E-PAPER
16 Nov 2026, 02:20:21 AM|
Gold₹13605/gGold24K ₹13,605/g - 22K ₹12,460/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಜಾಗತೀಕ ಲಿಂಗಾಯತ ಮಹಾಸಭಾದಿಂದ ನಾಗನೂರು ರುದ್ರಾಕ್ಷಿ ಮಠದಲ್ಲಿ 24 ಮತ್ತು 25 ರಂದು ಇಷ್ಟಲಿಂಗ ಪೂಜೆ

ಬೆಳಗಾವಿ: ಇದೇ ತಿಂಗಳ ಶುಕ್ರವಾರ ದಿನಾಂಕ 24 ಮತ್ತು ಶನಿವಾರ ದಿನಾಂಕ 25 ರಂದು ಜಾಗತಿಕ ಲಿಂಗಾಯಿತ ಮಹಾಸಭೆಯ ಬೆಳಗಾವಿ ಜಿಲ್ಲಾ ಘಟಕವು ಬೆಳಗಾವಿ ನಾಗನೂರು ರುದ್ರಾಕ್ಷಿ ಮಠದ ಸಹಯೋಗದೊಂದಿಗೆ ಎರಡು ದಿನಗಳ ಕಾಲ ಇಷ್ಟ ಲಿಂಗ ಪೂಜಾ ಕಾರ್ಯಕ್ರಮ  ಮತ್ತು ಬಸವಾದಿ ಶರಣರ ವಚನ ದರ್ಶನ ಪ್ರವಚನ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಠ ಮತ್ತು ಜಾಗತಿಕ ಲಿಂಗಾಯತ ಮಹಾಸಭಾ ಪ್ರಕಟಣೆ ತಿಳಿಸಿದೆ.
ಎರಡು ದಿನಗಳ ಕಾಲ ಬೆಳಗಿನ 7-00 ಗಂಟೆಗೆ ಇಷ್ಟ ಲಿಂಗ ಪೂಜೆ, ಇಷ್ಟಲಿಂಗ ದೀಕ್ಷೆ, ಪ್ರಾತ್ಯಕ್ಷಿಕೆ ಹಾಗೂ ವಚನ ಪಠಣ ಕಾರ್ಯಕ್ರಮಗಳು ನಡೆಯಲಿವೆ.
ನಾಗನೂರು ರುದ್ರಾಕ್ಷಿ ಮಠದ ಪೀಠಾಧಿಕಾರಿ ಡಾ.ಅಲ್ಲಮಪ್ರಭು ಮಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸಾವಿರಾರು ಜನ ಭಾಗವಹಿಸಲಿದ್ದಾರೆ.
ಇಷ್ಟು ಲಿಂಗ ಪೂಜಾ ಕಾರ್ಯಕ್ರಮಕ್ಕೆ ಆಗಮಿಸುವವರು ರಾಜಶೇಖರ್ ಪಾಟೀಲ್ 90084 42557, ಮಂಜುನಾಥ ಶರಣಪ್ಪನವರ್ 99644 11143, ಬಸವರಾಜ ರೊಟ್ಟಿ 94480 46555, ಮುರಿಗೆಪ್ಪ ಬಾಳಿ 88841 26145, ಸಿ.ಎಂ. ಬೂದಿಹಾಳ  99803 85079 ಮುಂತಾದವರನ್ನು ಸಂಪರ್ಕಿಸಬಹುದು.
ಶುಕ್ರವಾರ ದಿನಾಂಕ 24 ರಂದು ಸಂಜೆ 6 ಗಂಟೆಗೆ ಶ್ರೀಮಠದಲ್ಲಿ ಬಸವಾದಿ ಶರಣರ ವಚನ ದರ್ಶನ ಪ್ರವಚನ ನಡೆಯಲಿದೆ. ಗದುಗಿನ ತೋಂಟದಾರ್ಯ ಮಠದ ಜಗದ್ಗುರು ಡಾ. ತೋಂಟದ ಸಿದ್ದರಾಮ ಮಹಾಸ್ವಾಮೀಜಿಯವರ ಸಾನಿಧ್ಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ನೇತೃತ್ವವನ್ನು ನಾಗನೂರು ರುದ್ರಾಕ್ಷಿ ಮಠದ ಪೀಠಾಧಿಕಾರಿ ಡಾ.ಅಲ್ಲಮಪ್ರಭು ಮಹಾಸ್ವಾಮಿಗಳು ವಹಿಸಲಿದ್ದಾರೆ. ವಿವಿಧ ಮಠಾಧೀಶರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು  ಬಸವಾದಿ ಶರಣರ ಆಧಾರಿತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಶ್ರೀಮಠ ಮತ್ತು  ಜಾಗತಿಕ ಲಿಂಗಾಯತ ಮಹಾಸಭಾ ಪ್ರಕಟಣೆ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ ಜಿನದತ್ತ ದೇಸಾಯಿಯವರ ಬದುಕು ಬರಹ ನಮಗೆಲ್ಲ ಮಾದರಿ- ಪ್ರಾ ಬಿ ಎಸ್ ಗವಿಮಠ CCEA ಮತ್ತು ಜೈನ್ ಕಾಲೇಜ್ ಆಫ್ ಎಂಜಿನಿಯರಿಂಗ್ ನಡುವೆ ಮಹತ್ವದ ಒಪ್ಪಂದಕ್ಕೆ ಸಹಿಅಂಜುಮನ್ ಪದವಿ ಕಾಲೇಜಿಗೆ ಚಾಂಪಿಯನಶಿಪ್‌ ಪ್ರಶಸ್ತಿಉತ್ತರ ಕರ್ನಾಟಕದ ಹಿರಿಯ ರಾಜಕೀಯ ಮುತ್ಸದ್ದಿ , ಮಾಜಿ ಸಚಿವ, ಶಿವಾನಂದ ಕೌಜಲಗಿ ಲಿಂಗೈಕ್ಯರಾಗಾಆವಿವಿ, ವಿಧಾನಸೌಧ ಸೇರಿದಂತೆ ಪ್ರಮುಖ ಸರ್ಕಾರಿ ಹಾಗೂ ಐತಿಹಾಸಿಕ ಕಟ್ಟಡಗಳಿಗೆ ಪಿಂಕ್ ಲೈಟಿಂಗ್ : ಕುಲಪತಿ ಡಾ.ಭಗವಾನ್ ಬಿ.ಸಿಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerರಾಜಾ ಲಖಮಗೌಡರು, ಶಿರಸಂಗಿ ಲಿಂಗರಾಜರು ಮತ್ತು  ಪಾಟೀಲ ಪುಟ್ಟಪ್ಪ ಭಾವ ಚಿತ್ರಗಳನ್ನು ಆಹ್ವಾನ ಪತ್ರಿಕೆಗಳಲ್ಲಿ ಮುದ್ರಿಸಬೇಕು ; ಡಾ.ಸರಜೂ ಕಾಟ್ಕರಭ್ರಷ್ಟಾಚಾರ ರಹಿತ ಸಮ ಸಮಾಜ ನಿರ್ಮಾಣ ಶರಣರ ತತ್ವಗಳಿಂದ ಮಾತ್ರ ಸಾಧ್ಯ ; ಡಾ.ಬಸವರಾಜ ಹುಲಮನಿನಿಯಮ ಉಲ್ಲಂಘಿಸುವ ಹೋಟೆಲ್, ಪಬ್, ಡಾಬಾಗಳ ವಿರುದ್ಧ ಕಠಿಣ ಕ್ರಮ: ಪೊಲೀಸ್ ಕಮಿಷನರ್ ನಿಕ್ಕಂ ಎಚ್ಚರಿಕೆಜೆಎಲ್ಎಂ ಕಚೇರಿಯಲ್ಲಿ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ