ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘ: ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ.!
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕು ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಾಲ್ಲೂಕಿನ ಪ್ರತಿಭಾವಂತ ಕುರುಬ ಸಮುದಾಯದ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯಲ್ಲಿ 2024-25ನೇ ಸಾಲಿನಲ್ಲಿ ಶೇ.85ಕ್ಕಿಂತ ಅತಿ ಹೆಚ್ಚು ಅಂಕ ಪಡೆದ ಸಮಾಜದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಕುರುಬ ಸಮಾಜದ ವಿದ್ಯಾರ್ಥಿಗಳು ಇದೇ ಜೂನ್ 10ರೊಳಗಾಗಿ ತಮ್ಮ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ತಾಲ್ಲೂಕು ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಕೆ.ಮಂಜುನಾಥ-9844412448 ಹಾಗೂ ಕಾರ್ಯದರ್ಶಿ ಹನಮಂತಗೌಡ ಪೂಜಾರ-9448339025 ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.