LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ.!

 

ದಾವಣಗೆರೆ: ನಗರದ ಬೇತೂರು ರಸ್ತೆ, ಅಜಾದ್ ನಗರ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮಗಳು, ಸಂಸ್ಥೆಗಳು, ಗ್ರಾಮ ಪಂಚಾಯತಿಗಳು ಮತ್ತು ಸ್ಥಳೀಯ ಸಂಸ್ಥೆಗಳು, ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘ, ವ್ಯವಸಾಯ ಸೇವಾ ಸಹಕಾರ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಥವಾ ವಿ.ಎಸ್.ಎಸ್.ಎಂ.ಎಸ್, ತೋಟಗಾರಿಕೆ ಉತ್ಪಾನ್ನಗಳ ಸಹಕಾರ ಸಂಘದ ಮಾರಾಟ ಮಂಡಳಿ ನಿಯಮಿತ, ನೊಂದಾಯಿತ ಸಹಕಾರ ಸಂಘಗಳು, ನೊಂದಾಯಿತ ಪ್ರಾಥಮಿಕ ಬಳಕೆದಾರರ ಸಹಕಾರ ಸಂಘಗಳು.

ದೊಡ್ಡ ಪ್ರಮಾಣದ ಆದಿವಾಸಿಗಳ ವಿವಿದೋದ್ದೇಶ ಸಹಕಾರ ಸಂಘ, ನೊಂದಾಯಿತ ನೇಕಾರರ ಮತ್ತು ಮಹಿಳಾ ವಿವಿದೋದ್ದೇಶ ಸಹಕಾರ ಸಂಘಗಳು, ನೊಂದಾಯಿತ ವಿವಿದೋದ್ದೇಶ ಸಹಕಾರ ಸಂಘಗಳು, ಅಂಗವಿಕಲರ ಕಲ್ಯಾಣ ಸಹಕಾರ ಸಂಘಗಳು, ಬ್ಯಾಂಕಿನಿಂದ ನಡೆಸಲ್ಪಡುವ ಸಹಕಾರ ಸಂಘಗಳು ಅಥವಾ ಸಹಕಾರ ಬ್ಯಾಂಕ್( ಸಹಕಾರ ಸಂಘಗಳು ಕನಿಷ್ಠ 3 ವರ್ಷದ ಹಿಂದೆ ನೋಂದಣಿಯಾಗಿರಬೇಕು. ಕನಿಷ್ಠ ಎರಡು ಲಕ್ಷ ರೂಪಾಯಿ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರಬೇಕು) ಹಾಗೂ ವಿಕಲಚೇತನರು, ತೃತೀಯ ಲಿಂಗಿಗಳು ಅರ್ಜಿ ಸಲ್ಲಿಸಬಹುದು.

ಅಜಾದ್ ನಗರ ಕೇಂದ್ರ ಸ್ಥಾನ, ಸೇರ್ಪಡೆಗೊಳ್ಳಲಿರುವ ಪ್ರದೇಶ ಹಳೇಬೇತೂರು ರಸ್ತೆ, ಅಜಾದ್ ನಗರ ಮತ್ತು ಸುತ್ತಮುತ್ತಲಿನ ಪ್ರದೇಶ, ಅಂತ್ಯೋದಯ-85, ಬಿ.ಪಿ.ಎಲ್ 722, ಎಪಿಎಲ್-165 ಅವಶ್ಯವಿರುವ ಬ್ಯಾಂಕ್ ಠೇವಣಿ ಮೊತ್ತ 50,000/- ಇರುತ್ತದೆ.

ಅರ್ಜಿ ನಮೂನೆ ‘ಎ’, ನಲ್ಲಿ ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಭರ್ತಿಮಾಡಿದ ಅರ್ಜಿಯನ್ನು ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನದೊಳಗಾಗಿ ಉಪ ನಿರ್ದೇಶಕರು, ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕೊಠಡಿ ಸಂಖ್ಯೆ 4, ಜಿಲ್ಲಾಡಳಿತ ಭವನ ದಾವಣಗೆರೆ. ಈ ವಿಳಾಸಕ್ಕೆ  ಸಲ್ಲಿಸಬೇಕು ಎಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST