10ನೇ ತರಗತಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದವರಿಗೆ ಉದ್ಯೋಗ ಅವಕಾಶ.!
ಕೊಪ್ಪಳ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಹಾಗೂ 1ಎಂ1ಬಿ ಸಂಸ್ಥೆಯ ಸಹಯೋಗದಲ್ಲಿ ಕೊಪ್ಪಳ ಜಿಲ್ಲೆಯ ತಳಕಲ್‌ನಲ್ಲಿರುವ ವಿಟಿಯು ಸ್ನಾತಕೋತ್ತರ ಮತ್ತು ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಜನವರಿ 25 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.
ಉದ್ಯೋಗಮೇಳದಲ್ಲಿ 30 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, 10ನೇ ತರಗತಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಉದ್ಯೋಗಮೇಳದ ನೇರ ಸಂದರ್ಶನದಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದು. ಆಸಕ್ತರು ಜನವರಿ 23, 24 ರಂದು ಪೂರ್ವ ನೋಂದಣಿ ಮಾಡಿಕೊಳ್ಳಬಹುದು ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.