LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೊನೆಗೂ ‘ಕದನ ವಿರಾಮ’ ಒಪ್ಪಿದ ಇಸ್ರೇಲ್-ಇರಾನ್!- ಮಧ್ಯ ಪ್ರಾಚ್ಯದಲ್ಲಿನ 12 ದಿನಗಳ ಯುದ್ಧ ಅಂತ್ಯ

ಜೆರುಸೆಲೆಂ: ಇಸ್ರೇಲ್ ಹಾಗೂ ಇರಾನ್ ನಡುವಣ ಸಂಘರ್ಷ, ಮಿಲಿಟರಿ ಕಾರ್ಯಾಚರಣೆಯಿಂದ ಕಳೆದ 12 ದಿನಗಳಿಂದ ಮಧ್ಯ ಪ್ರಾಚ್ಯದಲ್ಲಿ ಉಂಟಾಗಿದ್ದ ಯುದ್ಧ ಕೊನೆಗೂ ಅಂತ್ಯವಾಗಿದೆ.

ಕತಾರ್ ನಲ್ಲಿ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ಇರಾನ್ ಪ್ರತೀಕಾರದ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಪ್ರಸ್ತಾಪಿಸಿದ ಕದನ ವಿರಾಮ ಒಪ್ಪಂದ ಸೂತ್ರವನ್ನು ಇಸ್ರೇಲ್ ಹಾಗೂ ಇರಾನ್ ಮಂಗಳವಾರ ಒಪ್ಪಿಕೊಂಡಿವೆ.

ಮಂಗಳವಾರ ಮುಂಜಾನೆ ಇಸ್ರೇಲ್ ಗುರಿಯಾಗಿಸಿ ಇರಾನ್ ನಡೆಸಿದ ಅಂತಿಮ ಕ್ಷಿಪಣಿ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದರೆ, ಇಸ್ರೇಲ್ ಬೆಳಗಾಗುವ ಮುನ್ನಾವೇ ಇರಾನ್‌ನಾದ್ಯಂತ ಅನೇಕ ಕಟ್ಟಡಗಳನ್ನು ಗುರಿಯಾಗಿಸಿ ವೈಮಾನಿಕ ದಾಳಿ ನಡೆಸಿತ್ತು. ತದ ನಂತರ ಉಭಯ ರಾಷ್ಟ್ರಗಳು ಕದನ ವಿರಾಮ ಒಪ್ಪಂದವನ್ನು ಒಪ್ಪಿಕೊಂಡಿವೆ.

ಡೊನಾಲ್ಡ್ ಟ್ರಂಪ್ ಅವರ ಮಧ್ಯಸ್ಥಿಕೆಯೊಂದಿಗೆ ಇರಾನ್ ಜೊತೆಗಿನ ದ್ವಿಪಕ್ಷೀಯ ಕದನ ವಿರಾಮ ಒಪ್ಪಂದವನ್ನು ಇಸ್ರೇಲ್ ಒಪ್ಪಿಕೊಂಡಿದೆ ಎಂದು ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ. ಇರಾನ್‌ನ ಪರಮಾಣು ಮತ್ತು ಖಂಡಾಂತರ ಕ್ಷಿಪಣಿ ಬೆದರಿಕೆ ಹೋಗಲಾಡಿಸುವುದು ಸೇರಿದಂತೆ ಇರಾನ್ ವಿರುದ್ಧದ 12 ದಿನಗಳ ಕಾರ್ಯಾಚರಣೆಯಲ್ಲಿ ಇಸ್ರೇಲ್ ತನ್ನ ಎಲ್ಲಾ ಯುದ್ಧ ಗುರಿಗಳನ್ನು ಸಾಧಿಸಿದೆ ಎಂದು ಸೋಮವಾರ ರಾತ್ರಿ ಇಸ್ರೇಲ್‌ನ ಭದ್ರತಾ ಕ್ಯಾಬಿನೆಟ್‌ಗೆ ವಿವರಿಸಿರುವುದಾಗಿ ನೇತನ್ಯಾಹು ತಿಳಿಸಿದ್ದಾರೆ.

ಇಸ್ರೇಲ್ ಕೂಡಾ ಇರಾನ್‌ನ ಹಲವು ಕಮಾಂಡರ್ ಗಳನ್ನು ಹತ್ಯೆ ಮಾಡಿದ್ದು, ಹಲವಾರು ಸರ್ಕಾರಿ ಕಟ್ಟಡಗಳನ್ನು ಹಾನಿಗೊಳಿಸಿದೆ. ಇರಾನ್ ನ ವಾಯು ದಾಳಿಯನ್ನು ಸಮರ್ಪಕವಾಗಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿರುವುದಾಗಿ ನೇತನ್ಯಾಹು ಹೇಳಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026