LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಳೆ ಫೆಬ್ರವರಿ 27 ರಂದು ದೊಡ್ಡಬಳ್ಳಾಪುರದಲ್ಲಿ ಉದ್ಯೋಗ ಮೇಳ

 

ಬೆಂ.ಗ್ರಾ. ಜಿಲ್ಲೆ, : ದೊಡ್ಡಬಳ್ಳಾಪುರ ಟೌನ್ ನ ಮಾದಗೊಂಡನಹಳ್ಳಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 27 ರಂದು "ಉದ್ಯೋಗಮೇಳ" ಆಯೋಜಿಲಾಗಿದ್ದು ಉದ್ಯೋಗಾಕಾಂಕ್ಷಿಗಳು ಆನ್ಲೈನ್ ಮೂಲಕ ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದೊಡ್ಡಬಳ್ಳಾಪುರ ತಾಲೂಕು ಆಡಳಿತ, ದೊಡ್ಡಬಳ್ಳಾಪುರ ಕೈಗಾರಿಕೆಗಳ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದೊಡ್ಡಬಳ್ಳಾಪುರ ಇವರುಗಳ ಸಂಯುಕ್ತಾಶ್ರಯದಲ್ಲಿ ಉದ್ಯೋಗಮೇಳ ಆಯೋಜಿಸಲಾಗುತ್ತಿದ್ದು ಉದ್ಯೋಗಮೇಳದಲ್ಲಿ ಅಂದಾಜು100 ಕ್ಕ್ಕೂಹೆಚ್ಚು ನಿಯೋಜಕರು/ಕಂಪನಿಗಳು ಭಾಗವಹಿಸಿ ಖಾಲಿ ಇರುವ 3000ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಉದ್ಯೋಗಮೇಳದಲ್ಲಿ ಭಾಗವಹಿಸುವ ಉದ್ಯೋಗಕಾಂಕ್ಷಿಗಳು QR Code : ಅಥವಾ https://bangalorerural.nic.in ಬಳಸಿಕೊಂಡು ಆನ್ಲೈನ್ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಉದ್ಯೋಗಮೇಳದ ದಿನವು ಕೂಡ "ಅಭ್ಯರ್ಥಿಗಳ ನೋಂದಣಿ ಕೌಂಟರ್" ಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಭಾಗವಹಿಸಬಹುದು.

10ನೇ ತರಗತಿಗಿಂತ ಕಡಿಮೆ, 10ನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್, ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ಮತ್ತು ವಿವಿಧ ತರಬೇತಿ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ಪಡೆದ ಅಭ್ಯರ್ಥಿಗಳು ಭಾಗವಹಿಸಬಹುದು.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಟ 5 ಬಯೋಡಾಟ(ಸ್ವ-ವಿವರ) ಗಳ ಪ್ರತಿಗಳೊಂದಿಗೆ ಭಾಗವಹಿಸಬಹುದಾಗಿದ್ದು ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ ಎಂದು ತಿಳಿಸಿದ್ದಾರೆ.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026