LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಲು ಮಕ್ಕಳಿಂದ ನೋಂದಣಿಗೆ ಆಹ್ವಾನ





ಬಳ್ಳಾರಿ,ನ.04

ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರಸ್ತಕ ಸಾಲಿನ ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಯೋಜಿಸಿದ್ದು, ಕಾರ್ಯಕ್ರಮದಲ್ಲಿ ವಿವಿಧ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಲು ಮಕ್ಕಳಿಂದ ನೋಂದಣಿಗೆ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

*ವಿವಿಧ ಸ್ಪರ್ಧೆಗಳು:*

ಸೃಜನಾತ್ಮಕ ಕಲೆ: ಚಿತ್ರಕಲೆ, ಕರಕುಶಲೆ, ಜೇಡಿಮಣ್ಣಿನ ಕಲೆ.

ಸೃಜನಾತ್ಮಕ ಬರವಣಿಗೆ: ಕಥೆ, ಕವನ, ಪ್ರಬಂಧ ಬರೆಯುವುದು.

ಸೃಜನಾತ್ಮಕ ಪ್ರದರ್ಶನ ಕಲೆ: ಶಾಸ್ತಿಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಹಾಗೂ ಹಿಂದೂಸ್ತಾನಿ ಶಾಸ್ರ್ತೀಯ ಸಂಗೀತ, ವಾದ್ಯ ಸಂಗೀತ, ಯಕ್ಷಗಾನ, ಯಕ್ಷಿಣಿ ಪ್ರದರ್ಶನ, ಸುಗಮ ಸಂಗೀತ, ಏಕಪಾತ್ರಾಭಿನಯ ಸೇರಿದಂತೆ ಯಾವುದಾದರೊಂದು ಕಲೆಯನ್ನು ವಿಷಯದ ಬಗ್ಗೆ ಪ್ರದರ್ಶಿಸಲು ಅವಕಾಶವಿರುತ್ತದೆ.

ವಿಜ್ಞಾನದಲ್ಲಿ ನೂತನ ಆವಿಷ್ಕಾರ: ವಿಜ್ಞಾನಕ್ಕೆ ಸಂಬ0ಧಪಟ್ಟ0ತೆ ಒಂದು ವಿಷಯದ ಬಗ್ಗೆ ಮಾದರಿ ಪ್ರದರ್ಶನ ಹಾಗೂ ವಿವರಣೆ ನೀಡುವುದು.

ಅಂಗವಿಕಲ, ಬುಡಕಟ್ಟು ಪ್ರದೇಶದ ಮಕ್ಕಳಿಗಾಗಿ ಮೇಲಿನ ಯಾವುದೇ ಪ್ರಕಾರದಲ್ಲಿ ಭಾಗವಹಿಸಬಹುದು. 09 ರಿಂದ 16 ವರ್ಷದೊಳಗಿನ ಆಸಕ್ತಿಯುಳ್ಳ ಸರ್ಕಾರಿ ಶಾಲೆ ಮಕ್ಕಳು, ಗ್ರಾಮೀಣ ಪ್ರದೇಶ ಮಕ್ಕಳು ನೋಂದಾಯಿಸಿಕೊಳ್ಳಬಹುದು. ಸೌಲಭ್ಯ ವಂಚಿತ ಮಕ್ಕಳಿಗೆ ಸುಧಾರಣಾ ಸಂಸ್ಥೆಗಳ ಬಾಲಕರು, ಬಾಲಕಿಯರ ಬಾಲ ಮಂದಿರದ ಮಕ್ಕಳಿಗೆ ಮೊದಲನೇ ಆದ್ಯತೆ ನೀಡಲಾಗುವುದು.

ಮಕ್ಕಳ ಹೆಸರು ನೋಂದಾಯಿಸಿದವರಿಗೆ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ನೋಂದಾಯಿಸಿಕೊಳ್ಳಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು. ನ.10 ಕೊನೆಯ ದಿನವಾಗಿದೆ. ಕಾರ್ಯಕ್ರಮದ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂ.08392-266219, ಮೊ.9741965198 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

--------------

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು