LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಪ್ರಯತ್ನಕ್ಕಿಂತ ಪ್ರಾರ್ಥನೆಯಿಂದ ಫಲ ಸಿಗುತ್ತದೆ ಎಂಬ ನಂಬಿಕೆ ಇದೆ'- ಡಿಕೆಶಿ

ಮೈಸೂರು : ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿ ಬೆಟ್ಟಕ್ಕೆ ತೆರಳಿ ಡಿಸಿಎಂ ಡಿ.ಕೆ.ಶಿವಕುಮಾರ್ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬೆಟ್ಟಕ್ಕೆ ತೆರಳಿದ ಡಿಸಿಎಂ ಈಡುಗಾಯಿ ಒಡೆದು ಪ್ರಾರ್ಥಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಒಳ್ಳೆಯದು ಮಾಡು ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದ್ದಾರೆ.

ದುಃಖವನ್ನು ದೂರು ಮಾಡುವ ದೇವಿ ಚಾಮುಂಡಿ. ಈ ಬಾರಿ ಇಡೀ ರಾಜ್ಯದಲ್ಲಿ ಒಳ್ಳೆಯ ಮಳೆಯಾಗಿದೆ. ಎಲ್ಲರಿಗೂ ಒಳ್ಳೆಯದನ್ನು ಮಾಡಲೆಂದು ಪ್ರಾರ್ಥನೆ ಮಾಡಿದ್ದೇನೆ. ಪ್ರಯತ್ನಕ್ಕಿಂತ ಪ್ರಾರ್ಥನೆಯಿಂದ ಫಲ ಸಿಗುತ್ತದೆ ಎಂಬ ನಂಬಿಕೆ ಇದೆ. ಇಡೀ ರಾಜ್ಯಕ್ಕೆ ಏನೇ ಕೆಲಸ ಮಾಡಬೇಕಾದರೂ ತಾಯಿಗೆ ಪೂಜೆ ಸಲ್ಲಿಸಿ ಮಾಡುತ್ತೇವೆ. ಇಂದು ಕುಟುಂಬ ಸಮೇತ ಬಂದು ತಾಯಿಗೆ ಪೂಜೆ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.

ನಿಮ್ಮ ಪ್ರಾರ್ಥನೆಗೆ ಫಲ ಸಿಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂಬುದು ನನ್ನ ನಂಬಿಕೆ. ನನಗೆ ಏನು ಬೇಕೋ ಅದನ್ನು ಪ್ರಾರ್ಥನೆ ಮಾಡಿದ್ದೇನೆ. ಯಾವ ಚರ್ಚೆಯೂ ಬೇಡ ಈಗ ಎಂದು ಹೇಳಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026