LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಾಗತಿಕ ಹೂಡಿಕೆದಾರರ ಸಮಾವೇಶ: ಆಸ್ಟ್ರೇಲಿಯಾ, ಜರ್ಮನಿ, ದಕ್ಷಿಣ ಕೊರಿಯಾಗೆ ಆಹ್ವಾನ

ನವದೆಹಲಿ: ಮುಂಬರುವ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ, ಜರ್ಮನಿ ಮತ್ತು ದಕ್ಷಿಣ ಕೊರಿಯಾ ದೇಶಗಳ ಹೈಕಮಿಷನರುಗಳನ್ನು ಭೇಟಿ ಮಾಡಿ, ಆಹ್ವಾನಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಉದ್ದೇಶಿತ ಸಮಾವೇಶಕ್ಕೆ ಪೂರ್ವಭಾವಿಯಾಗಿ ಎರಡು ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದ ಅವರು ನವದೆಹಲಿಯ ಕರ್ನಾಟಕ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ತಮ್ಮ ಕಾರ್ಯಕ್ರಮದ ಮೊದಲ ದಿನ ಅವರು ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ರಾಜ್ಯದ ಕೈಗಾರಿಕಾ ವಲಯದ ಬೆಳವಣಿಗೆಗೆ ಕೇಂದ್ರದ ನೆರವನ್ನು ಕೋರಿದ್ದರು. ಜತೆಗೆ ಸಿಂಗಪುರ್ ಹೈಕಮಿಷನರ್ ಅವರನ್ನು ಭೇಟಿ ಮಾಡಿ, ಹೂಡಿಕೆದಾರರ ಸಮಾವೇಶಕ್ಕೆ ಆಹ್ವಾನಿಸಿದ್ದರು.

ತಮ್ಮ ಎರಡು ದಿನಗಳ ಕಾರ್ಯಕ್ರಮದಲ್ಲಿ ಅವರು ಟಾಯ್ ಝೋನ್, ಎಎಂಡಿ, ವಾಟ್ಲೋ, ಭಾರತ್ ಸೆಮಿ ಸಿಸ್ಟಮ್ಸ್, ಥರ್ಡ್-ಐಟೆಕ್, ಆ್ಯಂಬರ್ ಎಂಟರ್ಪ್ರೈಸಸ್, ಎಚ್ಎಂಇಎಲ್ ಸೇರಿದಂತೆ ಹಲವು ಉದ್ಯಮ ಕಂಪನಿಗಳ ಪ್ರಮುಖರನ್ನು ಕಂಡು, ಅವರನ್ನೂ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಮಂತ್ರಿಸಿದ್ದಾರೆ.

ಎರಡನೇ ದಿನದಂದು ಅವರು ಆಸ್ಟ್ರೇಲಿಯಾ ಹೈಕಮಿಷನರ್ ಫಿಲಿಫ್ ಗ್ರೀನ್ ಅವರೊಂದಿಗೆ ಶಿಕ್ಷಣ, ವೈಮಾಂತರಿಕ್ಷ, ಜೈವಿಕ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಪರಸ್ಪರ ಸಹಕಾರ ಕುರಿತು ಮಾತುಕತೆ ನಡೆಸಿ, ಬಂಡವಾಳ ಹೂಡಿಕೆಗೆ ಸಂಪೂರ್ಣ ಬೆಂಬಲ ಕೊಡುವುದಾಗಿ ತಿಳಿಸಿದರು.

ಜರ್ಮನಿ ಮಿಷನ್ ಉಪಮುಖ್ಯಸ್ಥ ಜಾರ್ಜ್ ಎಂಜ್ವೀಲರ್ ಅವರೊಂದಿಗಿನ ಭೇಟಿಯಲ್ಲಿ ಅವರು ಮರುಬಳಕೆ ಮಾಡಬಹುದಾದ ಇಂಧನ, ಹವಾಮಾನ ಬದಲಾವಣೆ ಮತ್ತು ಸುಸ್ಥಿರ ಅಭಿವೃದ್ಧಿ, ಎಂಜಿನಿಯರಿಂಗ್ ಮತ್ತು ರಾಸಾಯನಿಕಗಳ ಉತ್ಪಾದನೆ ಇತ್ಯಾದಿ ಕ್ಷೇತ್ರಗಳಲ್ಲಿ ಸಹಕಾರ ಸಾಧ್ಯತೆ ಕುರಿತು ವಿಚಾರ ವಿನಿಮಯ ನಡೆಸಿದರು.

ದಕ್ಷಿಣ ಕೊರಿಯಾದ ರಾಯಭಾರಿ ಚಾಂಗ್ ಜೇಬಾಕ್ ಅವರನ್ನು ಕಂಡ ಸಚಿವರು, ತಂತ್ರಜ್ಞಾನ, ನಾವೀನ್ಯತೆ, ಎಲೆಕ್ಟ್ರಾನಿಕ್ಸ್, ವಾಹನ ತಯಾರಿಕೆ ಮತ್ತು ಮಶೀನ್ ಟೂಲ್ ಕ್ಷೇತ್ರಗಳಲ್ಲಿ ರಾಜ್ಯದಲ್ಲಿ ಹೂಡಿಕೆಗೆ ಇರುವ ಯಥೇಚ್ಛ ಅವಕಾಶಗಳ ಬಗ್ಗೆ ಚರ್ಚಿಸಿದರು.

ಕಾರ್ಯಕ್ರಮದಲ್ಲಿ ಸಚಿವರ ಜೊತೆಗೆ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಇದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು SPRINTFEST 2026 ನಲ್ಲಿ ₹40 ಲಕ್ಷ ಸಂಗ್ರಹಿಸುವ ಗುರಿಸಂಧ್ಯಾ ಜನ ಸಂಸ್ಕೃತಿ ಟ್ರಸ್ಟ್ ನಿಂದ 8ನೇ ವರ್ಷದ ವಾರ್ಷಿಕೋತ್ಸವ ಮಹಿಳಾ ದಿನಾಚರಣೆ ಪ್ರಯುಕ್ತ ಮಾಜಿ ಪ್ರಧಾನಿ ಸ್ಮರಣೆಯಲ್ಲಿ ಇಂದಿರಾ ಕ್ರೀಡೋತ್ಸವ-2026ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛಜಿಬಿಎಯಿಂದ ಬೀದಿ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಯಶಸ್ವಿನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ