ಬೆಳಗಾವಿ :
ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜು.15 ರಂದು ಬೆಳಿಗ್ಗೆ 10ರಿಂದ ಮದ್ಯಾಹ್ನ 1 ಗಂಟೆಯವರೆಗೆ, ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಯಿಂದ ನೇರ ಸಂದರ್ಶನವನ್ನು ಕೋಟೆ ರಸ್ತೆಯ ಪುಲ್‌ಬಾಗ್ ಗಲ್ಲಿಯಲ್ಲಿಯ ಬ್ರಹ್ಮ ಸರ್ಜಿಕಲ್ ಫಾರ್ಮಾ ಅವರ ಸಾಯಿ ನಿಲಯದ ಮೊದಲನೆ ಮಹಡಿಯಲ್ಲಿ ಆಯೋಜಿಸಲಾಗುವುದು. ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ. ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿ ಭಾಗವಹಿಸಲಿವೆ
ಹೆಚ್ಚಿನ ಮಾಹಿತಿಗಳಿಗಾಗಿ ಮೊಬೈಲ್ ಸಂಖ್ಯೆ: ೭೯೭೫೮೫೬೫೬೬, ಗೆ ಸಂಪರ್ಕಿಸಬಹುದು ಎಂದು ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.