Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಇಸ್ರೋದ 100ನೇ ರಾಕೆಟ್ ಯಶಸ್ವಿ ಉಡಾವಣೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶ್ರೀಹರಿಕೋಟಾದಿಂದ ಇಸ್ರೋ
 ತನ್ನ 100ನೇ ರಾಕೆಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಭಾರತದ ಬಾಹ್ಯಾಕಾಶ ಚರಿತ್ರೆಯಲ್ಲಿ ಮಹೋನ್ನತ ಮೈಲಿಗಲ್ಲು ಸ್ಥಾಪಿಸಿದೆ ಎಂದು ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದ್ದಾರೆ.

 GSLV-F15 ರಾಕೆಟ್ NVS-02 ಉಪಗ್ರಹವನ್ನು ಹೊತ್ತು ನಿಗದಿಪಡಿಸಿದ ಕಕ್ಷೆಗೆ ಯಾವುದೇ ಅಡ್ಡಿ ಆತಂಕವಿಲ್ಲದೆ ಕೊಂಡೊಯ್ದಿದೆ. ಈ ಮೂಲಕ ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ರಾಷ್ಟ್ರದ ಸಾಮರ್ಥ್ಯ ಏನು ಎಂಬುದನ್ನು ಇಸ್ರೋ ಜಗತ್ತಿಗೆ ಸಾರಿ ಹೇಳಿದೆ.

ಇಸ್ರೋ ವಿಜ್ಞಾನಿಗಳ ಅವಿರತ ಶ್ರಮ, ನೈಪುಣ್ಯತೆ ಹಾಗೂ ರಾಷ್ಟ್ರಭಕ್ತಿ ಈ ಮಹಾನ್ ಸಾಧನೆಗೆ ಕಾರಣವಾಗಿದೆ. ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಕ್ಷಣ ಇದಾಗಿದೆ. ಇಂಥ ಅಸಾಧಾರಣ ಸಾಧನೆ ಮಾಡಿದ ಇಡೀ ಇಸ್ರೋ ತಂಡಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಭಾರತದ ಬಾಹ್ಯಾಕಾಶ ಪ್ರಯಾಣದ ಭವಿಷ್ಯವು ಎಂದಿಗಿಂತಲೂ ಉಜ್ವಲವಾಗಿದೆ! ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಕಾಂಗ್ರೆಸ್ ಹರ್ಷ-ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಇಸ್ರೋ ಮಹತ್ವಾಕಾಂಕ್ಷೆಯ ನೂರನೇ ರಾಕೆಟ್ NVS-02 ಉಡಾವಣೆ ಮಾಡಿದೆ ಎಂದು ಕಾಂಗ್ರೆಸ್ ಹರ್ಷ ವ್ಯಕ್ತಪಡಿಸಿದೆ.
ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಈ ಐತಿಹಾಸಿಕ ಉಡಾವಣೆ ನಡೆದಿದೆ. ನಾವಿಕ್ ಯೋಜನೆಯ ಎರಡನೇ ತಲೆಮಾರಿನ ಉಪಗ್ರಹ ಇದಾಗಿದೆ. ಇದು ಭಾರತದ ಮ್ಯಾಪ್ ಬಳಕೆದಾರರಿಗೆ ನಿಖರವಾದ ಸ್ಥಾನ
, ವೇಗ ಮತ್ತು ಸಮಯದ ಮಾಹಿತಿಯನ್ನು ಒದಗಿಸುವ ಗುರಿ ಹೊಂದಿದೆ ಎಂದು ತಿಳಿಸಿದೆ.

ಜೆಡಿಎಸ್ ಅಭಿನಂದನೆ- ಇಸ್ರೋ 100ನೇ ರಾಕೆಟ್‌ಉಡಾವಣೆ ಯಶಸ್ವಿಗೊಳಿಸಿ, ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಹೆಮ್ಮೆಯ ಇಸ್ರೋ ಸಂಸ್ಥೆಗೆ ಜೆಡಿಎಸ್ ಅಭಿನಂದನೆಗಳನ್ನು ಸಲ್ಲಿಸಿದೆ.

ಇಂದು ಬೆಳಿಗ್ಗೆ 6.23ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಎನ್ ವಿಎಸ್-02 ಉಪಗ್ರಹ ಹೊತ್ತ ಜಿಎಸ್ಎಲ್ ವಿ-ಎಫ್‌15 ರಾಕೆಟ್‌ನಭಕ್ಕೆ ಚಿಮ್ಮಿತು. ಈ ಮೂಲಕ ಸ್ವದೇಶಿ ಜಿಪಿಎಸ್(ಬಾಹ್ಯಾಕಾಶ ನ್ಯಾವಿಗೇಷನ್‌) ಯೋಜನೆಯ ಭಾಗವಾಗಿ NVS-02 ಉಪಗ್ರಹವನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ. 100ನೇ ಉಡ್ಡಯನದೊಂದಿಗೆ ಬಾಹ್ಯಾಕಾಶ ನ್ಯಾವಿಗೇಷನ್‌ನಲ್ಲಿ ಭಾರತ ಹೊಸ ಎತ್ತರಕ್ಕೆ ತಲುಪಿದೆ ಎಂದು ಜೆಡಿಎಸ್ ಹರ್ಷ ವ್ಯಕ್ತಪಡಿಸಿದೆ.



Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ