
ಅಭಿನಂದನಾ ಸಮಾರಂಭದ ದಿನದಂದು ನಡೆದ ಅಹಿತಕರ ಘಟನೆಗಳು ಹಾಗೂ ಸಾವು - ನೋವುಗಳ ಬಗ್ಗೆ ಉಂಟಾಗಿರುವ ಲೋಪಗಳ ಕುರಿತು ಸಮಗ್ರವಾಗಿ ವಿಚಾರಣೆ ನಡೆಸಲು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಗದೀಶ ಜಿ. ಅವರನ್ನು ಸರ್ಕಾರವು ನೇಮಿಸಿದೆ.
ಈ ಸಂಬಂಧ 2025 ರ ಜೂನ್ 13 ರಂದು ಪೂರ್ವಾಹ್ನ 11.00 ಗಂಟೆಯಿಂದ ಅಪರಾಹ್ನ 1.30 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣ, ಜಿಲ್ಲಾಧಿಕಾರಿಗಳ ಕಛೇರಿ, ಬೆಂಗಳೂರು ನಗರ ಜಿಲ್ಲೆ, ಕೆ.ಜಿ ರಸ್ತೆ, ಬೆಂಗಳೂರು -560009 ಇಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು, ಅಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿರುವ ಅಹಿತಕರ ಘಟನೆಗಳಿಗೆ ಸಂಬಂಧಿಸಿದ ಮಾಹಿತಿಯುಳ್ಳ ಅಥವಾ ಈ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದ ಯಾರೇ ಆಗಲಿ ನನ್ನ ಸಮಕ್ಷಮ ಹಾಜರಾಗಿ ಸಾಕ್ಷ್ಯ ಅಥವಾ ಹೇಳಿಕೆಯನ್ನು ನೀಡಬಹುದಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಗದೀಶ ಜಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.