Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಜಗದೀಶ್ ಶೆಟ್ಟರ್ ಕರ್ನಾಟಕ ಕಂಡ ಸಜ್ಜನ ರಾಜಕಾರಣಿ :ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ

ಬೆಂಗಳೂರು,ಏ.17: ಜಗದೀಶ್ ಶೆಟ್ಟರ್ ಅವರನ್ನು ಆತ್ಮೀಯವಾಗಿ ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸುತ್ತೇನೆ. ಶೆಟ್ಟರ್ ಅವರು ಕರ್ನಾಟಕ ಕಂಡ ಸಜ್ಜನ ರಾಜಕಾರಣಿ. ಅವರು ಆರ್ ಎಸ್ಎಸ್ ನಿಂದ ಬಂದಿದ್ದರೂ ಎಂದಿಗೂ ಜಾತ್ಯಾತೀತ ತತ್ವದ ಮೇಲೆ ಕೆಲಸ ಮಾಡಿದ್ದಾರೆ. ನಾನು ಅವರನ್ನು ಹತ್ತಿರದಿಂದ ಕಂಡಿದ್ದೇನೆ. ಅವರು ಮುಖ್ಯಮಂತ್ರಿಯಾಗಿದ್ದಾಗ ನಾನು ವಿರೋಧ ಪಕ್ಷದ ನಾಯಕನಾಗಿ, ನಾನು ಮುಖ್ಯಮಂತ್ರಿಯಾಗಿದ್ದಾಗ ಅವರು ವಿರೋಧ ಪಕ್ಷದ ನಾಯಕರಾಗಿದ್ದರು. ಅವರು ಎಂದಿಗೂ ತಮ್ಮ ವೈಯಕ್ತಿಕ ಕೆಲಸಕ್ಕಾಗಿ ಭೇಟಿ ಮಾಡಿದವರಲ್ಲ. ಐದು ವರ್ಷಗಳ ಕಾಲ ಬಿಜೆಪಿಯ ಪರವಾಗಿ ವಿಧಾನಸಭೆ ಒಳಗೆ ಹಾಗೂ ಹೊರಗೆ ಬಿಜೆಪಿ ಪರವಾಗಿ ಹೋರಾಟ ಮಾಡಿದ್ದರು. ಬಹಳ ನಿಷ್ಠಾವಂತರಾಗಿದ್ದರು. ಬಿಜೆಪಿಯ ನೀತಿ ಕಾರ್ಯಕ್ರಮಗಳ ಬಗ್ಗೆ ರಾಜೀ ಮಾಡಿಕೊಳ್ಳುತ್ತಿರಿಲಿಲ್ಲ. ಸ್ವಾರ್ಥಕ್ಕಾಗಿ ಅದನ್ನು ಬಲಿ ಕೊಟ್ಟಿರಲಿಲ್ಲ. ನಮ್ಮ ಸರ್ಕಾರದ ವಿರುದ್ಧ ಹೋರಾಟವನ್ನು ಮಾಡಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ಕೆಲಸವನ್ನು ನಿರ್ಭಯವಾಗಿ ನಿಷ್ಟೂರವಾಗಿ ಕೆಲಸ ಮಾಡುತ್ತಿದ್ದರು. ಕೃಷ್ಣ ಅವರ ಕಾಲದಲ್ಲೂ ವಿರೋಧ ಪಕ್ಷದ ನಾಯಕರಾಗಿದ್ದರು. ಅವರು ಕೇವಲ ಉತ್ತರ ಕರ್ನಾಟ ನಾಯಕರಲ್ಲ, ಅವರು ಇಡೀ ರಾಜ್ಯದ ನಾಯಕರು. ಲಂಗಾಯತ ಸಮಾಜ ದೊಡ್ಡ ಸಮಾಜ. ಸಮಾನ್ಯವಾಗಿ ಯಡಿಯೂರಪ್ಪ ಅವರನ್ನು ಆ ಸಮಾಜದ ನಾಯಕ ಎಂದು ಬಿಂಬಿಸುತ್ತಾರೆ. ಎರಡನೇ ಸ್ಥಾನದಲ್ಲಿ ನೋಡುತ್ತಿದ್ದದ್ದು ಶೆಟ್ಟರ್ ಅವರು. ಬಿಜೆಪಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ನಿರ್ದಾಕ್ಷಣ್ಯವಾಗಿ ತೆಗೆದು ಅಪಮಾನ ಮಾಡಿದರು. ಅವರ ಕಣ್ಣೀರು ಹಾಕಿಸಿದರು. ಜಗದೀಶ್ ಶೆಟ್ಟರ್ ಅವರು ಲಿಂಗಾಯತ ಸಮಾಜದ ದೊಡ್ಡ ನಾಯಕರೆಂದು ಗುರುತಿಸಿಕೊಂಡಿದ್ದರು. ಅವರು ದು ಬಹಳ ನೋವಿನಿಂದ ಮಾತನಾಡಿದ್ದಾರೆ. ಬಹುಶಃ ಬಿಜೆಪಿ ಅವರನ್ನು ನಡೆಸಿಕೊಂಡಿರುವ ರೀತಿ ಯಾವ ಪಕ್ಷದಲ್ಲಿ ಯಾವುದೇ ನಾಯಕರಿಗೆ ಆಗಬಾರದು.

ಯಾವುದೇ ಕಾರಣ ಇಲ್ಲದೇ, ಆರೋಪವಿಲ್ಲದೆ, ಬಿಜೆಪಿಯವರು ವರಿಗೆ ಟಿಕೆಟ್ ವಂಚಿಸಿದ್ದಾರೆ. ಇದು ದುರುದ್ದೇಶ ಎಂದು ಎಲ್ಲರಿಗೂ ಅರ್ಥವಾಗುತ್ತದೆ. ನಾನು ನೋಡಿದಾಗೆ ಶೆಟ್ಟರ್ ಅವರು ರಾಜ್ಯದ ರಾಜಕಾರಣಿಗಳಲ್ಲಿ ಸ್ವಾಭಿಮಾನಿ ರಾಜಕಾರಣಿ. ಎವರು ಸ್ವಾಭಿಮಾನಕ್ಕೆ ಧಕ್ಕೆಯಾಗುವಂತಹ ಕೆಲಸ ಮಾಡಿಲ್ಲ. ಈಗ ಅವರ ಸ್ವಾಭಿಮಾನ, ಸಮುದಾಯಕ್ಕೆ ಧಕ್ಕೆಯಾಗಿದೆ. ಅವರ ಅನುಯಾಯಿ, ಸ್ನೇಹಿತರಿಗೆ ಧಕ್ಕೆಯಾಗಿದೆ. ಇದು ಸಹಿಸಲಾಗದ ಅಪಮಾನ. ನಾನು ಕೂಡ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ನಿಮಗೆ ಇಂತಹ ಅನ್ಯಾಯವಾಗುತ್ತದೆ ಎಂದು ಭಾವಿಸಿರಲಿಲ್ಲ ಎಂದು ಅವರನ್ನು ಭೇಟಿಯಾದಾಗ ಹೇಳಿದೆ. ಈ ರೀತಿ ಏಕಾಏಕಿ, ಯಾವುಜದೇ ಮುನ್ಸೂಚನೆ ಲ್ಲದೆ ಟಿಕೆಟ್ ತಪ್ಪಿಸಿರುವುದು ಘೋರ ಅಪರಾಧ. ಅವರು ತಮ್ಮ ಸ್ವಾಭಿಮಾನ ರಕ್ಷಣೆಗೆ ಪಕ್ಷ ಬಿಡಲು ತೀರ್ಮಾನಿಸಿದ್ದಾರೆ. ಅವರು ಎಲ್ಲರ ಜತೆ ಚರ್ಚಿಸಿ ಅಳೆದು ತೂಗಿ ಇದನ್ನು ಸವಾಲು ಎಂದು ಸ್ವೀಕರಿಸಿ ಅಂತಿಮವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಎಐಸಿಸಿ ಅಧ್ಯಕ್ಷರು, ಪ್ರದಾನ ಕಾರ್ಯದರ್ಶಿಗಳ ಸಮ್ಮುಖದಲ್ಲಿ ಅವರು ಪಕ್ಷ ಸೇರುತ್ತಿದ್ದಾರೆ. ನಾವೆಲ್ಲರೂ ನಿಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ.

ಅಮರ ಸಿಂಗ್ ಪಾಟೀಲ್ ಅವರು ಕಾಂಗ್ರೆಸ್ ಪಕ್ಷದಿಂದ ಸಂಸದರಾಗಿದ್ದು, ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತೇನೆ. ಶೆಟ್ಟರ್ ಅವರ ಆಗಮನದಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ. ಕಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದ್ದು, ಅವರ ಸೇರ್ಪಡೆಯಿಂದ ಕಾಂಗ್ರೆಸ್ 150ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ