Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ : ಕರ್ನಾಟಕ ಆಟಗಾರನಿಗೆ ತಲೆಯಿಂದ ಡಿಚ್ಚಿ ಹೊಡೆದ ಜಮ್ಮು ತಂಡದ ನಾಯಕ

ಹುಬ್ಬಳ್ಳಿ: ಇಲ್ಲಿನ ಕೆ.ಎಸ್.ಸಿ.ಎ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ನಡುವಿನ 2025-26ರ ಸಾಲಿನ ರಣಜಿ ಟ್ರೋಫಿ ಫೈನಲ್ ಪಂದ್ಯದ ಎರಡನೇ ದಿನದಂದು ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಜಮ್ಮು-ಕಾಶ್ಮೀರ ತಂಡದ ನಾಯಕ ಪರಾಸ್ ಡೋಗ್ರಾ ಅವರು ಕರ್ನಾಟಕದ ಫೀಲ್ಡರ್ ಕೆ.ವಿ. ಅನೀಶ್ ಅವರಿಗೆ ತಲೆಯಿಂದ ಡಿಚ್ಚಿ ಹೊಡೆದ ಪ್ರಸಂಗ ನಡೆದಿದೆ.
ಜಮ್ಮು-ಕಾಶ್ಮೀರ ಇನಿಂಗ್ಸ್‌ನ 101ನೇ ಓವರ್‌ನಲ್ಲಿ ಡೋಗ್ರಾ ಬಾರಿಸಿದ ಚೆಂಡು ಗಲ್ಲಿ ಫೀಲ್ಡರ್ ಪಕ್ಕದಲ್ಲಿ ಬೌಂಡರಿ ಗೆರೆ ದಾಟಿತು. ಈ ಸಂದರ್ಭದಲ್ಲಿ ಬ್ಯಾಟರ್ ಮತ್ತು ಫೀಲ್ಡರ್ ನಡುವೆ ಮಾತಿನ ಚಕಮಕಿ ಆರಂಭವಾಯಿತು. ಕ್ರೀಸ್‌ನಲ್ಲಿದ್ದ ಡೋಗ್ರಾ ಮತ್ತು ಕೆ.ವಿ. ಅನೀಶ ನಡುವೆ ನಡೆದ ಮಾತಿನ ಚಕಮಕಿ ಕ್ಷಣಾರ್ಧದಲ್ಲಿ ವಿಕೋಪಕ್ಕೆ ತಿರುಗಿ, ಡೋಗ್ರಾ ಅವರು ಅನೀಶಗೆ ತಲೆಯಿಂದ ಗುದ್ದಿದರು.

ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಕರ್ನಾಟಕದ ಹಿರಿಯ ಆಟಗಾರ ಮಯಾಂಕ್ ಅಗರ್ವಾಲ್, ಕೂಡಲೇ ಇಬ್ಬರ ನಡುವೆ ಬಂದು ಡೋಗ್ರಾ ಅವರ ಮೇಲೆ ಕಿಡಿಕಾರಿದರು. ತಕ್ಷಣವೇ ಅಂಪೈರ್‌ಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಅಂಪೈರ್‌ಗಳು ಮಧ್ಯಪ್ರವೇಶಿಸಿ ಡೋಗ್ರಾ ಮತ್ತು ಅನೀಶ ಅವರನ್ನು ಬೇರ್ಪಡಿಸಿದರು. ಘಟನೆಯ ನಂತರ, ಅಂಪೈರ್‌ಗಳು ಕರ್ನಾಟಕದ ನಾಯಕ ದೇವದತ್ ಪಡಿಕ್ಕಲ್ ಅವರಿಗೆ ಫೀಲ್ಡಿಂಗ್ ತಂಡ ಶಿಸ್ತನ್ನು ಪಾಲಿಸುವಂತೆ ಸೂಚಿಸಿದರು. ನಂತರ, ಪರಾಸ್ ಡೋಗ್ರಾ ಅವರು ಅನೀಶ್ ಕೆವಿ ಅವರ ಬಳಿ ಕ್ಷಮೆಯಾಚಿಸಲು ಮುಂದಾದರು. ಆದರೆ ಬದಲಿ ಫೀಲ್ಡರ್ ಕ್ಷಮೆಯಾಚನೆಯನ್ನು ಸ್ವೀಕರಿಸಲು ಆಸಕ್ತಿ ತೋರಲಿಲ್ಲ ಎನ್ನಲಾಗಿದೆ.

ಮೊದಲ ದಿನ ವೈಶಾಖ್ ವಿಜಯಕುಮಾರ ಎಸೆದ ಬೌನ್ಸರ್‌ನಿಂದ ಗಾಯಗೊಂಡು ನಿವೃತ್ತರಾಗಿದ್ದ (Retire hurt) 41 ವರ್ಷದ ಡೋಗ್ರಾ, ಎರಡನೇ ದಿನ ಮರಳಿ ಬಂದು ಅರ್ಧಶತಕ ದಾಖಲಿಸಿದರು. ಮೊದಲ ಬಾರಿಗೆ ಫೈನಲ್ ಪ್ರವೇಶಿಸಿರುವ ಜಮ್ಮು-ಕಾಶ್ಮೀರ ಮೊದಲ ದಿನದ ಅಂತ್ಯಕ್ಕೆ 284/2 ರನ್ ಗಳಿಸಿ ಭದ್ರ ಬುನಾದಿ ಹಾಕಿತ್ತು. ಶುಭಂ ಪುಂಡಿರ್ (121) ಆಕರ್ಷಕ ಶತಕ ಸಿಡಿಸಿದರೆ, ಅಬ್ದುಲ್ ಸಮದ್ (61) ಅರ್ಧಶತಕದ ಕಾಣಿಕೆ ನೀಡಿದರು.

ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ
ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಜಮ್ಮು-ಕಾಶ್ಮೀರ ತಂಡವು ಉತ್ತಮ ಬ್ಯಾಟಿಂಗ್ ಮೂಲಕ ಎರಡನೇ ದಿನವೂ ಮೇಲುಗೈ ಸಾಧಿಸಿದೆ.

ಮೊದಲ ದಿನ ಶುಭಂ ಪುಂಡಿರ್ ಅವರ ಶತಕದ ನೆರವಿನಿಂದ 87 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 284 ರನ್ ಗಳಿಸಿದ್ದ ಜಮ್ಮು- ಕಾಶ್ಮೀರ ತಂಡವು, ಎರಡನೇ ದಿನವೂ ಸಂಘಟಿತ ಬ್ಯಾಟಿಂಗ್ ಪ್ರದರ್ಶನ ತೋರಿಸಿತು. 156 ಓವರ್‌ಗಳ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 527 ರನ್ ಗಳಿಸಿದೆ.

ಮೊದಲ ದಿನ ಅಜೇಯ 117 ರನ್ ಗಳಿಸಿದ್ದ ಶುಭಂ ಪುಂದಿರ, 121 ರನ್ ಗಳಿಸಿದ್ದ ವೇಳೆ ವಿದ್ಯಾಧರ ಪಾಟೀಲ ಅವರಿಗೆ ವಿಕೆಟ್ ಒಪ್ಪಿಸಿದರು. ಮೊದಲ ದಿನ ಅರ್ಧಶತಕ ಸಿಡಿಸಿದ್ದ ಬ್ಯಾಟಿಂಗ್‌ ಕಾಯ್ದುಕೊಂಡಿದ್ದ ಅನುಭವಿ ಆಟಗಾರ ಅಬ್ದುಲ್ ಸಮದ್, 61 ರನ್ ಗಳಿಸಿ ಪ್ರಸಿದ್ಧ ಕೃಷ್ಣಗೆ ವಿಕೆಟ್ ಒಪ್ಪಿಸಿದರು.

ಮೊದಲ ದಿನ ಮೈದಾನದಲ್ಲಿ ಗಾಯಗೊಂಡು ಹೊರನಡೆದಿದ್ದ ನಾಯಕ ಪರಾಸ್ ಡೋಗ್ರಾ (70 ರನ್: 166 ಎಸೆತ), ವಿಕೆಟ್ ಕೀಪರ್ ಬ್ಯಾಟರ್ ಕನ್ನಯ್ಯಾ ವಾಧವನ್ (70 ರನ್: 109 ಎಸೆತ) ಹಾಗೂ ಸಾಹಿಲ್ ಲೋತ್ರಾ (ಅಜೇಯ 57 ರನ್: 93 ಎಸೆತ) ಅವರು ಅರ್ಧಶತಕ ಸಿಡಿಸಿದರು.

ಕರ್ನಾಟಕ ತಂಡವು ತನ್ನ 9ನೇ ರಣಜಿ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ