LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿವಿಧ ಅಂಚೆ ವಿಮೆ ಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

 

ಚಿತ್ರದುರ್ಗ :  ಚಿತ್ರದುರ್ಗ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆಯ ಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿವರ ಹಾಗೂ ದಾಖಲೆಗಳೊಂದಿಗೆ ಚಿತ್ರದುರ್ಗ ನಗರದ ಫಿಲ್ಟರ್ ಹೌಸ್ ಹಿಂಭಾಗದ  ವಿಭಾಗೀಯ ಅಂಚೆ  ಕಚೇರಿಯ ಮೊದಲನೇಯ ಮಹಡಿಯಲ್ಲಿ ಇದೇ ಜುಲೈ 29ರಂದು ಬೆಳಿಗ್ಗೆ 11ಕ್ಕೆ ಜರುಗುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಅಭ್ಯರ್ಥಿಯು ಕನಿಷ್ಟ 18 ವರ್ಷ ವಯೋಮಿತಿಯವರಾಗಿರಬೇಕು. ಎಸ್‍ಎಸ್‍ಎಲ್‍ಸಿ ಪಾಸಾಗಿರಬೇಕು. ಆಯ್ಕೆಯಾದ ಅಂಚೆ ಜೀವ ವಿಮಾ  ಪ್ರತಿನಿಧಿಗಳು ರೂ.5000/-  ರೂಪಾಯಿಗಳನ್ನು ಉಳಿತಾಯ ಪತ್ರ ರೂಪದಲ್ಲಿ ಜಮಾ ಮಾಡಲು ತಯಾರಿರಬೇಕು.

ನಿರುದ್ಯೋಗಿಗಳು, ಸ್ವ  ಉದ್ಯೋಗಿಗಳು, ಇತರೆ ವಿಮಾ  ಕಂಪನಿಗಳ ಮಾಜಿ ಪ್ರತಿನಿಧಿಗಳು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ನಿವೃತ್ತ  ಶಿಕ್ಷಕರು ಹಾಗೂ ಆಸಕ್ತಿಯುಳ್ಳ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಂಚೆ ಜೀವ ವಿಮೆ ಅಭಿವೃದ್ಧಿ ಅಧಿಕಾರಿ ಪಿ.ಮೊಹಮ್ಮದ್ ಶಫಾಯತ್ ಉಲ್ಲಾ ಶರೀಫ್ ಅವರ ದೂರವಾಣಿ ಸಂಖ್ಯೆ 9449849279 ಸಂಪರ್ಕಿಸಬಹುದು ಎಂದು ಚಿತ್ರದುರ್ಗ ವಿಭಾಗ ಅಂಚೆ ಅಧೀಕ್ಷಕರಾದ ಕೆ.ಆರ್.ಉಷಾ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026