Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessFinancialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಜ್ಞಾನೇಶ ಕುಮಾರ ವಿರುದ್ಧ ಜನತಾ ಮಹಾಭಿಯೋಗ: ಖರ್ಗೆ ನಿವಾಸದಲ್ಲಿ ಅಣಕು ಸಂಸತ್

ನವದೆಹಲಿ, ಅ. 31: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಹಾಗೂ ಮತಗಳ್ಳತನದ ಆರೋಪಗಳ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಶನಿವಾರ ಸಾಂಕೇತಿಕ ‘ಜನತಾ ಮಹಾಭಿಯೋಗ’ ನಿರ್ಣಯ ಮಂಡಿಸಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಆಯೋಜಿಸಿದ್ದ ಅಣಕು ಸಂಸತ್ ಅಧಿವೇಶನಕ್ಕೆ ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ ಅಧ್ಯಕ್ಷತೆ ವಹಿಸಿದ್ದರು. ಸಂಸತ್ತಿನ ಕೇಂದ್ರ ಸಭಾಂಗಣದ ಮಾದರಿಯಲ್ಲಿ ಆಸನ ವ್ಯವಸ್ಥೆ ಮಾಡಲಾಗಿದ್ದು, ವಿರೋಧ ಪಕ್ಷಗಳ ನಾಯಕರು, ಸಂಸದರು ಹಾಗೂ ನಾಗರಿಕ ಸಮಾಜದ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಅಧಿವೇಶನದಲ್ಲಿ ನಿರ್ಣಯ ಮಂಡಿಸಿದ ಖರ್ಗೆ, ಮತದಾನದ ಹಕ್ಕು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಆದರೆ, ಮತದಾರರ ಪಟ್ಟಿಯಿಂದ ವ್ಯಾಪಕವಾಗಿ ಹೆಸರುಗಳನ್ನು ತೆಗೆದುಹಾಕುವ ಮೂಲಕ ಜನರ ಹಕ್ಕುಗಳಿಗೆ ಧಕ್ಕೆ ತರಲಾಗುತ್ತಿದೆ ಎಂದು ಆರೋಪಿಸಿದರು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೂಚನೆಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಖರ್ಗೆ ಗಂಭೀರ ಆರೋಪ ಮಾಡಿದರು. ಚುನಾವಣಾ ಆಯೋಗದ ಸ್ವಾಯತ್ತತೆ ಮತ್ತು ನಿಷ್ಪಕ್ಷಪಾತ ಕಾರ್ಯನಿರ್ವಹಣೆ ಕುರಿತು ಪ್ರಶ್ನೆಗಳನ್ನು ಎತ್ತಿದರು.

ವಿಶೇಷ ತೀವ್ರ ಪರಿಷ್ಕರಣೆ ಬಳಿಕ ದೇಶಾದ್ಯಂತ 13.2 ಕೋಟಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಆರೋಪಿಸಿದ ಅವರು, ಹೊಸ ಮತದಾರರ ನೋಂದಣಿಗೆ ಸಂಬಂಧಿಸಿದ ನಮೂನೆ ಸಂಖ್ಯೆ 6ರ ಬದಲಾವಣೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಸೇರಿದಂತೆ ಆರು ಪ್ರಮುಖ ಅಂಶಗಳನ್ನು ನಿರ್ಣಯದಲ್ಲಿ ಪ್ರಸ್ತಾಪಿಸಿದರು.

ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಮೀರಾ ಕುಮಾರ, ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುತ್ತಿರುವ ಕುರಿತು ಸಾರ್ವಜನಿಕರಲ್ಲಿ ಆತಂಕವಿದೆ. ಈ ಬಗ್ಗೆ ಪ್ರಶ್ನಿಸಿದಾಗ ಪಾರದರ್ಶಕ ಉತ್ತರ ದೊರೆಯುತ್ತಿಲ್ಲ. ಚುನಾವಣಾ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸ ಉಳಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.

ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ನಾಗರಿಕರು, ವಿರೋಧ ಪಕ್ಷಗಳ ಸಂಸದರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ನಡುವೆ ಬಿಜೆಪಿ, ವಿರೋಧ ಪಕ್ಷಗಳ ಸಾಂಕೇತಿಕ ಅಧಿವೇಶನವನ್ನು ಟೀಕಿಸಿದೆ. ನೈಜ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗದ ರಾಹುಲ್ ಗಾಂಧಿ ಈಗ ತಮ್ಮದೇ ಸಂಸತ್ತನ್ನು ನಿರ್ಮಿಸಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದೆ.

ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲು ಇಂಡಿಯಾ ಒಕ್ಕೂಟ ಸಿದ್ಧತೆ ಮಾಡಿಕೊಂಡಿದ್ದು, ಅದರ ಪೂರ್ವಭಾವಿಯಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಆದರೆ, ಆಮ್ ಆದ್ಮಿ ಪಕ್ಷ ತಾನು ಈ ಒಕ್ಕೂಟದ ಭಾಗವಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಂಡಿಸಿರುವುದು ಸಾಂಕೇತಿಕ ಸಾರ್ವಜನಿಕ ನಿರ್ಣಯವಾಗಿದ್ದು, ಸಂಸತ್ತಿನಲ್ಲಿ ನಡೆಯುವ ಅಧಿಕೃತ ಪದಚ್ಯುತಿ ಪ್ರಕ್ರಿಯೆಯಲ್ಲ. ಚುನಾವಣಾ ಆಯೋಗದ ವಿರುದ್ಧದ ಆರೋಪಗಳು ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಅವುಗಳ ಸತ್ಯಾಸತ್ಯತೆ ಕಾನೂನುಬದ್ಧ ಪರಿಶೀಲನೆಗೆ ಒಳಪಟ್ಟಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಜಿನದತ್ತ ದೇಸಾಯಿ ನಿಧನಸಕ್ಕರೆ ಕನಿಷ್ಠ ಮಾರಾಟ ದರ 50 ರೂ.ಗೆ ಹೆಚ್ಚಿಸಲಿ: ಡಿ.ಕೆ. ಶಿವಕುಮಾರಘಟಪ್ರಭಾದಲ್ಲಿ ರೈತರ ಬಂದ್‌ಗೆ ಬೆಂಬಲ: ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತರೈತರ ಹೋರಾಟ ತೀವ್ರ: ಬೆಳಗಾವಿ, ಧಾರವಾಡ, ವಿಜಯಪುರದಲ್ಲಿ ಪ್ರತಿಭಟನೆದೀಪಾವಳಿ : ಪ್ರಯಾಣಿಕರಿಗಾಗಿ 2,600 ಹೆಚ್ಚುವರಿ ಬಸ್‌ಗಳ ವ್ಯವಸ್ಥೆಜ್ಞಾನೇಶ ಕುಮಾರ ವಿರುದ್ಧ ಜನತಾ ಮಹಾಭಿಯೋಗ: ಖರ್ಗೆ ನಿವಾಸದಲ್ಲಿ ಅಣಕು ಸಂಸತ್ಭಾರತೀಯ ವಾಯುಪಡೆಗೆ ನೂತನ ಸಾರಥಿ ಅಶುತೋಷ ದೀಕ್ಷಿತಶಿವಾನಂದ ನೀಲಣ್ಣನವರಗೆ ಇಡಿ ಬಿಗ್ ಶಾಕ್: ₹427 ಕೋಟಿ ಆಸ್ತಿ ಜಪ್ತಿಪಂಚತಾರಾ ಹೋಟೆಲ್ ಈಜುಕೊಳದಲ್ಲಿ ವಿದ್ಯುತ್ ಆಘಾತ: ಇಬ್ಬರು ವಿದೇಶಿಗರ ಸಾವುಹಾಲಿನ ದರ ಏರಿಕೆ ಅನಿವಾರ್ಯ: ಡಿ.ಕೆ. ಶಿವಕುಮಾರ ಸಮರ್ಥನೆ