Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಅಮೆರಿಕದ ಸೇನಾ ತಾಣ ಟಾರ್ಗೆಟ್‌ ಮಾಡಿದ ಇರಾನ್‌; MQ-9 ಡ್ರೋನ್‌ಗಳಿಗೆ ಹಾನಿಯ ವರದಿ

ಟೆಹ್ರಾನ್‌/ವಾಷಿಂಗ್ಟನ್‌: ಶ್ವೇತಭವನದಲ್ಲಿ ನಡೆದ ಮಹತ್ವದ ಸಭೆಯ ಬಳಿಕವೂ ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಕಡಿಮೆಯಾಗದೇ, ಕೆಲವೇ ಗಂಟೆಗಳಲ್ಲಿ ಪರಿಸ್ಥಿತಿ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಇರಾನ್‌ ಅಮೆರಿಕದ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ ನಡೆಸಿದ್ದು, ಈ ದಾಳಿಯಿಂದ ಅಮೆರಿಕದ ಅತ್ಯಾಧುನಿಕ MQ-9 ರೀಪರ್‌ ಡ್ರೋನ್‌ಗಳಿಗೆ ಭಾರೀ ಹಾನಿಯಾಗಿದೆ ಎಂದು ವರದಿಗಳು ತಿಳಿಸಿವೆ. ಕೋಟ್ಯಂತರ ರೂಪಾಯಿ ಮೌಲ್ಯದ ಸೇನಾ ಸಂಪತ್ತು ನಷ್ಟವಾಗಿರುವುದಾಗಿ ಹೇಳಲಾಗುತ್ತಿದೆ. ಕುವೈತ್‌ನ ಅಲಿ ಅಲ್‌ ಸಲೇಂ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ಇರಾನ್‌ ಫತೇಹ್-110 ಕ್ಷಿಪಣಿ ಉಡಾಯಿಸಿತ್ತು. ವಾಯು ರಕ್ಷಣಾ ವ್ಯವಸ್ಥೆ ಕ್ಷಿಪಣಿಯನ್ನು ಯಶಸ್ವಿಯಾಗಿ ತಡೆದರೂ, ಅದರ ಅವಶೇಷಗಳು ಸೇನಾ ನೆಲೆಗೆ ಅಪ್ಪಳಿಸಿ ಡ್ರೋನ್‌ಗಳಿಗೆ ಹಾನಿ ಉಂಟುಮಾಡಿವೆ. ಘಟನೆಯಲ್ಲಿ ಹಲವು ಅಮೆರಿಕ ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಅಮೆರಿಕ ಸೇನೆಯ ಅತ್ಯಂತ ಪ್ರಮುಖ ಯುದ್ಧಾಸ್ತ್ರಗಳಲ್ಲಿ ಒಂದಾದ MQ-9 ರೀಪರ್‌ ಡ್ರೋನ್‌ ತನ್ನ ಗೂಢಚರ್ಯೆ ಹಾಗೂ ನಿಖರ ದಾಳಿ ಸಾಮರ್ಥ್ಯದಿಂದ ವಿಶ್ವದ ಗಮನ ಸೆಳೆದಿದೆ. ‘ಪ್ರಿಡೇಟರ್‌’ ಎಂದೇ ಪ್ರಸಿದ್ಧಿಯಾಗಿರುವ ಈ ಡ್ರೋನ್‌ ಎದುರಾಳಿಗಳ ಚಲನವಲನಗಳನ್ನು ಪತ್ತೆಹಚ್ಚಿ, ಲೇಸರ್‌ ಗೈಡೆಡ್‌ ಕ್ಷಿಪಣಿಗಳ ಮೂಲಕ ಅಚ್ಚುಕಟ್ಟಾಗಿ ಗುರಿ ಭೇದಿಸುವ ಸಾಮರ್ಥ್ಯ ಹೊಂದಿದೆ. 50 ಸಾವಿರ ಅಡಿ ಎತ್ತರದಲ್ಲಿ ಹಾರಬಲ್ಲ ಈ ಡ್ರೋನ್‌ ನಿರಂತರವಾಗಿ 27 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಬಲ್ಲದು. ಸುಧಾರಿತ ಸೆನ್ಸರ್‌, ಅತ್ಯಾಧುನಿಕ ಕ್ಯಾಮೆರಾ ಹಾಗೂ ದಾಳಿ ವ್ಯವಸ್ಥೆಗಳನ್ನು ಹೊಂದಿರುವ MQ-9 ರೀಪರ್‌ ವಿಶ್ವದ ಅತ್ಯಂತ ಶಕ್ತಿಶಾಲಿ ಮಾನವರಹಿತ ಯುದ್ಧ ವಿಮಾನಗಳಲ್ಲಿ ಒಂದಾಗಿ ಪರಿಗಣಿಸಲಾಗಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ