂರು ನೀಡಿದ್ದಾರೆ. ಕಾರ್ಯಕರ್ತರಿಂದ ಮಾಡಬಾರದ್ದನೆಲ್ಲಾ ಮಾಡಿಸಿಕೊಂಡು ಅರಾಜಕತೆ ಸೃಷ್ಟಿ ಮಾಡಿರುವವರು ಬಿಜೆಪಿಯವರು. ಅವರು ಮಾಡಿರುವ ತಪ್ಪನ್ನು ಮುಚ್ಚಿಕೊಳ್ಳಲೇ ಬೇಕಲ್ಲವೇ? ಮತದಾನದ ಹಕ್ಕನ್ನು ಕಿತ್ತು ಹಾಕಲು ಹೊರಟವರು ಬಿಜೆಪಿಯವರು. ಅಪರಾಧ ಮಾಡಿ ಬಡವರ ವಿರುದ್ಧ ಕೆಲಸ ಮಾಡಿದ್ದಾರೆ" ಎಂದು ಕಿಡಿಕಾರಿದರು.
 
"ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರ ಬಳಿ ನಾನು ಮನವಿ ಮಾಡುತ್ತೇನೆ. ಎಚ್ಚರಿಕೆಯಿಂದಿರಿ, ಮತಗಳು ಕಳೆದುಕೊಂಡಿರುವವರು ಬಿಎಲ್ಎ, ಬಿಎಲ್ಓ ಗಳಿಗೆ ಮನವರಿಕೆ ಮಾಡಿ. ಜನರ ಮತದಾನದ ಹಕ್ಕನ್ನು ಉಳಿಸಬೇಕು" ಎಂದರು.

"ಇಂಡಿಯಾ ಒಕ್ಕೂಟದ ಪಕ್ಷಗಳ ‌ನಾಯಕರೆಲ್ಲರೂ ಒಟ್ಟಿಗೆ ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದೇವೆ. ನಮಗೆ ನ್ಯಾಯ ದೊರಕುತ್ತದೆ ಎನ್ನುವ ವಿಶ್ವಾಸವಿದೆ. ನಮ್ಮ ಹೋರಾಟಕ್ಕೆ ಮಣಿದು ಅಲ್ಪಸಂಖ್ಯಾತರ, ಹಿಂದುಳಿದವರ, ಪರಿಶಿಷ್ಟರ ಮತಗಳನ್ನು ತೆಗೆದು ಹಾಕಿರುವ ಬಗ್ಗೆ ವಿಶೇಷ ಅಭಿಯಾನ ನಡೆಸಿ ಎಂದು ಈಗಾಗಲೇ ಚುನಾವಣಾ ಆಯೋಗ ತಿಳಿಸಿತ್ತು" ಎಂದರು.

"ಮತಗಳ್ಳತನ ವಿರೋಧಿಸಿ ದೆಹಲಿಯಲ್ಲಿ ನಡೆದ ಪ್ರತಿಭಟನೆಗೆ ಲಕ್ಷಾಂತರ ಜನ ಸೇರಿದ್ದನ್ನು ಮಾಧ್ಯಮಗಳೇ ಬಿತ್ತರಿಸಿವೆ. ಲೆಕ್ಕಕ್ಕೆ ಸಿಗದಷ್ಟು ಜನ ಸೇರಿದ್ದರು. ನವರಾತ್ರಿ ಸಮಯದಲ್ಲಿ ಕರ್ನಾಟಕದಿಂದ ಸಚಿವರು, ನೂರಕ್ಕೂ ಹೆಚ್ಚು ಶಾಸಕರು, 300 ಕ್ಕೂ ಹೆಚ್ಚು ಪದಾಧಿಕಾರಿಗಳು ಭಾಗವಹಿಸಿದ್ದರು" ಎಂದರು.

ಅಡ್ಡ ಮತದಾನ ಮಾಡಿದ 12 ಜನ ಶಾಸಕರ ಹೆಸರು ಹೇಳಲು ವಿಪಕ್ಷ ನಾಯಕರಿಗೆ ತಿಳಿಸಿ

ಸಾಕಷ್ಟು ಶಾಸಕರು ಬಿಜೆಪಿ ಸೇರಲು ಉತ್ಸುಕರಾಗಿದ್ದಾರೆ ಎನ್ನುವ ವಿಜಯೇಂದ್ರ ಹೇಳಿಕೆ ಬಗ್ಗೆ ಕೇಳಿದಾಗ, "ಮೊದಲು ಅವರನ್ನು ಅದಷ್ಟು ಬೇಗ ಕರೆಸಿಕೊಳ್ಳಲಿ. ತಡಮಾಡುವುದು ಬೇಡ. ವಿಜಯೇಂದ್ರ ಹಾಗೂ ಕುಮಾರಸ್ವಾಮಿ ಅವರಿಗೆ ಅಡ್ಡ ಮತದಾನ ಮಾಡಿದ ತಮ್ಮ 12 ಜನ ಶಾಸಕರು ಯಾರು ಎಂದು ಹೇಳಲು ಆಗಲಿಲ್ಲ. ಅವರು ಎನ್ ಡಿಎ ಸರಿಯಿಲ್ಲ ಎಂದು ನಮಗೆ ಮತ ಹಾಕಿದ್ದಾರೆ" ಎಂದು ಲೇವಡಿ ಮಾಡಿದರು.

ಅಡ್ಡ ಮತದಾನ ಮಾಡಿದ 12 ಶಾಸಕರನ್ನು ಕಾಂಗ್ರೆಸ್ ‌ಪಕ್ಷಕ್ಕೆ ಸೇರಿಸಿಕೊಳ್ಳುವಿರಾ ಎಂದಾಗ, "ಅದು ಗುಪ್ತ ಮತದಾನ. ಈಗ ಆ ವಿಚಾರ ಬೇಡ" ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯೇಂದ್ರ ಸಾರಥ್ಯದಲ್ಲೇ ಮುಂದಿನ ವಿಧಾನಸಭಾ ಚುನಾವಣೆ: ಬಿಜೆಪಿ ಹೈಕಮಾಂಡ್ ಮೆಗಾ ಪ್ಲಾನ್ಮದ್ದೂರಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ; ಗ್ರಾಮಸ್ಥರು ನಿಟ್ಟುಸಿರುಸಾಗರ ತಾಲ್ಲೂಕು ಅಂತಿಮ ಮತದಾರರ ಪಟ್ಟಿ ಪ್ರಕಟ: 1.94 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆಮಲ್ಲಿಕಾರ್ಜುನ ಖರ್ಗೆ ವಿರುದ್ಧದ ವೈಯಕ್ತಿಕ ದಾಳಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ MLC ರಮೇಶ್ ಬಾಬು ಆಕ್ಷೇಪಮಹರ್ಷಿ ವಾಲ್ಮೀಕಿ ಆದರ್ಶಗಳು ಇಂದಿನ ಯಾಂತ್ರಿಕ ಜಗತ್ತಿಗೆ ಪ್ರಸ್ತುತ: ಮದ್ದೂರು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್10 ಎಕರೆಯಲ್ಲಿ ಕೆಎಆರ್ ಫ್ಯೂಚರ್ ಅಕಾಡೆಮಿ ಕ್ಯಾಂಪಸ್: ನೇಗಿಲಯೋಗಿ ರೈತ ಮಾರಾಟ ಕೇಂದ್ರದ ಸ್ಥಾಪಕ ಯೋಗೇಶ್ ಅಪ್ಪಾಜಿಸ್ವ-ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನBREAKING : ಕಲ್ಬುರ್ಗಿಯಲ್ಲಿ ತಡರಾತ್ರಿ ದರೋಡೆಗೆ ಬಂದಿದ್ದ ಗ್ಯಾಂಗ್ ನಿಂದ ಫೈರಿಂಗ್ : ಇಬ್ಬರು ಅರೆಸ್ಟ್!ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಗಣಿ ಗುತ್ತಿಗೆ ಪ್ರಕರಣದ PIL ವಜಾಗೊಳಿಸಿದ ಹೈಕೋರ್ಟ್SHOCKING : ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!