IPL 2024 : ರೋಹಿತ್ ಶರ್ಮಾ ತಬ್ಬಿಕೊಂಡ ಹಾರ್ದಿಕ್ ಪಾಂಡ್ಯ
2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 17ನೇ ಆವೃತ್ತಿಗೆ ಕ್ಷಣಗಣನೆ ಆರಂಭವಾಗಿದ್ದು, ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್‌ಗಾಗಿ ಭಾರತೀಯ ಅಭಿಮಾನಿಗಳು ಕಾತರರಾಗಿದ್ದಾರೆ. ಶುಕ್ರವಾರ, ಮಾರ್ಚ್ 22ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ. ಇನ್ನು ಸಾಂಪ್ರದಾಯಿಕ ಎದುರಾಳಿಗಳಾದ ಸಿಎಸ್‌ಕೆ ಮತ್ತು ಆರ್‌ಸಿಬಿ ತಂಡಗಳು ಸೆಣಸಾಡಲಿವೆ. ಇದೇ ವೇಳೆ ನೂತನ ನಾಯಕ ಹಾರ್ದಿಕ್ ಪಾಂಡ್ಯ ಅವರು ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಅಪ್ಪಿಕೊಳ್ಳುವ ಮೂಲಕ ಮುಂಬೈ ಇಂಡಿಯನ್ಸ್ ತಂಡದಲ್ಲಿ "ಆಲ್ ಈಸ್ ವೆಲ್' ಎಂದು ತೋರುತ್ತಿದೆ. ಐದು ಬಾರಿಯ ಚಾಂಪಿಯನ್ ತಂಡದ ಇಬ್ಬರು ಆಟಗಾರರ ನಡುವಿನ ಬಿರುಕು ವದಂತಿಗಳನ್ನು ಕೊನೆಗೊಳಿಸಲು, ಹಾರ್ದಿಕ್ ಪಾಂಡ್ಯ ಅಭ್ಯಾಸದ ಅವಧಿಯಲ್ಲಿ ರೋಹಿತ್ ಶರ್ಮಾರತ್ತ ತೆರಳಿ ಅವರನ್ನು ತಬ್ಬಿಕೊಂಡರು. ಇದೇ ವೇಳೆ ರೋಹಿತ್ ಶರ್ಮಾ ಅವರು ಹಾರ್ದಿಕ್ ಪಾಂಡ್ಯರನ್ನು ನಗುಮುಖದಿಂದ ಸ್ವಾಗತಿಸಿ, ಬೆಚ್ಚಗಿನ ಅಪ್ಪುಗೆಯನ್ನು ಹಂಚಿಕೊಂಡರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 2024ರ ಐಪಿಎಲ್‌ಗಾಗಿ ಮುಂಬೈ ಇಂಡಿಯನ್ಸ್ ತಂಡ ಬ್ಯಾಟರ್ಸ್ ರೋಹಿತ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ನೆಹಾಲ್ ವಧೇರಾ, ಶಿವಾಲಿಕ್ ಶರ್ಮಾ. ಆಲ್‌ರೌಂಡರ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಅಂಶುಲ್ ಕಾಂಬೋಜ್, ಮೊಹಮ್ಮದ್ ನಬಿ, ಶಮ್ಸ್ ಮುಲಾನಿ, ನಮನ್ ಧೀರ್, ರೊಮಾರಿಯೊ ಶೆಫರ್ಡ್. ಬೌಲರ್‌ಗಳು: ಅರ್ಜುನ್ ತೆಂಡೂಲ್ಕರ್, ಜಸ್ಪ್ರೀತ್ ಬುಮ್ರಾ, ಕುಮಾ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.