6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಚಿತ್ರದುರ್ಗ: 2025-26ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಡಾ.ಎಪಿಜೆ ಅಬ್ದುಲ್ ಕಲಾಂ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಅಲ್ಪಸಂಖ್ಯಾತರ ಸಮುದಾಯದವರಾದ ಮುಸ್ಲಿಂ, ಕ್ರಿಶ್ವಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಪರಿಶಿಷ್ಟ ಜಾತಿ, ಪ.ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಆನ್ಲೈನ್ನಲ್ಲಿ ಸೇವಾ ಸಿಂಧು ತಂತ್ರಾಂಶದ ಮೂಲಕ ಸಲ್ಲಿಸಬಹುದಾಗಿದೆ.
2025ರ ಮಾರ್ಚ್ 10 ಅರ್ಜಿ ಸಲ್ಲಿಸಲು ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು ಹಾಗೂ ಅಲ್ಪಸಂಖ್ಯಾತರ ಜಿಲ್ಲಾ, ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.