LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯ ಆಯುಕ್ತರಿಂದ ಜಯನಗರ ವಾಣಿಜ್ಯ ಸಂಕೀರ್ಣ, ಪಾದಚಾರಿ ಒತ್ತುವರಿ ಪರಿಶೀಲನೆ

ಬೆಂಗಳೂರು:ಜಯನಗರ ವಾಣಿಜ್ಯ ಸಂಕೀರ್ಣ ಹಾಗೂ ಸದರಿ ಸಂಕೀರ್ಣಕ್ಕೆ ಹೊಂದಿಕೊಂಡಂತಿರುವ ಸುತ್ತ-ಮುತ್ತಲಿನ ಪ್ರದೇಶವನ್ನು ಪರಿಶೀಲಿಸಿ, ಜಯನಗರ ವಾಣಿಜ್ಯ ಸಂಕೀರ್ಣದ ಒಳ ಭಾಗದಲ್ಲಿ ವ್ಯಾಪಾರ ನಡೆಸುತ್ತಿರುವ ಮಳಿಗೆದಾರರು ಅನಧಿಕೃತವಾಗಿ ಪಾದಚಾರಿ ಮಾರ್ಗವನ್ನು ಒತ್ತುವರಿಪಡಿಸಿಕೊಂಡಿರುವುದರಿಂದ, ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವುದರಿಂದ, ಒತ್ತುವರಿಯನ್ನು ತೆರವುಗೊಳಿಸುವಂತೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಯನಗರ ವಾಣಿಜ್ಯ ಸಂಕೀರ್ಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ಬದಿಯ ವ್ಯಾಪಾರಿಗಳು ರಸ್ತೆ ಹಾಗೂ ಪಾದಚಾರಿ ಮಾರ್ಗವನ್ನು ಒತ್ತುವರಿಪಡಿಸಿಕೊಂಡಿರುವುದರಿಂದ, ಒತ್ತುವರಿಯನ್ನು ತೆರವುಗೊಳಿಸಲು ಹಾಗೂ ಅನಧಿಕೃತವಾಗಿ ವ್ಯಾಪಾರ ವಹಿವಾಟು ನಡೆಸುತ್ತಿರುವವರನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಮಳಿಗೆಗಳನ್ನು ತೆರವುಗೊಳಿಸಲು ಕ್ರಮವಹಿಸುವಂತೆ ಸೂಚನೆ ನೀಡಿದರು.

ಮುಂದಿನ ದಿನಗಳಲ್ಲಿ ಜಯನಗರ ವಾಣಿಜ್ಯ ಸಂಕೀರ್ಣದ ಒಳಭಾಗದಲ್ಲಿ ಹಾಗೂ ಹೊರಗಿನ ಪ್ರದೇಶಗಳಲ್ಲಿ ರಸ್ತೆ ಹಾಗೂ ಪಾದಚಾರಿ ಮಾರ್ಗಗಳು ವ್ಯಾಪಾರಸ್ಥರಿಂದಾಗಲಿ ಹಾಗೂ ಬೀದಿ ಬದಿಯ ವ್ಯಾಪಾರಿಗಳಿಂದಾಗಲಿ ಒತ್ತುವರಿಯಾಗದಂತೆ ಕ್ರಮವಹಿಸಲು ಗಸ್ತಿನಲ್ಲಿರುವ ಮಾರ್ಷಲ್‌ಗಳಿಗೆ ಸೂಚಿಸಲಾಯಿತು.

ಜಯನಗರ ವಾಣಿಜ್ಯ ಸಂಕೀರ್ಣದ ಮೀನು ಮಾರುಕಟ್ಟೆಯ ಸುತ್ತಲಿನ ಪ್ರದೇಶಗಳನ್ನು ಪರಿಶೀಲಿಸಿ, ವಿದ್ಯುತ್ ದೀಪ ವ್ಯವಸ್ಥೆ ಇಲ್ಲದೇ ಇರುವುದನ್ನು ಗಮನಿಸಿ ಕೂಡಲೆ ವಿದ್ಯುತ್ ದೀಪಗಳನ್ನು ಅಳವಡಿಸಿ, ಅನಧಿಕೃತವಾಗಿ ಒಳಬಾರದಂತೆ ಪ್ರವೇಶ ನಿರ್ಭಂದಗೊಳಿಸಲು ಕ್ರಮವಹಿಸಲುವ ಸೆ ಸೂಚಿಸಿದರು.

ಜಯನಗರ ವಾಣಿಜ್ಯ ಸಂಕೀರ್ಣದ ಬಳಿ ನಿರ್ಮಿಸಬೇಕಾಗಿರುವ ಬ್ಲಾಕ್-2, 3 & 4 ಕಟ್ಟಡದ ಸ್ಥಳವನ್ನು ಪರಿಶೀಲಿಸಿ, ಕಾಮಗಾರಿಯು ಪ್ರಾರಂಭವಾಗದೇ ಇರುವ ಹಿನ್ನಲೆಯಲ್ಲಿ ಬಿಡಿಎ ರವರೊಂದಿಗೆ ಸಮಾಲೋಚನೆ ಕೈಗೊಂಡು ವರದಿಯನ್ನು ಸಲ್ಲಿಸುವಂತೆÉ ಸೂಚಿಸಿದರು.

ಈ ವೇಳೆ ಶಾಸಕರಾದ ಶ್ರೀ ಸಿ.ಕೆ.ರಾಮಮೂರ್ತಿ, ದಕ್ಷಿಣ ವಲಯದ ವಲಯ ಆಯುಕ್ತಾದ ವಿನೋತ್ ಪ್ರಿಯಾ, ಜಂಟಿ ಆಯುಕ್ತರಾದ ಡಾ. ಕೆ. ಜಗದೀಶ್ ನಾಯ್ಕ್, ಮುಖ್ಯ ಅಭಿಯಂತರರಾದ ರಾಜೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್ಫೋನ್ ಕದ್ದಾಲಿಕೆ; ಸಿಎಂ ಸಿದ್ದರಾಮಯ್ಯ ಸುಳ್ಳಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಗರದ ಐದು ವಿಭಾಗ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮತನಾಡಿದ ಜಿಬಿಎ ಅಧ್ಯಕ್ಷರುಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್