Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮುರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಅಕ್ರಮಗಳೆ?

ಮುರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಅಕ್ರಮಗಳೆ?


ವಿದ್ಯಾರ್ಥಿಗಳ ಸಿಗರೇಟ್ ಸೇವನೆ – ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಲಗೂರು ಗ್ರಾಮದಲ್ಲಿರುವ ಮುರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ನಡೆಯುತ್ತಿರುವ ಕೆಲವು ಬೆಳವಣಿಗೆಗಳು ಸಾರ್ವಜನಿಕರಲ್ಲಿ ಗಂಭೀರ ಅನುಮಾನ ಹಾಗೂ ಆತಂಕವನ್ನುಂಟು ಮಾಡಿವೆ. ಶಾಲಾ ಆವರಣದಲ್ಲೇ ವಿದ್ಯಾರ್ಥಿಗಳು ಸಿಗರೇಟ್ ಸೇವನೆ ಮಾಡುತ್ತಿರುವ ದೃಶ್ಯಗಳು ಕಾಣಿಸಿಕೊಂಡಿದ್ದು, ಪೋಷಕರು ಮತ್ತು ಗ್ರಾಮಸ್ಥರಲ್ಲಿ ಆಕ್ರೋಶ ವ್ಯಕ್ತವಾಗಿದೆ.

ವಿದ್ಯಾರ್ಥಿಗಳು ವಸತಿ ಶಾಲೆಯೊಳಗೆ ಇಂತಹ ಅಶಿಸ್ತಿನ ಚಟುವಟಿಕೆಗಳಲ್ಲಿ ತೊಡಗಿದ್ದರೂ, ಶಾಲೆಯ ಶಿಕ್ಷಕರು, ವಾರ್ಡನ್‌ಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಮೇಲ್ವಿಚಾರಣೆ ನಡೆಸುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ವಿದ್ಯಾರ್ಥಿಗಳ ನಡವಳಿಕೆಗೆ ಮಾರ್ಗದರ್ಶನ ನೀಡಬೇಕಾದವರು ಮೌನ ವಹಿಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಮಾತ್ರವಲ್ಲದೆ, ಶಿಸ್ತು, ಆರೋಗ್ಯ ಹಾಗೂ ನೈತಿಕ ಮೌಲ್ಯಗಳನ್ನು ರೂಪಿಸಬೇಕಾದ ವಸತಿ ಶಾಲೆಯಲ್ಲೇ ಈ ರೀತಿಯ ಅಸಮರ್ಪಕ ಘಟನೆಗಳು ನಡೆಯುತ್ತಿರುವುದು ವಿಷಾದಕರ ಸಂಗತಿಯಾಗಿದೆ. ಬಾಲಕರ ಭವಿಷ್ಯ ರೂಪಿಸಬೇಕಾದ ಶಿಕ್ಷಣ ಸಂಸ್ಥೆಯಲ್ಲಿ ಇಂತಹ ದುರುಪಯೋಗಗಳು ನಡೆಯಲು ಅವಕಾಶ ನೀಡಿರುವುದು ಆಡಳಿತದ ವೈಫಲ್ಯವೆಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಈ ಸಂಬಂಧ ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಮೇಲಾಧಿಕಾರಿಗಳು ತಕ್ಷಣವೇ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಜೊತೆಗೆ ಘಟನೆಗೆ ಹೊಣೆಗಾರರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮಗಳನ್ನು ಜಾರಿಗೆ ತರಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಗನ ಕೊಲೆಯ ಸೇಡು: ರಣಚಂಡಿಯಾದ ಹೆತ್ತವಳು! ರಕ್ತಕ್ಕೆ ರಕ್ತವೆಂದು 12 ವರ್ಷಗಳ ಬಳಿಕ ಮುಹೂರ್ತ ಇಟ್ಟ ತಾಯಿ!₹281.48 ಕೋಟಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ; ಸರ್ಕಾರದ ತನಿಖೆಗೆ ಆಗ್ರಹಫ್ರೀಡಂ ಹಬ್ಬದಲ್ಲಿ ‘ಮೋದಿ ಮೋದಿ’ ಘೋಷಣೆ; ಡಿಕೆಶಿ ಮಾತಿನಲ್ಲೇ ಜನರಿಗೆ ಟಾಂಗ್ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ದಂಡಿನ ಆಯ್ಕೆ ಮಾಡುವಂತೆ ಸಿದ್ದು ತುಮಕೂರು ಆಗ್ರಹನಕಲಿ ಎನ್‌ಕೌಂಟರ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿಹಳಿಸಗರ ಸರ್ಕಾರಿ ಶಾಲೆಯ ದುಸ್ಥಿತಿ: ಪುಟಾಣಿಗಳ ಜೀವದೊಂದಿಗೆ ಚೆಲ್ಲಾಟ; ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪದುಗೃಹ ಸಚಿವರ ಘೋಷಣೆಗೆ ಸವಾಲೇ? ಶಹಾಪುರದಲ್ಲಿ ಮತ್ತೆ ಜೋರಾದ ಅಕ್ರಮ ಮರಳು ಸಾಗಾಟಒಂದು ವಾರದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿ: ಇಲ್ಲದಿದ್ದರೆ ಬೃಹತ್ ಪ್ರತಿಭಟನೆ – ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಕೆಕೆನಾಲ್ ಒಡೆದು ಸಾವಿರಾರು ಲೀಟರ್ ನೀರು ಪೋಲು: ರೈತರ ಜಮೀನು ಜಲಾವೃತ, ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪದ ಆರೋಪನಾರಾಯಣಪುರ ಬಲದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ: ತಕ್ಷಣ ನಿರ್ವಹಣೆಗೆ ರೈತ ಸಂಘ ಆಗ್ರಹ