LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಪಕ್ಷ ಛದ್ಮವೇಷದಾರಿ, ಗೊಸುಂಬೆ ಉರುಫ್ ಊಸರವಳ್ಳಿ ಎಂದು ಕುಟುಕಿದ ಜೆಡಿಎಸ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ ಭೇಟಿ ಬಗ್ಗೆ ಲಘುವಾಗಿ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ಕೊಟ್ಟಿರುವ ಜೆಡಿಎಸ್; ಆ ಪಕ್ಷವನ್ನು ಗೊಸುಂಬೆ, ಊಸರವಳ್ಳಿ ಎಂದು ಜರೆದಿದೆ.

ಗೊಸುಂಬೆ ಉರುಫ್ ಊಸರವಳ್ಳಿ ಕಾಂಗ್ರೆಸ್ ಪಕ್ಷಕ್ಕೆ ಒಳಗೊಂದು ಹೊರಗೊಂದು ವೇಷ. ಈ ದೇಶದಲ್ಲಿ ಯಾವುದಾದರೂ ಛದ್ಮವೇಷದಾರಿ ಪಕ್ಷವಿದ್ದರೆ ಅದು ಕಾಂಗ್ರೆಸ್ ಮಾತ್ರ. ಕುಮಾರಸ್ವಾಮಿ ಅವರು ಹಾಗಲ್ಲ. ಏನಾದರೂ ಹೇಳಬೇಕೆಂದರೆ; ನೇರ, ದಿಟ್ಟ, ನಿಷ್ಠುರ. ಏನೇ ಬಂದರೂ ಎದುರಿಸುವ ಕೆಚ್ಚು ಅವರದ್ದು, ಪಲಾಯನ ಮಾಡುವ ಪೈಕಿ ಅವರಲ್ಲ ಎಂದು ಕಿಡಿಕಾರಿದೆ ಜೆಡಿಎಸ್.

RSS ಬಗ್ಗೆ ಕುಮಾರಸ್ವಾಮಿ ಅವರು ಹಿಂದೆ ಮಾತನಾಡಿದ್ದಾರೆ, ಬರೆದಿದ್ದಾರೆ.. ನಿಜ. ಟೀಕೆ ಮಾಡಿದ್ದಾರೆನ್ನುವುದೂ ಹೌದು. ಹಾಗೆಯೇ, ಶ್ರೀ ಕಲ್ಲಡ್ಕ ಪ್ರಭಾಕರ ಭಟ್ಟರು ನಡೆಸುತ್ತಿರುವ ಶ್ರೀರಾಮ ವಿದ್ಯಾಲಯಕ್ಕೆ ಭೇಟಿ ನೀಡಿದಾಗಲೂ ಅವರು ಏನು ಹೇಳಬೇಕೋ ಅದನ್ನೇ ಹೇಳಿದ್ದಾರೆ. ಕಾಮಾಲೆ ಕಣ್ಣಿನ, ಕುತ್ಸಿತ ಕಿವಿಯ ಕಾಂಗ್ರೆಸ್ ಗೆ ಅದೆಲ್ಲಾ ಗೊತ್ತಾಗುವುದೇ ಇಲ್ಲ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಪ್ರಭಾಕರ ಭಟ್ಟರ ಶಾಲೆಯಲ್ಲಿ, ನಿನ್ನೆ ದಿನ ಮಂಡ್ಯದಲ್ಲಿ ಕುಮಾರಸ್ವಾಮಿ ಅವರು ಮಾಡಿರುವ ಭಾಷಣಗಳನ್ನು ಕಾಂಗ್ರೆಸ್ಸಿಗರು ಕೇಳಲಿ. ಕೊಳೆತು ನಾರುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಕೊಚ್ಚೆಯೇ ಸಹ್ಯವಾಗಿದೆಯೇ ಹೊರತು ಸತ್ಯವಲ್ಲ. ಶ್ರೀ ವೀರೇಂದ್ರ ಪಾಟೀಲರ ಕಾಲದಲ್ಲಿ (1989) ಚನ್ನಪಟ್ಟಣ, ರಾಮನಗರದಲ್ಲಿ ಬೆಂಕಿ ಹಾಕಿ ರಾಜಕೀಯ ಬೇಳೆ ಬೇಯಿಸಿಕೊಂಡ ಗಿರಾಕಿಗಳು ನೀವು? ಹಿರಿಯರಾದ ವೀರೇಂದ್ರ ಪಾಟೀಲರ ಜೀವಕ್ಕೆ ಕ್ಷೋಭೆ ಕೊಟ್ಟ ಆಸಾಮಿಗಳೂ ನೀವೇ? ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ ಎಂದಿದೆ ಜೆಡಿಎಸ್.

ಕೇಸರಿ ಬಗ್ಗೆ ಹೇಳಿದ್ದೀರಿ, ಸರಿ. ಅದು ನಮ್ಮ ಸಂಪ್ರದಾಯ, ಸಂಸ್ಕೃತಿಯ ಪ್ರತೀಕ. ನಮ್ಮ ನಂಬಿಕೆಯ ಹೆಗ್ಗುರುತು. ಸ್ವಧರ್ಮದ ಬಗ್ಗೆ ಗೌರವವೇ ಇಲ್ಲದವರಿಗೆ, ಓಲೈಕೆ ಮಾಡಿಕೊಂಡೇ ಒಲೆ ಉರಿಸಿಕೊಳ್ಳುವವರಿಗೆ ಆಚಾರ ವಿಚಾರಗಳ ಪಾವಿತ್ರ್ಯತೆ ಎಲ್ಲಿ ಗೊತ್ತಾಗಬೇಕು? ಕೊಳಕು ಮನಸ್ಸಿನವರಿಗೆ ಕೇಸರಿಯೂ ರಾಜಕೀಯದ ಸರಕು!! ಎಂದು ಜೆಡಿಎಸ್ ಪಕ್ಷವು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.

ಕುಮಾರಸ್ವಾಮಿ ಅವರು RSS ಕಾಳಾಲೋ, ಸೇವಕರೋ ಎನ್ನುವುದು ಕಾಲವೇ ನಿರ್ಣಯಿಸುತ್ತದೆ. ಆದರೆ, ನಿಮ್ಮ ಸಿದ್ದಹಸ್ತನಂತೆ ಉಂಡ ಮನೆಗೆ ಎರಡು ಬಗೆಯುವ ಪೈಕಿ ಅವರಲ್ಲ. ಮಾತೃಭೂಮಿಯನ್ನು, ಪರಂಪರಾಗತ ಆಚಾರ-ವಿಚಾರ, ನಂಬಿಕೆಗಳಿಗೆ ಕೊಳ್ಳಿ ಇಟ್ಟು ಜಾತಿ-ಧರ್ಮಗಳ ನಡುವೆ ವಿಷಪ್ರಾಶನ ಮಾಡಿ, ಅದನ್ನೇ ಅಮಲೇರಿಸಿಕೊಳ್ಳುವ ಗತಿಗೆಟ್ಟ ಕಾಂಗ್ರೆಸ್ ಮನಸ್ಥಿತಿಗೆ ಆ ಹನುಮದೇವರೇ ಅಂತ್ಯ ಕಾಣಿಸುತ್ತಾನೆ. ಇದು ಸತ್ಯ.. ಸತ್ಯ ಎಂದು ಹೇಳಿದೆ ಜೆಡಿಎಸ್.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ