LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಕ್ಷೆ ಸೇರಲು ವಿಫಲವಾದ ಇಸ್ರೋ ಉಪಗ್ರಹ

ಅಮರಾವತಿ: ಇಂದು ನಸುಕಿನ ಹೊತ್ತು ಉಡಾವಣೆಯಾಗಿದ್ದ ಇಸ್ರೋದ EOS-09 ಉಪಗ್ರಹ ನಿರ್ದಿಷ್ಟ ಕಕ್ಷೆ ಸೇರುವಲ್ಲಿ ವಿಫಲವಾಗಿದೆ. ಇಸ್ರೋದ 101ನೇ ರಾಕೆಟ್ ಉಡಾವಣೆ ಇದಾಗಿದ್ದು, ಇಂದು ಬೆಳಗ್ಗೆ 5.59ರ ಸುಮಾರಿಗೆ ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ EOS-09 ರೆಡಾರ್ ಇಮೇಜಿಂಗ್ ಉಪಗ್ರಹ ನಭಕ್ಕೆ ಚಿಮ್ಮಿತ್ತು. 1,696 ಕಿಲೋಗ್ರಾಂ ತೂಕದ EOS-09 ರೆಡಾರ್ ಇಮೇಜಿಂಗ್ ಉಪಗ್ರಹವು ಭೂಮಿಯ ಮೇಲ್ಮೈಯಿಂದ 500 ಕಿಲೋಮೀಟರ್‌ಗಳಿಗಿಂತ ಹೆಚ್ಚು ಎತ್ತರದಲ್ಲಿ ನೆಲೆಗೊಳ್ಳಬೇಕಿತ್ತು. ಆದರೆ 3ನೇ ಹಂತದ ಸಂಪರ್ಕ ಕಳೆದುಕೊಂಡ ಉಪಗ್ರಹ ನಿರ್ದಿಷ್ಟ ಕಕ್ಷೆ ಸೇರುವಲ್ಲಿ ವಿಫಲವಾಗಿದೆ.

ಈ ಕುರಿತು ಇಸ್ರೋ ಅಧ್ಯಕ್ಷ ವಿ.ನಾರಾಯಣ ಮಾಹಿತಿ ನೀಡಿದ್ದು, ರಾಕೆಟ್ ಉಡಾವಣೆಯ ನಾಲ್ಕು ಹಂತಗಳ ಪೈಕಿ, ಮೂರನೇ ಹಂತದಲ್ಲಿ ಒತ್ತಡ ಕುಸಿತಗೊಂಡು ಕಕ್ಷೆ ಸೇರುವಲ್ಲಿ ವಿಫಲವಾಗಿದೆ ಎಂದಿದ್ದಾರೆ. ಬೆಂಗಳೂರಿನಲ್ಲಿರುವ ಇಸ್ರೋದ ಯುಆರ್ ರಾವ್ ಉಪಗ್ರಹ ಕೇಂದ್ರವು ಗೂಢಚಾರ ಉಪಗ್ರವನ್ನು ನಿರ್ಮಿಸಿದೆ. ಸಿ-ಬ್ಯಾಂಡ್ ಸಿಂಥೆಟಿಕ್ ಅಪರ್ಚರ್ ರೇಡಾರ್ ಅನ್ನು ಉಪಗ್ರಹ ಹೊಂದಿದ್ದು, ಇದು ಎಲ್ಲಾ ಹವಾಮಾನ ಪರಿಸ್ಥಿತಿಗಳಲ್ಲಿ ಮತ್ತು ಕಡಿಮೆ ಬೆಳಕಿನಲ್ಲೂ ಭೂಮಿಯ ಮೇಲ್ಮೈಯ ಹೆಚ್ಚಿನ ರೆಸಲ್ಯೂಶನ್ ಚಿತ್ರಗಳನ್ನು ಸೆರೆಹಿಡಿಯಲು ಅನುವು ಮಾಡಿಕೊಡುತ್ತದೆ.



ಸಾಧಾರಣವಾಗಿ ಮೋಡಗಳು, ಬಿರುಗಾಳಿ, ರಾತ್ರಿಯ ವೇಳೆ ಹೆಚ್ಚಿನ ಉಪಗ್ರಹಗಳಿಗೆ ಸರಿಯಾಗಿ ಚಿತ್ರಗಳನ್ನು ಸೆರೆ ಹಿಡಿಯಲು ಸಾಧ್ಯವಾಗುವುದಿಲ್ಲ. ಆದರೆ ಈ ಉಪಗ್ರಹ ಮೋಡಗಳು, ಮಳೆ, ಮಂಜು ಸೇರಿದಂತೆ ಎಲ್ಲಾ ರೀತಿಯ ಹವಾಮಾನದಲ್ಲೂ ಹಗಲು ಮತ್ತು ರಾತ್ರಿ ಸ್ಷಷ್ಟವಾದ ಚಿತ್ರಗಳನ್ನು ಸೆರೆ ಹಿಡಿಯವ ಸಾಮರ್ಥ್ಯ ಹೊಂದಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫೆ.26 ರಿಂದ ಮಾ.1 ರವರೆಗೆ 52 ನೇ ವರ್ಷದ ವನಕಲ್ಲು ಮಲ್ಲೇಶ್ವರ ಜಾತ್ರಾ ಮಹೋತ್ಸವ.!ಮಂಗಳೂರು ವಿದ್ಯಾರ್ಥಿನಿ ಕಿಡ್ನ್ಯಾಪ್ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!! ತನಿಖೆ ವೇಳೆ ಪೊಲೀಸರಿಗೆ ಕಾದಿತ್ತು ಅಚ್ಚರಿ!ಬರೋಬ್ಬರಿ ₹1.5 ಲಕ್ಷ ಸಂಬಳ: KMF ಶಿಮುಲ್‌ನಲ್ಲಿ 194 ಹುದ್ದೆಗಳಿಗೆ ನೇಮಕಾತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆಸೋಷಿಯಲ್ ಮೀಡಿಯ ಖ್ಯಾತಿಯ ಚಿನ್ನು ಪಾಪು ಆತ್ಮಹತ್ಯೆ!ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ ಚಿನ್ನಾಭರಣ, ನಗದು ಇದ್ದ ಬ್ಯಾಗ್ ಕಳವು12 ರಂದು ಬಿಸಿಯೂಟ ನೌಕರರ ಮುಷ್ಕರಕ್ಕೆ ಕರೆ.! ಪರ್ಯಾಯ ವ್ಯವಸ್ಥೆಗೆ ಆದೇಶರಾಹು ಆಡಳಿತದ ಶತಭಿಷಾ ನಕ್ಷತ್ರಕ್ಕೆ ಶುಕ್ರ ಸಂಚಾರದಿಂದ ಈ ರಾಶಿಯವರಿಗೆ ಶುಭ.!ರಾಮ ಮಂದಿರ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಆರೋಪಿ ಜೈಲಿನಲ್ಲೇ ಕೊಲೆಯುಪಿಎಸ್‌ಸಿಯಲ್ಲಿ 28ನೇ ರ‍್ಯಾಂಕ್ ಪಡೆದು ಐಎಎಸ್ ಅಧಿಕಾರಿಯಾದ ಕಾಜಲ್ ಜಾವ್ಲಾದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 10-02-2026 .!