Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bijapur

ಹೂಡಿಕೆದಾರರು ಸೈಬರ್ ವಂಚನೆಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಿ


ತಾಳಿಕೋಟೆ, ಸ್ಥಳೀಯ ಎಸ್.ಕೆ. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ವಾಣಿಜ್ಯ ವಿಭಾಗ ಹಾಗೂ ಪ್ರೊಫಿಷಿಯಂಟ್ ಮೈಂಡ್ಸ್ ಸಹಯೋಗದಲ್ಲಿ, ಅಂತರಾಷ್ಟ್ರೀಯ ಸೆಕ್ಯುರಿಟೀಸ್ ಸಂಸ್ಥೆಯ ನೇತೃತ್ವದಲ್ಲಿ, ಸೆಬಿ ಹಾಗೂ ಎನ್‌ಎಸ್‌ಇ ಬೆಂಬಲದೊಂದಿಗೆ ೧೦ನೇ ವಾರ್ಷಿಕ ಜಾಗತಿಕ ವಿಶ್ವ ಹೂಡಿಕೆದಾರರ ವಾರದ ಅಂಗವಾಗಿ ಅ.೮ರಂದು ಆನ್‌ಲೈನ್ ಕಾರ್ಯಾಗಾರ ಆಯೋಜಿಸಲಾಗಿತ್ತು. 
      ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸೆಬಿ ಸ್ಮಾರ್ಟ್ ಟ್ರೈನರ್ ಸುಹಾಸ್ ರಜಪೂತ ಅವರು ಮಾತನಾಡಿ, ಹೂಡಿಕೆದಾರರು ಷೇರು ಮಾರುಕಟ್ಟೆಯ ಏರಿಳಿತಗಳಿಂದ ಅಥವಾ ನಷ್ಟಗಳಿಂದ ಚೇತರಿಸಿಕೊಳ್ಳುವ ಸಂದರ್ಭದಲ್ಲಿ ಆರ್ಥಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಕಾಪಾಡಿಕೊಳ್ಳಬೇಕು. ಯಾವುದೇ ಆತುರದ ನಿರ್ಧಾರಗಳನ್ನು ಕೈಗೊಳ್ಳದೆ, ಆನ್‌ಲೈನ್‌ನಲ್ಲಿ ಕಂಡುಬರುವ ನಕಲಿ ಹೂಡಿಕೆ ಸಲಹೆಗಳು, ವಂಚನೆಗಳು ಹಾಗೂ ಸತ್ಯಾಸತ್ಯತೆ ಪರಿಶೀಲಿಸದ ಮಾಹಿತಿಯಿಂದ ದೂರವಿರಬೇಕು ಎಂದು ಸಲಹೆ ನೀಡಿದರು.
      ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಆರ್.ಬಿ. ಮೂಗಡ್ಲಿಮಠ ಅವರು ಮಾತನಾಡಿ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಾಗ ಅನುಸರಿಸಬೇಕಾದ ಮೂಲಭೂತ ನಿಯಮಗಳ ಕುರಿತು ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಿಗಳು ಹೂಡಿಕೆದಾರರನ್ನು ವಂಚಿಸಲು ಹೊಸ ತಂತ್ರಜ್ಞಾನಗಳನ್ನು ಬಳಸುತ್ತಿದ್ದು, ನಕಲಿ ಹೂಡಿಕೆ ಆಪ್‌ಗಳು, ನಕಲಿ ವೆಬ್‌ಸೈಟ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಹೂಡಿಕೆ ಸಲಹೆಗಳ ಬಗ್ಗೆ ಜಾಗರೂಕರಾಗಿರಬೇಕು ಎಂದರು.
ಸರ್ಕಾರ, ಬ್ಯಾಂಕ್‌ಗಳು ಹಾಗೂ ಸೆಬಿಯಂತಹ ನಿಯಂತ್ರಕ ಸಂಸ್ಥೆಗಳು ನೀಡುವ ಸುರಕ್ಷತಾ ಎಚ್ಚರಿಕೆಗಳನ್ನು ಸಾರ್ವಜನಿಕರು ಪಾಲಿಸಬೇಕು. ಅಪರಿಚಿತ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬಾರದು ಹಾಗೂ ಹೆಚ್ಚಿನ ಲಾಭದ ಆಮಿಷವೊಡ್ಡುವ ಯೋಜನೆಗಳಿಂದ ದೂರವಿರಬೇಕು ಎಂದು ಅವರು ಸಲಹೆ ನೀಡಿದರು.
      ಕುಮಾರಿ ಕೌಶಲ್ಯ ಕೂಚಬಾಳ ಸ್ವಾಗತಿಸಿದರು. ಕುಮಾರಿ ಕಾವೇರಿ ಹಂದಿಗನೂರ ಅತಿಥಿಗಳನ್ನು ಪರಿಚಯಿಸಿದರು. ರಮೇಶ ಜಾಧವ ನಿರೂಪಿಸಿದರು. ಕುಮಾರಿ ರೇವತಿ ಕಟ್ಟೆವಾಲ ವಂದಿಸಿದರು. ಕಾರ್ಯಕ್ರಮದಲ್ಲಿ ಬೋಧಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೂಡಿಕೆ ಮತ್ತು ಸೈಬರ್ ವಂಚನೆ ಕುರಿತು ಮಾಹಿತಿ ಪಡೆದುಕೊಂಡರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ