
ಬೆಂಗಳೂರಿನ ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ನೇತೃತ್ವದಲ್ಲಿ ನಡೆದ 50 ವಿಧಾನಸಭೆ ಕ್ಷೇತ್ರಗಳ BLA-1 ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)ಯ ಮೊದಲ ಹಂತದ ಕಾರ್ಯಾಗಾರಕ್ಕೆ ಚಾಲನೆ ನೀಡಿ. BLA ( ಬೂತ್ ಮಟ್ಟದ ಏಜೆಂಟ್)ಗಳು ನಿರ್ವಹಿಸಬೇಕಾದ ಕಾರ್ಯಗಳ ಕುರಿತು ತಿಳಿಸಲಾಯಿತು.
ಇದೇ ವೇಳೆ ಚುನಾವಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು, ನಕಲು ಹಾಗೂ ದೋಷಪೂರಿತ ಮತದಾರರನ್ನು ತೆಗೆದು ಹಾಕಿ ಪಟ್ಟಿಯನ್ನು ಶುದ್ಧೀಕರಿಸುವುದು SIR ನ ಪ್ರಮುಖ ಗುರಿ. ಈ ಮೂಲಕ 'ಒಬ್ಬ ವ್ಯಕ್ತಿ; ಒಂದು ಮತ' ಎಂಬ ಪ್ರಜಾಪ್ರಭುತ್ವದ ತತ್ವವನ್ನು ಬಲಪಡಿಸುತ್ತದೆ ಎಂದು ತಿಳಿಸಿ, ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಬಗ್ಗೆ ಚುನಾವಣಾ ಆಯೋಗವು ಕೈಗೊಳ್ಳಲಿರುವ ಕಾರ್ಯಗಳು, ರಾಜಕೀಯ ಪಕ್ಷವಾಗಿ ನಮ್ಮ ಜವಾಬ್ದಾರಿ , ಬೂತ್ ಮಟ್ಟದ ಏಜೆಂಟ್ ಗಳು ನಿರ್ವಹಿಸಬೇಕಾದ ಕಾರ್ಯಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಕೋರ್ ಕಮಿಟಿ ಅಧ್ಯಕ್ಷರಾದ ಎಂ. ಕೃಷ್ಣಾರೆಡ್ಡಿ ಅವರು, ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ ಅವರು, ತಿಪ್ಪೇಸ್ವಾಮಿ ಅವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಅಧ್ಯಕ್ಷರು, ತಾಲ್ಲೂಕು ಅಧ್ಯಕ್ಷರು ಹಾಗೂ ಪಕ್ಷದ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು ಭಾಗಿಯಾಗಿದ್ದರು.