LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಶಾ ಫೌಂಡೇಶನ್ ಗ್ಯಾಸ್ ಸ್ಮಶಾನ ಪ್ರಕರಣ - ಹೈಕೋರ್ಟ್‌ನಲ್ಲಿ ಅರ್ಜಿ ವಜಾ

ಚೆನ್ನೈ : ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದ ಇಶಾ ಫೌಂಡೇಶನ್ ನಿರ್ಮಿಸುತ್ತಿರುವ ಗ್ಯಾಸ್ ಆಧಾರಿತ ಸ್ಮಶಾನದ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಈ ಸ್ಮಶಾನವು ಸಾಮಾಜಿಕ ಕಲ್ಯಾಣಕ್ಕೆ ಸೇವೆ ಸಲ್ಲಿಸುವ ಉದ್ದೇಶ ಹೊಂದಿದ್ದು, ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಇಶಾ ಫೌಂಡೇಶನ್‌ನಿಂದ ಕಾಲಭೈರವ ಧಗನ ಮಂಟಪ (ಗ್ಯಾಸ್ ಆಧಾರಿತ ಸ್ಮಶಾನ) ನಿರ್ಮಾಣವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಮಣೀಂದ್ರ ಮೋಹನ್ ಶ್ರೀವಾಸ್ತವ ಹಾಗೂ ನ್ಯಾಯಮೂರ್ತಿ ಜಿ. ಅರುಳ್ ಮುರುಗನ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಅರ್ಜಿಯನ್ನು ತಿರಸ್ಕರಿಸಿ ಮಹತ್ವದ ಆದೇಶ ಹೊರಡಿಸಿದೆ.

ತಮಿಳುನಾಡು ಗ್ರಾಮ ಪಂಚಾಯತ್ ನಿಯಮಗಳ ಪ್ರಕಾರ, ವಸತಿ ಪ್ರದೇಶ ಅಥವಾ ಕುಡಿಯುವ ನೀರು ಸರಬರಾಜು ಇರುವ ಸ್ಥಳದಿಂದ 90 ಮೀಟರ್ ವ್ಯಾಪ್ತಿಯೊಳಗೆ ಸ್ಮಶಾನ ನಿರ್ಮಾಣಕ್ಕೆ ಪರವಾನಗಿ ನೀಡುವುದಕ್ಕೆ ಯಾವುದೇ ನಿಷೇಧವಿಲ್ಲ ಎಂದು ನ್ಯಾಯಾಲಯ ಹೇಳಿದೆ. ನಿಯಮಾನುಸಾರ ಗ್ರಾಮ ಪಂಚಾಯತ್‌ನಿಂದ ಅಗತ್ಯ ಪರವಾನಗಿ ಪಡೆದಿದ್ದರೆ ಸ್ಮಶಾನ ನಿರ್ಮಾಣವನ್ನು ಕಾನೂನುಬಾಹಿರ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

ಗ್ಯಾಸ್ ಆಧಾರಿತ ಸ್ಮಶಾನವು ಪರಿಸರದ ಮೇಲೆ ಕಡಿಮೆ ಪರಿಣಾಮ ಬೀರುವ ಆಧುನಿಕ ವ್ಯವಸ್ಥೆಯಾಗಿದ್ದು, ಇದು ಸಮಾಜಕ್ಕೆ ಉಪಯುಕ್ತ ಸೇವೆ ಒದಗಿಸುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಆದ್ದರಿಂದ ಇಂತಹ ಸೌಲಭ್ಯವನ್ನು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧ ಎಂದು ಹೇಳಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

ಈ ಪ್ರಕರಣವು ಇಕಾರೈ ಪೊಲುವಂಪಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಗ್ರಾಮೀಣ ಪಂಚಾಯತ್‌ಗಳ ಸಹಾಯಕ ನಿರ್ದೇಶಕರು ಹಾಗೂ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಯಮತ್ತೂರು ದಕ್ಷಿಣ ಜಿಲ್ಲಾ ಪರಿಸರ ಎಂಜಿನಿಯರ್ ನೀಡಿದ್ದ ಅನುಮತಿ ಆದೇಶಗಳ ವಿರುದ್ಧ ಸಲ್ಲಿಸಲಾದ ಅರ್ಜಿಗಳಿಗೆ ಸಂಬಂಧಪಟ್ಟಿತ್ತು. ಈ ಆದೇಶಗಳ ಮೂಲಕ ಇಶಾ ಫೌಂಡೇಶನ್‌ಗೆ ಸ್ಮಶಾನ ಸ್ಥಾಪನೆಗೆ ಅನುಮತಿ ನೀಡಲಾಗಿತ್ತು. ಇದೀಗ ಆ ಎಲ್ಲಾ ಆದೇಶಗಳನ್ನು ಮದ್ರಾಸ್ ಹೈಕೋರ್ಟ್ ಮಾನ್ಯ ಮಾಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026