ಬೆಂಗಳೂರು: ಅಧಿಕಾರದ ಕುರ್ಚಿಗಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಮ್ಮ ವಿರುದ್ಧದ ಬಣದ ನಾಯಕರನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸುತ್ತಿದ್ದಾರೆ ಎಂದು ಜೆಡಿಎಸ್ (JDS) ತೀವ್ರ ಆರೋಪಿಸಿದೆ. ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಜೆಡಿಎಸ್, ಕಾಂಗ್ರೆಸ್‌ನಿಂದ ಮುಸ್ಲಿಂ ನಾಯಕ ಅಬ್ದುಲ್ ಜಬ್ಬರ್ ಅಮಾನತು ವಿಚಾರಕ್ಕೆ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷದೊಳಗೆ ಸಾಮಾಜಿಕ ಅನ್ಯಾಯ ನಡೆಯುತ್ತಿದೆ ಎಂದು ಹೇಳಿದ ಜೆಡಿಎಸ್, ಮೊದಲು ಪರಿಶಿಷ್ಟ ಸಮುದಾಯದ ವಾಲ್ಮೀಕಿ ನಾಯಕ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ತೆಗೆದುಹಾಕಲಾಗಿತ್ತು, ಇದೀಗ ಅಲ್ಪಸಂಖ್ಯಾತ ಮುಖಂಡ ಅಬ್ದುಲ್ ಜಬ್ಬರ್ ಅವರನ್ನು ಪಕ್ಷದಿಂದ ಹೊರಹಾಕಲಾಗಿದೆ ಎಂದು ಟೀಕಿಸಿದೆ. ಡಿಕೆ ಶಿವಕುಮಾರ್ ತಮ್ಮ ಅಧಿಕಾರಾಸೆಗಾಗಿ ವಿರೋಧಿ ನಾಯಕರನ್ನು ಒಂದೊಬ್ಬರಂತೆ ರಾಜಕೀಯವಾಗಿ ಮುಚ್ಚಿಹಾಕುತ್ತಿದ್ದಾರೆ ಎಂದು ಆರೋಪಿಸಿದೆ. ಕಾಂಗ್ರೆಸ್‌ನಲ್ಲಿ ನಾಯಕತ್ವದ ವಿಷಯದಲ್ಲಿ ದ್ವಂದ್ವ ನೀತಿ ಇದೆ; ಅಧ್ಯಕ್ಷರು ತಪ್ಪು ಮಾಡಿದರೆ ಕ್ಷಮೆ ಸಾಕಾಗುತ್ತದೆ, ಆದರೆ ದಲಿತ ಮತ್ತು ಅಲ್ಪಸಂಖ್ಯಾತ ನಾಯಕರಿಗೆ ಕಠಿಣ ಶಿಕ್ಷೆ ನೀಡಲಾಗುತ್ತಿದೆ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ. ಹಣಬಲ ಮತ್ತು ಪ್ರಭಾವದಿಂದ ಡಿಕೆಶಿ ತಮ್ಮ ಸ್ವಾರ್ಥಕ್ಕಾಗಿ ತಳಮಟ್ಟದ ಹಿಂದುಳಿದ ವರ್ಗದ ನಾಯಕರನ್ನು ಗುರಿಯಾಗಿಸುತ್ತಿದ್ದು, ಅವರ ರಾಜಕೀಯ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿ, ಇದು ಕಾಂಗ್ರೆಸ್‌ನ ನಿಜವಾದ ಮುಖ ಎಂದು ಟೀಕಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.