ಮೈಸೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಬೆರಳಚ್ಚು ನಕಲುಗಾರರ(Typist-Copyist) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಯ ವಿವರಗಳು:
- ಹುದ್ದೆಯ ಹೆಸರು: ಬೆರಳಚ್ಚು ನಕಲುಗಾರರು (Typist-Copyist)
- ಒಟ್ಟು ಖಾಲಿ ಹುದ್ದೆಗಳು: 03
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28.04.2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31.05.2026 (ರಾತ್ರಿ 11:59 ರವರೆಗೆ)
- ಎಸ್.ಬಿ.ಐ (SBI) ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 02.06.2026
ಅರ್ಜಿಸಲ್ಲಿಸುವ ವಿಧಾನ: ಅರ್ಹ ಅಭ್ಯರ್ಥಿಗಳು ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು:
- https://mysuru.dcourts.gov.in/notice-category/recruitments/
- https://mysuru.dcourts.gov.in/Judges/online-recruitment/
ಸಂಪರ್ಕ ಮಾಹಿತಿ: ದೂರವಾಣಿ ಸಂಖ್ಯೆ: 0821-2330453
ಗಮನಿಸಿ: ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾದ ಸಂಪೂರ್ಣ ಮಾರ್ಗಸೂಚಿಗಳನ್ನು ಮತ್ತು ಅರ್ಹತಾ ಮಾನದಂಡಗಳನ್ನು ಓದಿಕೊಳ್ಳಲು ಸೂಚಿಸಲಾಗಿದೆ.
