LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತೋಟಗಾರಿಕೆ ಬೆಳೆ ವಿಮೆ ನೋಂದಣಿಗೆ ರೈತರಿಂದ ಆಹ್ವಾನ



ತೋಟಗಾರಿಕೆ ಇಲಾಖೆಯಿಂದ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆ ಅನುಷ್ಠಾನಗೊಳಿಸಲು ಬಳ್ಳಾರಿ, ಕುರುಗೋಡು ಮತ್ತು ಕಂಪ್ಲಿ ತಾಲ್ಲೂಕುಗಳ ಹೋಬಳಿ ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೆಂಪು ಮೆಣಸಿನಕಾಯಿ (ನೀರಾವರಿ) ಬೆಳೆ ಸೂಚಿಸಲಾಗಿದ್ದು, ರೈತರಿಂದ ಬೆಳೆ ವಿಮೆ ನೋಂದಣಿ ಮಾಡಿಕೊಳ್ಳಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ರತ್ನ ಯರಗಲ್ಲ ಅವರು ತಿಳಿಸಿದ್ದಾರೆ.

ಬೆಳೆ: ಕೆಂಪು ಮೆಣಸಿನಕಾಯಿ (ನೀರಾವರಿ) ಬೆಳೆಯಾಗಿದ್ದು, ವಿಮಾ ಮೊತ್ತ ಪ್ರತಿ ಎಕರೆಗೆ ರೂ.43,505, ರೈತರ ವಿಮಾ ಕಂತು (ಪ್ರತಿ ಎಕರೆಗೆ) ರೂ.2,175 ಆಗಿದೆ.

ಪಿಎಂಎಫ್ಬಿವೈ (ಪರಿಷ್ಕøತ) ಮಾರ್ಗಸೂಚಿಯನ್ವಯ ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿ ಒಳಪಡಿಸಲಾಗುತ್ತದೆ. ಬೆಳೆ ಸಾಲ ಪಡೆದ ರೈತರು ಈ ಯೋಜನೆಯಡಿ ಭಾಗವಹಿಸಲು ಇಚ್ಛಿಸದಿದ್ದಲ್ಲಿ ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರ ನೀಡಬೇಕು. ಅಂತಹ ರೈತರನ್ನು ಬೆಳೆ ವಿಮೆ ನೋಂದಣಿ ಯೋಜನೆಯಿಂದ ಕೈಬಿಡಲಾಗುವುದು.

ಶೇ.75 ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡರೆ ವಿಮಾ ಗರಿಷ್ಟ ಶೇ.25 ರಷ್ಟು ಪರಿಹಾರ ವಿಮಾ ಸಂಸ್ಥೆಯು ವಿಮಾ ಮಾಡಿಸಿದ ಎಲ್ಲಾ ರೈತರಿಗೆ ಇತ್ಯರ್ಥಪಡಿಸಿ ಮುಂದಿನ ಅವಧಿಗೆ ಅವರ ಬೆಳೆ ವಿಮೆ ರದ್ದುಪಡಿಸಲಾಗುವುದು.

ಬೆಳೆ ವಿಮೆ ಯೋಜನೆಗೆ ನೋಂದಾಯಿಸಿಕೊಳ್ಳಲು ಜುಲೈ 31 ಆಗಿದೆ.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ದೂ.08392-278177 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು