LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸುತ್ತೂರು: ಜೆ.ಎಸ್.ಎಸ್ ಉಚಿತ ವಸತಿ ಶಾಲೆಗೆ ಅರ್ಜಿ ಆಹ್ವಾನ


ಬಳ್ಳಾರಿ,ಮಾ.31

ಮೈಸೂರಿನ ಸುತ್ತೂರು ಕ್ಷೇತ್ರದ ಜೆ.ಎಸ್.ಎಸ್ ಉಚಿತ ವಸತಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮೀಣ ಭಾಗದ ಬಡ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ, 1 ರಿಂದ 8ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ ಪೋಷಕರು ಶಾಲೆಯ ಅಧಿಕೃತ ವೆಬ್‌ಸೈಟ್‌ಗಳಾದ www.jssschoolsuttur.org ಅಥವಾ www.jssonline.org ಮೂಲಕ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ.

ಏಪ್ರಿಲ್ 2 ರಿಂದ ಅರ್ಜಿ ವಿತರಣೆ ಪ್ರಾರಂಭ, ಮೇ 16 ಅರ್ಜಿ ಸಲ್ಲಿಸಲು ಕೊನೆಯ ದಿನ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ “ಮುಖ್ಯೋಪಾಧ್ಯಾಯರು, ಜಿ.ಎಸ್.ಎಸ್. ಸಂಸ್ಥೆಗಳು, ಸುತ್ತೂರು, ನಂಜನಗೂಡು ತಾಲ್ಲೂಕು, ಮೈಸೂರು ಜಿಲ್ಲೆ – 571129” ಈ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.

ಅರ್ಜಿಯ ಜೊತೆಗೆ ವಿದ್ಯಾರ್ಥಿಯ ಹಿಂದಿನ ತರಗತಿಯ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ ಹಾಗೂ ಆಧಾರ್ ಕಾರ್ಡ್ ಪ್ರತಿಗಳನ್ನು ಲಗತ್ತಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮೊ.7411486938, ದೂ.08221-232332 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು