Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bellary

 ಎರಡು ದಿನಗಳ ಕಾಲ ಹಾನಗಲ್ಲ ಕುಮಾರಸ್ವಾಮಿ ಹಾಗೂ ಸಂಗನಬಸವ ಸ್ವಾಮಿಗಳ ಜಯಂತೋತ್ಸವ ಕಾರ್ಯಕ್ರಮ

ಬಳ್ಳಾರಿ, ಅ. 03::ನಗರದ  ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಸಂಸ್ಥಾನಮಠದಲ್ಲಿ ಅಕ್ಟೋಬರ್ 3 ಮತ್ತು 4ರಂದು ಶ್ರೀ ಹಾನಗಲ್ಲ ಕುಮಾರ ಮಹಾಶಿವಯೋಗಿಗಳ 159ನೇ ಹಾಗೂ ಶ್ರೀ ಜಗದ್ಗುರು ಡಾ. ಸಂಗನಬಸವ ಮಹಾಸ್ವಾಮಿ ಅವರ 88ನೇ ಜಯಂತ್ಯೋತ್ಸವದ ಪ್ರವಚನದ ಮಂಗಲ ಮಹೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಯಂತ್ಯೋತ್ಸವ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ. 
 ಪತ್ರಿಕಾ ಪ್ರಕಟಣೆ ನೀಡಿರುವ ಜಯಂತೋತ್ಸವ ಸಮಿತಿಯ ಪದಾಧಿಕಾರಿಗಳು,  ನಿರಂಜನ ಜಗದ್ಗುರು ಕೊಟ್ಟೂರು ಬಸವಲಿಂಗ ಮಹಾಸ್ವಾಮೀಜಿಗಳ ಪಾವನ ಸನ್ನಿಧಾನ ಹಾಗೂ ಅಪ್ಪಣೆಯ ಮೇರೆಗೆ ಈ ಸಮಾರಂಭಗಳು ನಡೆಯುತ್ತಿದ್ದು, ಅಕ್ಟೋಬರ್ 3ರ ಶನಿವಾರ ಸಂಜೆ 5:30ಕ್ಕೆ ಸೋಮಸಮುದ್ರ ಹಾಗೂ ಶ್ರೀಧರಗಡ್ಡೆ ಗ್ರಾಮದಿಂದ ಶ್ರೀಮಠಕ್ಕೆ ಭಕ್ತಾಧಿಗಳು ಪಾದಯಾತ್ರೆಯಲ್ಲಿ ಆಗಮಿಸಲಿದ್ದಾರೆ. 
ಪಾದಯತ್ರೆಯಲ್ಲಿ ಆಗಮಿಸಿದ ಭಕ್ತಾಧಿಗಳನ್ನು ಶ್ರೀಮಠದಲ್ಲಿ ಮಂಗಳವಾದ್ಯಗಳಿಂದ ಸ್ವಾಗತಿಸಿ ಶ್ರೀಜಗದ್ಗುರು ಕೊಟ್ಟೂರೇಶ್ವರ ರಥೋತ್ಸವವನ್ನು ನಡೆಸಲಾಗುತ್ತದೆ. ನಂತರ, ‘ಜೀವನದರ್ಶನ’ ಪ್ರವಚನ ಮಂಗಲಗೊಳ್ಳಲಿದೆ. 
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಅಧ್ಯಕ್ಷರಾದ ಹಿರಿಯ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ ಮಹಾದೇವ ಬಿದರಿ ಅವರಿಗೆ ಗೌರವ ಸನ್ಮಾನ. ಸಂಸದ ಈ. ತುಕಾರಾಂ, ಶಾಸಕರಾದ ನಾರಾ ಭರತರೆಡ್ಡಿ, ಜಿ.ಎನ್. ಗಣೇಶ್, ಬಿ.ಎಂ. ನಾಗರಾಜ್, ಬಿ. ನಾಗೇಂದ್ರ ಹಾಗೂ ಎಂಎಲ್ಸಿ ವೈ.ಎಂ. ಸತೀಶ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಅಕ್ಟೋಬರ್ 4ರ ಭಾನುವಾರ ಬೆಳಗ್ಗೆ 10ಗಂಟೆಗೆ ಶ್ರೀಜಗದ್ಗುರು ಕೊಟ್ಟೂರುಸ್ವಾಮಿ ಸಂಸ್ಥಾನಮಠದ ಅಕ್ಕನ ಬಳಗದ ಸಹಯೋಗದಲ್ಲಿ
ಕುರುಗೋಡು ವಿರಕ್ತಮಠದ ನಿರಂಜನ ಪ್ರಭು ಸ್ವಾಮೀಜಿ, ಶ್ರೀಧರಗಡ್ಡೆ ವಿರಕ್ತಮಠದ ಮರಿಕೊಟ್ಟೂರು ದೇಶಿಕರು ಸ್ವಾಮೀಜಿ ಸಮ್ಮುಖದಲ್ಲಿ 1111 ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ. 
ಶಾಸಕಿ ಈ. ಅನ್ನಪೂರ್ಣ ತುಕಾರಾಂ ಸೇರಿದಂತೆ ಹಲವು ಮಹಿಳಾ ಜನಪ್ರತಿನಿಧಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ನಂತರ ಪೂಜ್ಯದ್ವಯರ ಜಯಂತಿ ಮಹೋತ್ಸವ ನೆರವೇರಲಿದೆ. ಕಲ್ಯಾಣಸ್ವಾಮಿ ಮಠದ ಕಲ್ಯಾಣ ಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದು, ವಿರಕ್ತ ಮಠದ ಸಿದ್ದೇಶ್ವರ ಸ್ವಾಮೀಜಿ ಸಮ್ಮುಖದಲ್ಲಿ ನೆರವೇರಲಿದೆ. 
ಮಾಜಿ ಶಾಸಕರಾದ ಬಿ. ಶ್ರೀರಾಮುಲು, ಜಿ. ಸೋಮಶೇಖರರೆಡ್ಡಿ, ಮಾಜಿ ಸಚಿವರಾದ ಅಲ್ಲಂ ವೀರಭದ್ರಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್ ಹಾಗೂ ಇತರ ಮುಖಂಡರು ಉಪಸ್ಥಿತರಿರಲಿದ್ದಾರೆ. ಈ ಕಾರ್ಯಕ್ರಮಕ್ಕೆ ಜಿಲ್ಲೆ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜಯಂತಿ ಮಹೋತ್ಸವ ಸಮಿತಿ ಕೋರಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ