LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಸಿದ್ಧತೆ: ಜೆಡಿಎಸ್ ಮಹತ್ವದ ಸಭೆ

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯು ಮುಂಬರುವ ಫೆಬ್ರುವರಿ 16ರಂದು ನಡೆಯಲಿದ್ದು, ಆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಜನತಾದಳ (ಜಾತ್ಯತೀತ) ಪಕ್ಷದ ಮುಖಂಡರ ಸಭೆ, ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ನಡೆಸಲಾಯಿತು.

ಜೆಡಿಎಸ್ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಅವರು ಕಣಕ್ಕೆ ಇಳಿಯುತ್ತಿದ್ದು, ಅವರ ಗೆಲುವಿಗೆ ಪಕ್ಷದ ಕಾರ್ಯಕರ್ತರು, ಮುಖಂಡರು ಶ್ರಮಿಸಬೇಕು ಎಂದು ಸಭೆಯಲ್ಲಿ ಹೆಚ್.ಎಂ.ರಮೇಶ್ ಗೌಡ ಕರೆ ನೀಡಿದರು.

ಅಲ್ಲದೆ, ಮಿತ್ರಪಕ್ಷವಾದ ಬಿಜೆಪಿ ಕಾರ್ಯಕರ್ತರು, ಮುಖಂಡರನ್ನು ಕೂಡ ವಿಶ್ವಾಸಕ್ಕೆ ತೆಗೆದುಕೊಂಡು ನಾವು ಕೆಲಸ ಮಾಡಬೇಕಿದೆ. ಕಾಂಗ್ರೆಸ್ ದುರಾಡಳಿತದ ವಿರುದ್ಧ ಶಿಕ್ಷಕರು ರೋಸಿ ಹೋಗಿದ್ದಾರೆ. ಶಿಕ್ಷಣ ಹಾಗೂ ಶಿಕ್ಷಕರ ಬಗ್ಗೆ ಸರ್ಕಾರದ ಅಸಡ್ಡೆ ಬಹಳ ಅಪಾಯಕಾರಿ ಆಗಿದೆ. ಈ ಎಲ್ಲಾ ಶಿಕ್ಷಕ ಬಂಧುಗಳ ಗಮನಕ್ಕೆ ತರಬೇಕು ಎಂದು ಇದೇ ವೇಳೆ ಪಕ್ಷದ ಹಿರಿಯ ಮುಖಂಡರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ ಅವರು ಹೇಳಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷೆ ಹಾಗೂ ಮಾಜಿ ಸಚಿವರಾದ ಲೀಲಾದೇವಿ ಆರ್ ಪ್ರಸಾದ್ ಅವರು ಮಾತನಾಡಿದರು.

ಪಕ್ಷದ ಅಭ್ಯರ್ಥಿ ಎ.ಪಿ.ರಂಗನಾಥ್, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಹಿರಿಯ ಮುಖಂಡರಾದ ಮಂಜುನಾಥ್, ರಾಜ್ಯ ಜೆಡಿಎಸ್ ನ ಪ್ರಧಾನ ಕಾರ್ಯದರ್ಶಿ ಸಯ್ಯದ್ ರೋಷನ್ ಅಬ್ಬಾಸ್, ಯುವ ಮುಖಂಡ ಪ್ರವೀಣ್ ಸೇರಿದಂತೆ ಹಲವಾರು ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ – ದೂರು/ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆಚಲನಚಿತ್ರ ಪೋಷಕ ಕಲಾವಿದರ ಸಂಘದ ಚುನಾವಣೆಗೆ ನ್ಯಾಯಾಲಯದ ತಡೆ