LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುನಿಸು ಮರೆತು ಒಂದಾದ ಜನಾರ್ದನ ರೆಡ್ಡಿ - ಶ್ರೀರಾಮುಲು

ಕೊಪ್ಪಳ : ಗಂಗಾವತಿಯ ಹಾಲಿ ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಅವರ ನಡುವೆ ವೈಮನಸ್ಸು ಮೂಡಿ ಕಳೆದ ಹಲವು ವರ್ಷಗಳಿಂದ ದೂರವೇ ಇದ್ದರು. ಆದರೆ ಇದೀಗ ಇವರಿಬ್ಬರು ಮುನಿಸು ಮರೆತು ಮತ್ತೆ ಒಂದಾಗಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಬಳ್ಳಾರಿ ವಿಭಾಗದ ಸಂಘಟನಾ ಸಭೆಯಲ್ಲಿ ಒಂದೇ ವೇದಿಕೆಯಲ್ಲಿ ಅಕ್ಕ-ಪಕ್ಕ ಕುಳಿತಿದ್ದರು. ಇನ್ನು ಈ ಸಭೆಯಲ್ಲಿ ಅಧಿಕೃತವಾಗಿ ಅವರಿಬ್ಬರನ್ನು ಒಂದು ಗೂಡಿಸುವ ಯತ್ನ ನಡೆಯಿತು.

ಈ ವೇಳೆ ಸಭೆಯಲ್ಲಿ ಮಾತನಾಡಿ ಶಾಸಕ ಜನಾರ್ದನ ರೆಡ್ಡಿ ಅವರು, ನನ್ನ ರಾಮುಲು ಮದ್ಯೆ ಏನಿಲ್ಲ, ನಾವಿಬ್ಬರೂ ಜೀವದ ಗೆಳೆಯರು. ನಮ್ಮಿಬ್ಬರ ಮಧ್ಯೆ ಯಾರ ಮಧ್ಯಸ್ಥಿಕೆ ಬೇಡ. ಮಧ್ಯಸ್ಥಿಕೆ ಮಾಡುತ್ತೇವೆ ಅನ್ನೋದು ಮೂರ್ಖತನ. ಜಗಳದಿಂದ ಲಾಭ ಮಾಡಿಕೊಳ್ಳವವರು ಮತ್ತು ಸರಿ ಮಾಡುತ್ತೇನೆ ಎನ್ನುವವರು ಮೂರ್ಖರು. ಅರ್ಧ ಗ್ಲಾಸ್ ನೀರು ಕುಡಿ ಯುವುದರಲ್ಲಿ ಸರಿ ಆಗತ್ತೆ. ಅದೊಂದು ಕೆಟ್ಟ ಘಳಿಗೆ. ನಾನು, ರಾಮುಲು ಮತ್ತು ವಿಜಯೇಂದ್ರ ಓಡಾಡಿ ನಮ್ಮ ಪಕ್ಷ ಅಧಿಕಾರಕ್ಕೆ ತರುತ್ತೇವೆ ಎಂದು ತಿಳಿಸಿದ್ದಾರೆ.

ಬಳಿಕ ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು ಅವರು, ಪಕ್ಷದ ವಿಚಾರ ಬಂದಾಗ ನಾವು ಒಂದಾಗಬೇಕು. ಬೇರೆಯವರಿಗೆ ನೀತಿ ಹೇಳುವವರು, ನಾವು ಒಗ್ಗಟ್ಟಾಗಿರಬೇಕು. ಶಾಸಕ ಜನಾರ್ದನರೆಡ್ಡಿ ಜತೆ ನನಗೆ ಯಾವುದೇ ಜಗಳ ಇಲ್ಲ. ನಾನು, ಜನಾರ್ದನರೆಡ್ಡಿ ಮತ್ತೆ ಒಂದಾಗಿದ್ದೇವೆ ಎಂದಿದ್ದಾರೆ.

ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಆಪ್ತಮಿತ್ರರು. ಅಕ್ರಮ ಗಣಿಗಾರಿಗೆ ಆರೋಪದ ಮೇಲೆ ಜನಾರ್ದನ ರೆಡ್ಡಿ ಜೈಲು ಪಾಲಾದರೂ ಅವರನ್ನು ಬಿಟ್ಟುಕೊಟ್ಟಿರಲಿಲ್ಲ. ಆದರೆ, ಇತ್ತೀಚೆಗೆ ಸಂಡೂರು ವಿಧಾನಸಭೆ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಶ್ರೀರಾಮುಲು ಸಕ್ರಿಯವಾಗಿ ಪ್ರಚಾರ ಮಾಡಲಿಲ್ಲ. ಇದೇ ಕಾರಣಕ್ಕೆ ಬಿಜೆಪಿ ಅಭ್ಯರ್ಥಿ ಆಗಿದ್ದ ಬಂಗಾರು ಹನುಮಂತು ಅವರ ಸೋಲಾಯಿತು ಎಂದು ಜನಾರ್ದನ ರೆಡ್ಡಿ ಹೈಕಮಾಂಡ್‌ಗೆ ದೂರು ನೀಡಿದ್ದರು. ಈ ಘಟನೆಯು ರೆಡ್ಡಿ-ರಾಮುಲು ನಡುವಿನ ಬಿರುಕಿಗೆ ನಾಂದಿಯಾಗಿತ್ತು. ಇದರ ಜೊತೆಗೆ ಆಂತರಿಕವಾಗಿ ಇದ್ದ ಕೆಲ ಖಾಸಗಿ ಭಿನ್ನಾಭಿಪ್ರಾಯದಿಂದ ಇಬ್ಬರು ಸಿಡಿದೆದ್ದು, ಏಕವಚನದಲ್ಲೇ ಬೈದಾಡಿಕೊಂಡಿದ್ದರು. ಬಳ್ಳಾರಿಯಲ್ಲಿದ್ದ ತಮ್ಮ ಮನೆಗಳಿಗೆ ಪರಸ್ಪರ ಸಂಪರ್ಕ ಕಲ್ಪಿಸುವ ದ್ವಾರಗಳನ್ನು ಬಂದ್ ಮಾಡಿಕೊಂಡಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026