LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಇಸ್ರೇಲ್ ಜೊತೆಗೆ ಯಾವುದೇ ಕದನ ವಿರಾಮ ಏರ್ಪಟ್ಟಿಲ್ಲ'- ಇರಾನ್ ವಿದೇಶಾಂಗ ಸಚಿವ ಸ್ಪಷ್ಟನೆ

ಟೆಹ್ರಾನ್ : ಇಸ್ರೇಲ್ ಜೊತೆಗೆ ಯಾವುದೇ ಕದನ ವಿರಾಮ ಏರ್ಪಟ್ಟಿಲ್ಲ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ತಿಳಿಸಿದ್ದಾರೆ.

ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಶ್ವೇತಭವನ ಘೋಷಿಸಿದ ಬೆನ್ನಲ್ಲೇ, ಅಬ್ಬಾಸ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಪೋಸ್ಟ್ ಮಾಡಿದ್ದಾರೆ.

'ಇಸ್ರೇಲ್ ದಾಳಿ ನಿಲ್ಲಿಸಿದ ಕೂಡಲೇ ನಾವು ನಿಲ್ಲಿಸುತ್ತೇವೆ. ಯುದ್ಧ ಪ್ರಾರಂಭಿಸಿದ್ದು ಇಸ್ರೇಲ್, ನಾವಲ್ಲ ಎಂದು ನಾವು ಹಲವು ಬಾರಿ ಸ್ಪಷ್ಟಪಡಿಸಿದ್ದೇವೆ. ಈವರೆಗೂ ಕದನ ವಿರಾಮ ಅಥವಾ ಸೇನಾ ಕಾರ್ಯಾಚರಣೆ ಸ್ಥಗಿತಗೊಳಿಸುವ ಬಗ್ಗೆ ಯಾವುದೇ ಒಪ್ಪಂದ ನಡೆದಿಲ್ಲ' ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

'ಇರಾನ್ ಜನತೆ ಮೇಲೆ ಇಸ್ರೇಲ್ ಆಡಳಿತವು ನಡೆಸುತ್ತಿರುವ ಕಾನೂನು ಬಾಹಿರ ಆಕ್ರಮಣವನ್ನು ಟೆಹರಾನ್ ಸಮಯ ಬೆಳಿಗ್ಗೆ 4 ಗಂಟೆಯೊಳಗೆ ನಿಲ್ಲಿಸಿದರೆ, ಅವರಿಗೆ ಪ್ರತ್ಯುತ್ತರ ನೀಡುವ ಯಾವುದೇ ಉದ್ದೇಶ ನಮಗಿಲ್ಲ. ನಮ್ಮ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸುವ ಬಗ್ಗೆ ಅಂತಿಮ ನಿರ್ಧಾರವನ್ನು ನಂತರ ತೆಗೆದುಕೊಳ್ಳಲಾಗುವುದು' ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026